ಜೆಡಿಎಸ್‍ಗೆ ಗುರುಲಿಂಗಪ್ಪ ಗೌರ್ ನೇಮಕ

0
6

ಕಲಬುರಗಿ; ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ ಜಿಲ್ಲಾಧ್ಯಕ್ಷ ಸುರೇಶ ಮಹಾಗಾವಂಕರ್ ಅವರ ಆದೇಶದ ಮೇರೆಗೆ ಜಿಲ್ಲಾ ಜಾತ್ಯಾತೀತ ಜನತಾದಳ ಪಕ್ಷದ “ಜಿಲ್ಲಾ ಕಾರ್ಮಿಕ ವಿಭಾಗದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಗುರುಲಿಂಗಪ್ಪ ಗೌರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಸಂಜಯಕುಮಾರ ಮಡಕಿ ಅವರು ತಿಳಿಸಿದ್ದಾರೆ.

ತಾವು ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ನಮ್ಮ ಜಿಲ್ಲೆಯ ಪಕ್ಷದ ಹಿರಿಯ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕಲಬುರಗಿ ಜಿಲ್ಲೆಯ ಜಿಲ್ಲಾ ಕಾರ್ಮಿಕ ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸುವ ಮೂಲಕ ಬಲವರ್ದನೆಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುತ್ತಿರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here