ಶರಣಬಸವ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

0
125

ಕಲಬುರಗಿ; ಶುಕ್ರವಾರ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಗಳು ತಮ್ಮ ಹಳೆಯ ಗೆಳೆಯರೊಂದಿಗೆ ಮತ್ತು ಪರಿಚಯಸ್ಥರೊಂದಿಗೆ ತಮ್ಮ ಸಂತಸ-ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದಲ್ಲಿ ಸಂಭ್ರಮದ ವಾತಾವರಣ ಮೂಡಿತ್ತು.
ದೊಡ್ಡಪ್ಪ ಅಪ್ಪ ಸಭಾಂಗಣದಲ್ಲಿ ಸಮಾವೇಶಗೊಂಡ ವಿಶ್ವವಿದ್ಯಾಲಯದ ಪ್ರತಿಯೊಬ್ಬ ಹಳೆಯ ವಿದ್ಯಾರ್ಥಿಗಳಿಗೂ ಶಾಲು ಹೊದಿಸಿ ಸ್ಮರಣೀಯ ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿ ಮತ್ತು ಅಕ್ಸೆಂಚರ್‍ನಲ್ಲಿ ಟೀಮ್ ಲೀಡರ್ ಆಗಿ ಕಾರ್ಯನಿರ್ವಹಿಸುತ್ತಿರುವ ಸಂಜನಾ ಐನಾಪುರ ಅವರು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಮುಖ್ಯ ಕ್ಯಾಂಪಸ್‍ನಲ್ಲಿ ನಾಲ್ಕು ವರ್ಷಗಳ ಕಾಲ ಕಳೆದದ್ದನ್ನು ನೆನಪಿಸಿಕೊಂಡರು ಮತ್ತು ಹಾಸ್ಟೆಲ್‍ನಲ್ಲಿ ಉಳಿದುಕೊಂಡು ಸಹವರ್ತಿ ವಿದ್ಯಾರ್ಥಿಗಳೊಂದಿಗೆ ಸಂತೋಷವನ್ನು ಹಂಚಿಕೊಂಡ ಸುಂದರ ನೆನಪುಗಳನ್ನು ನೆನಪಿಸಿಕೊಂಡರು. ವಿಶ್ವವಿದ್ಯಾಲಯದಲ್ಲಿ ನೀಡಲಾದ ಗುಣಮಟ್ಟದ ಶಿಕ್ಷಣದಿಂದಾಗಿ ವೃತ್ತಿಜೀವನದಲ್ಲಿ ನನ್ನ ಯಶಸ್ಸಿಗೆ ಕಾರಣ ಎಂದು ಅವರು ಹೇಳಿದರು. ಸಂಜನಾ ಐನಾಪುರ ಅವರು ತಮ್ಮ ವೃತ್ತಿ ಜೀವನದಲ್ಲಿ ಸಾಧಿಸಿದ ಎಲ್ಲಾ ಯಶಸ್ಸಿಗೆ ತಮ್ಮ ಶಿಕ್ಷಕರಿಗೆ ಧನ್ಯವಾದ ಅರ್ಪಿಸಿದರು.

Contact Your\'s Advertisement; 9902492681

ಹೊಸದಾಗಿ ರೂಪುಗೊಂಡ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ.ಶರಣಮ್ಮ ನಿಷ್ಠಿ, ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯೂ ಆಗಿದ್ದು, ಬಿಸಿನೆಸ್ ಸ್ಟಡೀಸ್ ವಿಭಾಗದಲ್ಲಿ ಹಾಸ್ಪಿಟಲ್ ಮ್ಯಾನೇಜ್‍ಮೆಂಟ್ ಕೋರ್ಸ್‍ನ ಮೊದಲ ಬ್ಯಾಚ್ ವಿದ್ಯಾರ್ಥಿಯಾಗಿ ಆಸ್ಪತ್ರೆ ನಿರ್ವಹಣೆಯಲ್ಲಿ ಹೊಸ ಕೌಶಲ್ಯಗಳನ್ನು ಪಡೆದಿದ್ದಕ್ಕಾಗಿ ವಿಶ್ವವಿದ್ಯಾಲಯದ ಶಿಕ್ಷಕರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಕಲಬುರಗಿ, ಬೆಂಗಳೂರು ಮತ್ತು ಬೀದರ್ ನಗರಗಳಲ್ಲಿ ಆಸ್ಪತ್ರೆಗಳ ಸರಣಿಯನ್ನು ನಡೆಸುತ್ತಿರುವ ಯುನೈಟೆಡ್ ಆಸ್ಪತ್ರೆಯಲ್ಲಿ ಹಿರಿಯ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ದಾವೂದ್ ಅಲಿ ಮಾತನಾಡಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಎಂಬಿಎ ವಿದ್ಯಾರ್ಥಿಯಾಗಿ ಉತ್ತಮ ಸಂವಹನ ಕೌಶಲ್ಯ ಮತ್ತು ಇತರ ಕೌಶಲ್ಯಗಳನ್ನು ನಿರ್ವಹಿಸುವುದನ್ನು ಕಲಿಸಿಕೊಟ್ಟ ವಿಶ್ವವಿದ್ಯಾಲಯದ ಬೋಧಕ ಸಿಬ್ಬಂದಿಯ ಶಿಸ್ತು ಹಾಗೂ ಪ್ರಾಮಾಣಿಕತೆಯ ಸಂಸ್ಕøತಿಯನ್ನು ಕೊಂಡಾಡಿದರು.

ಓರ್ಯಾಕಲ್ ಇಂಡಿಯಾದ ಹಿರಿಯ ಸಾಫ್ಟ್‍ವೇರ್ ಇಂಜಿನಿಯರ್ ಶೃತಿ ಬಲಭೀಮ್ ಪಾಟೀಲ್ ಅವರು ವಿಶ್ವವಿದ್ಯಾಲಯದ ಹಳೆಯ ವಿದ್ಯಾರ್ಥಿಯಾಗಿ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ತನಗೆ ದೃಢವಾಗಿ ನಿಲ್ಲಲು ಸಹಾಯ ಮಾಡಿದ ಕೌಶಲ್ಯಗಳನ್ನು ಕಲಿಸಿದರು. ಉದ್ಯಮದಲ್ಲಿ ಕಾಲಿಟ್ಟು ಸ್ವಲ್ಪ ಯಶಸ್ಸನ್ನು ಸಾಧಿಸಿದಕ್ಕಾಗಿ ಶಿಕ್ಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ನರ್ಸರಿಯಿಂದ ಶಿಕ್ಷಣವನ್ನು ಆರಂಭಿಸಿದ ಶೃತಿ ಪಾಟೀಲ್ ಅವರು ಶರಣಬಸವ ವಿಶ್ವವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಕೋರ್ಸ್ ಮುಗಿಸಿ ಕಳೆದ ಐದು ವರ್ಷಗಳಿಂದ ಓರ್ಯಾಕಲ್ ಇಂಡಿಯಾದಲ್ಲಿ ಹಿರಿಯ ಸಾಫ್ಟ್‍ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಾರೆ.

ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಮತ್ತೋರ್ವ ಹಳೆಯ ವಿದ್ಯಾರ್ಥಿ ದೊಡ್ಡಪ್ಪ ನಿಷ್ಠಿ ಮಾತನಾಡಿದರು. ವಿವಿಯ ಸಮಕುಲಪತಿ ಪೆÇ್ರ.ವಿ.ಡಿ.ಮೈತ್ರಿ, ಕುಲಸಚಿವ ಡಾ.ಅನಿಲಕುಮಾರ ಬಿಡವೆ, ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ ಸೇರಿದಂತೆ ಇತರ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here