ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಸಾರ್ಥಕ ಬದುಕು; ಶಿವಶರಣಪ್ಪ ಮೂಳೆಗಾಂವ

ಕಲಬುರಗಿ: ವಿದ್ಯಾರ್ಥಿಗಳು ತಮಗೆ ನಿಗದಿಪಡಿಸಿರುವ ಪಠ್ಯಕೇವಲ ಪರೀಕ್ಷೆಗೆ ಮಾತ್ರ ಸೀಮಿತವಲ್ಲ. ಅದರಲ್ಲಿ ನೀವು ಬದುಕನ್ನು ಕಟ್ಟಿಕೊಳ್ಳುವ ಮಾರ್ಗವಿದೆ. ಅದನ್ನು ಹುಡುಕುವ ಕೆಲಸ ಮಾಡಬೇಕು. ಒಂದು ವೇಳೆ ಶೈಕ್ಷಣಿಕ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ತೊಂದರೆಯಿಲ್ಲ. ಆದರೆಜೀವನದ ಪರೀಕ್ಷೆಯಲ್ಲಿ ಫೇಲಾದರೆಜೀವನ ವ್ಯರ್ಥವಾಗುತ್ತದೆ ಎಂದು ಪಪೂಶಿ ಇಲಾಖೆಯ ಉಪನಿರ್ದೇಶಕ ಶಿವಶರಣಪ್ಪ ಮೂಳೆಗಾಂವ ಹೇಳಿದರು.

ಜೇವರ್ಗಿಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವಕಾಲೇಜಿನ ಸಭಾಂಗಣದಲ್ಲಿ ಭಾನುವಾರಏರ್ಪಡಿಸಲಾಗಿದ್ದಕಾಲೇಜಿನ ವಾರ್ಷಿಕೋತ್ಸವ, ದ್ವಿತೀಯ ಪಿಯು ವಿದ್ಯಾರ್ಥಿಗಳ ಬಿಳ್ಕೋಡುಗೆ ಮತ್ತು ಪ್ರತಿಭಾ ಪುರಸ್ಕಾರಸಮಾರಂಭವನ್ನುಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ವಿದ್ಯಾರ್ಥಿಗಳಿಗೆ ಶಿಕ್ಷಕರು, ಪಾಲಕ-ಪೋಷಕ ವರ್ಗದವರು ಮಾರ್ಗದರ್ಶನ ಮಾಡಬಹುದೇ ಹೊರತು, ಜೀವನ ನಿರ್ಮಿಸಲು ಸಾಧ್ಯವಿಲ್ಲ. ನೀವು ಸ್ವಯಂ ಶಿಲ್ಪಿಗಳಾಗಬೇಕು. ಮೌಢ್ಯತೆ, ಕಂದಾಚಾರದಿಂದ ಹೊರಬನ್ನಿ. ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ. ಶಕ್ತಿಶಾಲಿಗಳಾಗಿ, ನಿರಂತರಅಧ್ಯಯನದಿಂದಉತ್ತಮ ಫಲಿತಾಂಶ ಪಡೆದುಕಾಲೇಜಿನಕೀರ್ತಿಯನ್ನು ಹೆಚ್ಚಿಸುವಂತೆ ಅನೇಕ ಸಲಹೆ-ಸೂಚನೆಗಳನ್ನು ನೀಡಿದರು.

ಯಡ್ರಾಮಿ ವಿರಕ್ತ ಮಠದ ಪೂಜ್ಯ ಸಿದ್ದಲಿಂಗ ಸ್ವಾಮಿಗಳು ಮಾತನಾಡಿ, ವಿದ್ಯಾರ್ಥಿದೆಸೆಯಿಂದಲೇದೇಶಪ್ರೇಮ, ಭ್ರಾತೃತ್ವ ಭಾವನೆ ಮೈಗೂಡಿಸಿಕೊಳ್ಳಿ. ತಂದೆ-ತಾಯಿ, ಗುರು-ಹಿರಿಯರಿಗೆಗೌರವ ನೀಡಿ. ಯಾರೇ ಆಗಲಿ ತಮ್ಮ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿ. ಸೂಕ್ತ ಯೋಚನಾ ಶಕ್ತಿ ಇರಲಿ. ಸ್ವಾರ್ಥಜೀವನಕ್ಕಿಂತ, ಸಾರ್ಥಕಜೀವನ ಶ್ರೇಷ್ಠವಾಗಿದೆ. ಅಂಕಪಟ್ಟಿಯಿಂದ ಮಾತ್ರಜೀವನ ನಿರ್ಧಾರವಾಗದು. ಅನೇಕ ಮಹನೀಯರಜೀವನ, ಸಾಧನೆಯ ದೃಷ್ಟಾಂತಗಳೊಂದಿಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ವಿವರಿಸಿದರು.

ಸಿಬಿಸಿ ಉಪಾಧ್ಯಕ್ಷರವೀಂದ್ರಕುಮಾರ ವೈ.ಕೋಳಕೂರ್, ಪ್ರಾಚಾರ್ಯರುಗಳಾದ ಮೊಹ್ಮದ ಅಲ್ಲಾ ಉದ್ದೀನ ಸಾಗರ, ಬಸವರಾಜ ಬಿರಾಜಾದಾರ, ಶಿವಶರಣಪ್ಪ ಮಸ್ಕನಳ್ಳಿ, ಶ್ರೀಶೈಲ್ ಖಣದಾಳ, ಅಮಿನಪ್ಪ ಹೊಸಮನಿ, ಪಿಎಸ್‍ಐ ಶಿವರಾಜ ಪಾಟೀಲ, ಪ್ರಮುಖರಾದ ಶಾಂತಪ್ಪಜೈನ್, ಶರಣು ಹಿರೇಮಠ ವೇದಿಕೆ ಮೇಲಿದ್ದರು.

ರವೀಂದ್ರಕುಮಾರ ಬಟಗೇರಿ, ನಯಿಮಾ ನಾಹಿದ್, ಶರಣಮ್ಮ ಭಾವಿಕಟ್ಟಿ, ಶಂಕ್ರೆಪ್ಪ ಹೊಸದೊಡ್ಡಿ, ಎಚ್.ಬಿ.ಪಾಟೀಲ, ಪ್ರಕಾಶ ಪಾಟೀಲ,ರೇಣುಕಾಚಿಕ್ಕಮೇಟಿ, ರಾಮಚಂದ್ರಟಿ.ಹಕ್ಕಿ, ಸಿದ್ದಾರೂಢ ಬಿರಾದಾರ, ದೇವೇಂದ್ರಪ್ಪ ಬಡಿಗೇರ್, ನೇಸರ ಎಂ.ಬೀಳಗಿಮಠ, ರಂಜಿತಾಠಾಕೂರ, ಸಮೀನಾ ಬೇಗಂ, ಮಂಜುನಾಥ ಅಳ್ಳಗಿ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಜರುಗಿತು. ವಿದ್ಯಾರ್ಥಿಗಳು ಸಮಸ್ತ ಸಿಬ್ಬಂದಿಗೆ ಸತ್ಕರಿಸಿದರು. ದ್ವಿತೀಯ ಪಿಯುಎಲ್ಲಾ ವಿದ್ಯಾರ್ಥಿಗಳಿಗೆ ಪುಷ್ಪವೃಷಿಯ ಮೂಲಕ ಶುಭಾಷಯಕೋರಿ, ಬಿಳ್ಕೋಡಲಾಯಿತು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

13 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

13 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

13 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

13 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

14 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420