ಶಹಾಪುರ: ನೆರೆ ಸಂತ್ರಸ್ತರು ಯಾವುದಕ್ಕೆ ಎದೆಗುಂದದೆ ಧೈರ್ಯದಿಂದ ಇರಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ರಾಯಚೂರು ಲೋಕಸಭೆ ಸಂಸದರಾದ ಅಮರೇಶ್ ನಾಯಕ್ ಹೇಳಿದರು.
ಆಲಮಟ್ಟಿ ಜಲಾಶಯದಿಂದ ೬.೫೦ ಲಕ್ಷ ಸಾವಿರ ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಟ್ಟಿರುವುದರಿಂದ ಕೃಷ್ಣಾ ನದಿಯ ತಟದಲ್ಲಿರುವ ಬಹುತೇಕ ಗ್ರಾಮಗಳು ಜಲಾವೃತಗೊಂಡಿವೆ.
ಮನೆ ಮಾರು ಜಾನುವಾರುಗಳು ಬಿಟ್ಟು ಊರನ್ನು ತೊರೆದು ಹತ್ತಿಗೂಡೂರ ಗ್ರಾಮದ ಗಂಜಿ ಕೇಂದ್ರಕ್ಕೆ ಬಂದಿರುವ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬಿ ಮಾತನಾಡಿದರು.
ಸರ್ಕಾರದಿಂದ ಸಂತ್ರಸ್ತರಿಗೆ ಸಿಗಬೇಕಾದ ಎಲ್ಲ ಮೂಲಭೂತ ಸಕಲ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಡಳಿತ ಜೊತೆಗೆ ನಾನು ಕೂಡ ಪ್ರಯತ್ನ ಮಾಡುತ್ತಿದ್ದೇವೆ ಎಂದು ಭರವಸೆ ನೀಡಿದರು.
ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದರೆ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಾ:ಎ.ಬಿ. ಮಾಲಕರೆಡ್ಡಿ, ಹಾಗೂ ಮಾಜಿ ಶಾಸಕರಾದ ಡಾ:ವೀರಬಸವಂತ ರೆಡ್ಡಿ ಮುದ್ನಾಳ್, ಯಾದಗಿರಿಯ ಶಾಸಕರಾದ ವೆಂಕಟರೆಡ್ಡಿ ಮುದ್ನಾಳ, ಬಿಜೆಪಿಯ ಜಿಲ್ಲಾಧ್ಯಕ್ಷರಾದ ಚಂದ್ರಶೇಖರಗೌಡ ಮಾಗನೂರು ಹಾಗೂ ಇತರರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…