ಕಲಬುರಗಿ: ಕನ್ನಡ ಭೂಮಿ ಜಾಗೃತಿ ಸಮಿತಿ ತನ್ನ 18 ವರ್ಷಗಳನ್ನು ಪೂರೈಸಿದ ಸಂದರ್ಭದಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ ವಾರ್ಷಿಕೋತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ಮಟ್ಟದ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ತಿಳಿಸಿದ್ದಾರೆ.
ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿ ರಚಿಸಲಾಗಿದೆ.ಆಯ್ಕೆ ಸಮಿತಿ ನಿರ್ಧಾರ ಅಂತಿಮವಾಗಿರುತ್ತದೆ. ಸಾಹಿತ್ಯ, ಶಿಕ್ಷಣ, ಸಂಗೀತ,ಕಲೆ,ಸಮಾಜ ಸೇವೆ, ಮಾಧ್ಯಮ, ಕೃಷಿ, ವೈದ್ಯಕೀಯ, ಹೋರಾಟ ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಸಾಧನೆ ಮಾಡಿದ ಸಾಧಕರನ್ನು ಗೌರವಿಸುವ ಮೂಲಕ ಪ್ರಶಸ್ತಿ ನೀಡಲಾಗುವುದು.ಪ್ರಶಸ್ತಿಯು ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ,ಪ್ರಶಂಸನಾ ಪತ್ರ ಹಾಗೂ ಕಂಚಿನ ಫಲಕವನ್ನು ಒಳಗೊಂಡಿರುತ್ತದೆ.ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಆಸಕ್ತ ಅರ್ಜಿದಾರರು ಸೂಕ್ತ ದಾಖಲೆಗಳೊಂದಿಗೆ ಮಾರ್ಚ್ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು.ಹೆಚ್ಚಿನ ಮಾಹಿತಿಗಾಗಿ ಮೊ. 9481961505 ಸಂಖ್ಯೆಗೆ ಕರೆ ಮಾಡಲು ಪತ್ರಿಕಾ ಪ್ರಕಟಣೆ ಮೂಲಕ ಅವರು ಕೋರಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…