ಮಾ.1ರಿಂದ ಸರ್ಕಾರಿ ನೌಕರರ ಮುಷ್ಕರ

0
11

ಆಳಂದ : ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆಗಳ ಪರಿಷ್ಕರಣೆ ಮತ್ತು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಮಾರ್ಚ್‌ 1ರಿಂದ ಕಚೇರಿ ಕೆಲಸ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಸಿದ್ದಾರಾಮ ಪಾಟೀಲ ಹೇಳಿದರು.

ಪಟ್ಟಣದ ಗುರುಭವನದಲ್ಲಿನ ತಾಲ್ಲೂಕು ನೌಕರರ ಸಂಘದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,ರಾಜ್ಯಾಧ್ಯಕ್ಷ ಸಿ.ಎಸ್‌. ಷಡಾಕ್ಷರಿ ಅಧ್ಯಕ್ಷತೆಯಲ್ಲಿ ಈಚೆಗೆ ತುರ್ತು ಕಾರ್ಯಕಾರಿಣಿ ಸಭೆ ನಡೆಸಿ, ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 7 ದಿನ ಗಡುವು ನೀಡಲಾಗಿದೆ. ನಿಗದಿತ ಅವಧಿಯಲ್ಲಿ ಬೇಡಿಕೆ ಈಡೇರದಿದ್ದರೆ ಎಲ್ಲ ಸರ್ಕಾರಿ ನೌಕರರು, ನಿಗಮ ಮತ್ತು ಮಂಡಳಿಗಳ ಹಾಗೂ ಅನು ದಾನಿತ ಸಂಸ್ಥೆಯ ನೌಕರರು ಕೆಲಸಕ್ಕೆ ಗೈರಾಗಿ ಮುಷ್ಕರದಲ್ಲಿ ಪಾಲ್ಗೊಳ್ಳುವರು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Contact Your\'s Advertisement; 9902492681

ಪ್ರಾಥಮಿಕ ಶಾಲಾ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ನರಸಪ್ಪಾ ಬೀರಾದಾರ ಮಾತನಾಡಿ,ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಯ ಪ್ರಸ್ತಾಪ ಮಾಡದಿರುವುದು ಬೇಸರ ತರಿಸಿದೆ ಎಂದರು.

ಸುಧಾಕರ್‌ ರಾವ್ ಅಧ್ಯಕ್ಷತೆಯ 7ನೇ ವೇತನ ಆಯೋಗಕ್ಕೆ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಸಂಬಂಧ ವಿಸ್ತೃತ ವರದಿ ಸಿದ್ಧಪಡಿಸಿ ಸಲ್ಲಿಸಲಾಗಿದೆ ಎಂದು ಮಲ್ಲಿನಾಥ ಖಜೂರಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸತೀಶ್  ಸನಮುಖ,ಶೈಲಜಾ , ರಾಜೇಶ್ಸೇ ಸೇರಿದಂತೆ ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here