ಅಕ್ಷರ ದಾಸೋಹ ಯೋಜನೆ ಹಳ್ಳ ಹಿಡಿದಂತಿದೆ-ಆರ್.ವಿ ನಾಯಕ ಆರೋಪ

0
13

ಸುರಪುರ:ತಾಲೂಕಿನಲ್ಲಿಯ ಮಕ್ಕಳಿಗೆ ಮದ್ಹ್ಯಾನದ ಬಿಸಿಯೂಟ ಇಲ್ಲದೆ ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದರೆ ಬಿಸಿಯೂಟ ಯೋಜನೆ ಹಳ್ಳ ಹಿಡಿದಂತೆ ಕಾಣುತ್ತಿದೆ ಎಂದು ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,ಸುರಪುರ ಮತ್ತು ಹುಣಸಗಿ ತಾಲೂಕಿನ ಶಾಲೆಗಳಿಗೆ ಕಳೆದ ಎರಡು ತಿಂಗಳಿಂದ ಅಂದರೆ ಜನೆವರಿ ಮತ್ತು ಫೆಬ್ರವರಿ ತಿಂಗಳುಗಳಿಂದ ಮದ್ಹ್ಯಾನದ ಬಿಸಿಯೂಟ ಇಲ್ಲದೆ ಶಾಲೆಗಳಿಗೆ ಆಹಾರ ಧಾನ್ಯಗಳ ಸರಬರಾಜು ಮಾಡಿಲ್ಲ ಎಂದು ತಿಳಿದು ಬಂದಿದೆ,ಇದಕ್ಕೆ ಅಧಿಕಾರಿಗಳ ಮೇಲೆ ಅನುಮಾನ ಮೂಡುತ್ತಿದೆ ಎಂದಿದ್ದಾರೆ.

Contact Your\'s Advertisement; 9902492681

ಜಿಲ್ಲಾ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕರು ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕಿತ್ತು,ಬಡಮಕ್ಕಳಿಗಾಗಿ ಸರಕಾರ ಜಾರಿಗೆ ತಂದಿರುವ ಅಕ್ಷರದಾಸೋಹ ಯೋಜನೆಯಿಂದ ಶಾಲಾ ಮಕ್ಕಳಿಗೆ ಅನುಕೂಲವಾಗಲಿದೆ, ಮಕ್ಕಳು ಶಾಲೆಯಿಂದ ಹೊರಗುಳಿಯಬಾರದು ಮತ್ತು ಯಾವ ಮಕ್ಕಳು ಶಿಕ್ಷಣ ದಿಂದ ವಂಚಿತರಾಗಬಾರದು ಎಂದು ಯೋಜನೆ ಜಾರಿಗೆ ತರಲಾಗಿದೆ.ಆದಕಾರಣ ಜಿಲ್ಲಾಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here