ಕಲಬುರಗಿ: ಕಲಬುರ್ಗಿಯಲ್ಲಿ ಕೆ.ಕೆ.ಆರ್.ಡಿ.ಬಿ ವತಿಯಿಂದ 3 ದಿನಗಳ ಕಾಲ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಕನ್ನಡ ಭೂಮಿ ಜಾಗೃತಿ ಸಮಿತಿ ವಿಭಾಗೀಯ ಅಧ್ಯಕ್ಷ ಜೈರಾಜ್ ಕಿಣಗೀಕರ ಮನವಿ ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಫೆ.24,25 ಹಾಗೂ 26 ರಂದು ನಡೆಯಲಿರುವ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಜಾನಪದ ಸಂಗೀತ,ಕಲೆ, ಮತ್ತು ಸಾಹಿತ್ಯ ಸೇರಿದಂತೆ ವಿವಿಧ ರೀತಿಯ ಕಾರ್ಯಕ್ರಮಗಳು ನಡೆಯಲಿವೆ.ಕಲಾವಿದರು, ಸಾಹಿತಿಗಳು ತಮ್ಮ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ.ಜೊತೆಗೆ ದಿನ ನಿತ್ಯ ಸಂಜೆ ಮನೋರಂಜನೆಯ ಸಂಗೀತ ಸಂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಇದರಲ್ಲಿ ಸ್ಯಾಂಡಲ್ ವುಡ್ ಹಾಗೂ ಬಾಲಿವುಡ್ ಚಿತ್ರ ರಂಗದ ಖ್ಯಾತ ಗಾಯಕ,ಗಾಯಕಿರು ಭಾಗವಹಿಸಲಿದ್ದಾರೆ.
ಇಷ್ಟೇ ಅಲ್ಲದೆ ಈ ಭಾಗದ ಕಲೆ, ಸಂಸ್ಕೃತಿ ಬಿಂಬಿಸುವ ಅನೇಕ ಕಾರ್ಯಕ್ರಮಗಳನ್ನು ಜರುಗಲಿವೆ.ಒಂದು ರೀತಿಯ ಕಲಬುರ್ಗಿಯಲ್ಲಿ ಹಬ್ಬದ ವಾತಾವರಣ ಮೂಡಲಿದೆ.ದೂರದಿಂದ ಉತ್ಸವಕ್ಕೆ ಬರುವ ಜನರಿಗೆ ಊಟದ ವ್ಯವಸ್ಥೆ ಇಲ್ಲದಿರುವುದು ಬೇಸರ ತರಿಸಿದೆ ಎಂದ ಅವರು ಈಗಲಾದರೂ ಊಟದ ಬಗ್ಗೆ ತಯ್ಯಾರಿ ಮಾಡಿಕೊಳ್ಳಬೇಕು ಎಂದ ಅವರು ಉತ್ಸವ ಆಯೋಜಿಸಿದ ಕೆ.ಕೆ.ಆರ್.ಡಿ.ಬಿ ಅಧ್ಯಕ್ಷರು ಹಾಗೂ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ ಅವರ ಕಾರ್ಯ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.