ನಾಳೆಯಿಂದ ಮೂರು ದಿನ ಕಲ್ಯಾಣ ಕರ್ನಾಟಕ ಉತ್ಸವ ಆರಂಭ

0
45

ಕಲಬುರಗಿ: ಫೆ.24 ರಿಂದ ಗುಲ್ಬರ್ಗ ವಿವಿ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ ಕಲ್ಯಾಣ ಕರ್ನಾಟಕ ಉತ್ಸವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಲಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕರ್ಜುನ ಖರ್ಗೆ ಹಾಗೂ ಕೇಂದ್ರ ಸಚಿವ ಭಗವಂತ ಖೂಬಾ, ತೋಟಗಾರಿಕೆ ಮತ್ತು ಯೋಜನೆ ಸಚಿವ ಮುನಿರತ್ನ ಘನ ಉಪಸ್ಥಿತಿ ವಹಿಸಲಿದ್ದಾರೆ ಎಂದು ಕೆಕೆಆರ್‍ಡಿಬಿ ಅಧ್ಯಕ್ಷ ಹಾಗೂ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ತಿಳಿಸಿದರು.

ಮುಖ್ಯ ಅತಿಥಿಗಳಾಗಿ ಈ ಭಾಘದ ಎಲ್ಲ ಸಚಿವರು ಹಾಗೂ ಶಾಸಕರು ಭಾಗವಹಿಸಲಿದ್ದು, 26ರಂದು ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದು, ಸಾರ್ವಜನಿಕರು ಉತ್ಸವದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

Contact Your\'s Advertisement; 9902492681

ನಗರದ ಕೆಕೆಆರ್‍ಡಿಬಿಯ ತಮ್ಮ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಸಾರ್ವಜನಿಕರ ಕಲ್ಯಾಣ ಕರ್ನಾಟಕ ಉತ್ಸವ. ಜಿಲ್ಲೆಯ ಜನರೇ ಒಪ್ಪಿಕೊಂಡು ಮುಂದೆ ನಿಂತು ನಡೆಸುತ್ತಿರುವ ಉತ್ಸವ. ಹಾಗಿದ್ದಾಗ ಇದು ಅಪ್ಪುಗೌಡ ದತ್ತಾತ್ರೇಯ ಪಾಟೀಲ) ಉತ್ಸವ ಹೇಗಾಗುತ್ತದೆ? ನಮ್ಮ ಪಕ್ಷದ ಎಲ್ಲ ಶಾಸಕರು, ಮುಖಂಡರು ನನ್ನ ಜತೆಯಲ್ಲಿಯೇ ಇದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕೊರೊನಾ ನಂತರ ಜನರಿಗೆ ಮನೋರಂಜನೆ ಮತ್ತು ನಮ್ಮ ಕಲ್ಯಾಣದ ಸಂಸ್ಕøತಿ ಬಿಂಬಿಸುವ ನಿಟ್ಟಿನಲ್ಲಿ ಯಾವುದೇ ಕಾರ್ಯಕ್ರಮಗಳು ಆಗಿರಲಿಲ್ಲ, ಈಗ ನಡೆಸಲಾಗುತ್ತಿದೆ. ಮೂರು ದಿನಗಳ ಕಾಲ ಕಲ್ಯಾಣದ ಇತಿಹಾಸವನ್ನು ಈ ಭಾಗದ ಕಲೆಯನ್ನು ಅನಾವರಣ ಮಾಡಲಾಗುತ್ತಿದೆ. ಇದನ್ನು ನಾವು ಅನ್ಯ ಮನಸ್ಕರಾಗಿ ನೋಡುವ ಅಗತ್ಯವಿಲ್ಲ ಎಂದರು.

ಸಾರ್ವಜನಿಕರ ತೆರಿಗೆ ಹಣದಲ್ಲಿ ಸರಕಾರದ ಅನುದಾನದಲ್ಲಿ ನಡೆಯುತ್ತಿರುವ ಉತ್ಸವವಾಗಿದ್ದು, ಪಕ್ಷದ ಅಭಿಮಾನಿಗಳು ನನ್ನ ಭಾವಚಿತ್ರ ಹಾಕಿ ಬ್ಯಾನರ್ ಅಚಿಟಿಸಿರಬಹುದು. ಅದರಂತೆ ಆರೋಪ ಮಾಡುವವರು ಸಹ ಬ್ಯಾನರ್, ಫ್ಲೆಕ್ಸ್ ಕಟ್ಟಲಿ. ಯಾರೂ ಬೇಕಾದರೂ ತಮ್ಮ ಫೆÇೀಟೋಗಳನ್ನು ನಮ್ಮ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಅವರ ಭಾವಚಿತ್ರದೊಂದಿಗೆಮುದ್ರಿಸಿ ಹಾಕಬಹುದು. ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬಹುದು ತಪ್ಪಿಲ್ಲ ಎಂದರು.

ವಿರೋಧ ಪಕ್ಷದವರು ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಇದೊಂದು ಜನರ ಉತ್ಸವಾಗಿರುವುದರಿಂದ ಯಾರೂ ಬೇಕಾದರೂ ಬ್ಯಾನರ್‍ಗಳನ್ನು ಕಟ್ಟಿ ಸ್ವಾಗತಿಸಿ. ತಪ್ಪಿಲ್ಲ ಎಂದರು.

ಈ ಉತ್ಸವದಲ್ಲಿ ಸ್ಥಳೀಯರು ಸೇರಿದಂತೆ ಖ್ಯಾತನಾಮ 300 ಕಲಾವಿದರು ಭಾಗವಹಿಸುತ್ತಿದ್ದಾರೆ. ವಿಚಾರ ಸಂಕಿರಣ, ಕವಿಗೋಷ್ಠಿ, ಸಂಗೀತ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುತ್ತಿದೆ. ಇಡೀ ವೇದಿಕೆಯಲ್ಲಿ ಸಾಂಸ್ಕೃತಿಕ ಹಬ್ಬವೇ ನಡೆಯುತ್ತದೆ. ಸಾರ್ವಜನಿಕರ ಕಾರ್ಯಕ್ರಮವಾಗಿದ್ದರಿಂದ ಎಲ್ಲ ಸಲಹೆಗಳಿಗೆ ಮುಕ್ತ ಸ್ವಾಗತವಿದೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here