ಕಲ್ಯಾಣ ಕರ್ನಾಟಕ ಉತ್ಸವ: ಒಟ್ಟು 91 ಬಸ್‍ಗಳ ಕಾರ್ಯಾಚರಣೆ

0
20

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಇದೇ ಫೆಬ್ರವರಿ 24, 25 ಹಾಗೂ 26 ರವರೆಗೆ ಮೂರು ದಿನಗಳ ಕಾಲ ಕಲ್ಯಾಣ ಕರ್ನಾಟಕ ಉತ್ಸವ-2023 ಜರುಗಲಿದೆ. ಈ ಉತ್ಸವ ಸಂದರ್ಭದಲ್ಲಿ ಸಾರ್ವಜನಿಕರು ಉಚಿತವಾಗಿ ಪ್ರಯಾಣಿಸಲು ಕಲಬುರಗಿ ನಗರ, ಜಿಲ್ಲೆ ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ ಒಟ್ಟು 91 ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕರು ಹಾಗೂ ಕಲ್ಯಾಣ ಕರ್ನಾಟಕ ಉತ್ಸವ ಸಮಿತಿಯ ಅಧ್ಯಕ್ಷರಾದ ಎಂ. ರಾಚಪ್ಪ ಅವರು ತಿಳಿಸಿದ್ದಾರೆ.

ಕಲಬುರಗಿ ನಗರ (ಕೇಂದ್ರ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಸುಪರ ಮಾರ್ಕೆಟ್, ಗಂಜ್, ರಾಮಮಂದಿರ, ಆಳಂದ ಚೆಕ್ ಪೋಸ್ಟ್, ಹೈಕೋರ್ಟ್) ಹಾಗೂ ಸುತ್ತಮುತ್ತಲಿನ ವಿವಿಧ ಭಾಗ (ಫರಹತಾಬಾದ ಮಾರ್ಗದ ಹಳ್ಳಿಗಳು, ಪಟ್ಟಣ ವೃತ್ತದ ಹಾಗೂ ಮೆಳಕುಂದ ವೃತ್ತದ ಹಳ್ಳಿಗಳು) ಗಳಿಂದ 65 ಬಸ್‍ಗಳು, ಕಲಬುರಗಿ ಜಿಲ್ಲೆಯ ಪ್ರತಿ ತಾಲೂಕಿನಿಂದ 02 ಬಸ್‍ಗಳಂತೆ ಒಟ್ಟು 20 ಬಸ್‍ಗಳು ಹಾಗೂ ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಪ್ರತಿ ಜಿಲ್ಲೆಯಿಂದ 01 ಬಸ್‍ಯಂತೆ 06 ಬಸ್‍ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ. ಸಾರ್ವಜನಿಕರು ಈ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Contact Your\'s Advertisement; 9902492681

ಸಾರ್ವಜನಿಕರ ಬೇಡಿಕೆಗನುಗುಣವಾಗಿ ನಿಗಮದಿಂದ ಟಿಕೇಟ್ ಆಧಾರದ ಮೇಲೆ ಹೆಚ್ಚುವರಿ ಬಸ್ಸುಗಳನ್ನು ಸಹ ಕಾರ್ಯಾಚರಣೆ ಮಾಡಲಾಗುತ್ತದೆ. ಕಲ್ಯಾಣ ಕರ್ನಾಟಕ ಉತ್ಸವವನ್ನು ಯಶಸ್ವಿಗೊಳಿಸಲು ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕೆಂದು ಅವರು ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here