ಬಿಸಿ ಬಿಸಿ ಸುದ್ದಿ

ಕೇಂದ್ರೀಯ ಶಾಲೆಗಳ ಪರೀಕ್ಷಾ ಶುಲ್ಕ ಹೆಚ್ಚಳಕ್ಕೆ ಕೆವಿಎಸ್ ಆಕ್ರೋಶ

ಕಲಬುರಗಿ: ಭಾರತದಲ್ಲಿಯೇ ಪ್ರತಿವರ್ಷ ಅತ್ಯಧಿಕ ಫಲಿತಾಂಶ ಪಡೆಯುವ ಶಾಲೆಗಳಲ್ಲಿ ಕೇಳಿಬರುವ ಹೆಸರು ಕೇಂದ್ರೀಯ ಶಾಲೆಗಳು (Central Schools). ಕೇಂದ್ರ ಸರ್ಕಾರದ ಉಸ್ತುವಾರಿಯಲ್ಲಿ ನಡೆಯುವ ಈ ಶಾಲೆಗಳು ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿ. ಸರ್ಕಾರಿ ಶಾಲೆಗಳಾದರೂ ಸಹ ಖಾಸಗಿ ಶಾಲೆಗಳು ಇವುಗಳ ಮುಂದೆ ಏನೂ ಅಲ್ಲ. ಈ ಶಾಲೆಗಳಲ್ಲಿ ದಾಖಲಾತಿಗಾಗಿ ಬಹಳ ಶ್ರೀಮಂತರೆ ಬಹಳಷ್ಟು ಪೈಪೋಟಿ ನಡೆಸುತ್ತಾರೆ. ಇಂತಹ ಕೇಂದ್ರೀಯ ಶಾಲೆಗಳ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ಹೊರಟಿರುವುದು ಅಕ್ಷಮ್ಯ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ರಾಜವಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಿಕ್ಷಣ ಎನ್ನುವುದು ಸೇವೆಯೇ ಹೊರತು ವ್ಯಾಪಾರವಲ್ಲ. ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡುವಂತೆ ನಮ್ಮ ಸಂವಿಧಾನವೂ ಹೇಳುತ್ತದೆ. ಆದರೆ ಕೇಂದ್ರ ಸರ್ಕಾರ ಈ ರೀತಿಯ ಕ್ರಮಗಳ ಮೂಲಕ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳ ಹೆಸರು ಕೆಡಿಸಲು ಪ್ರಯತ್ನಿಸುತ್ತಿರುವುದು ಖಂಡನೀಯ. ಇದರಿಂದ ಬಡಮಕ್ಕಳು ತಮಗೆ ಸಿಗುತ್ತಿರುವ ಅತ್ಯುತ್ತಮ ಶಿಕ್ಷಣದಿಂದ ವಂಚಿತರಾಗುತ್ತಾರೆ. ಇದನ್ನೆ ಬಂಡವಾಳ ಮಾಡಿಕೊಳ್ಳಲು ಖಾಸಗಿ ಶಿಕ್ಷಣ ಸಂಸ್ಥೆಗಳು ಹೊಂಚುಹಾಕುತ್ತಿರುತ್ತಾರೆ ಎಂದು ಆರೋಪಿಸಿದರು.

ಇಂದು ಹಲವು ಕ್ರಮಗಳ ನಂತರವು ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿದಿರುವುದು ನಮಗೆಲ್ಲಾ ಗೊತ್ತೆ ಇದೆ. ಇಂತಹ ಸಂದರ್ಭದಲ್ಲಿ ಉಚಿತ ಮತ್ತು ಗುಣಮಟ್ಟದ ಶಿಕ್ಷಣವನ್ನು ಖಾತ್ರಿಗೊಳಿಸಬೇಕಾದ ಸರ್ಕಾರ ಮಕ್ಕಳ ಶುಲ್ಕವನ್ನು ಹೆಚ್ಚು ಮಾಡುತ್ತಿರುವುದು ಯಾವುದೇ ಕಾರಣಗಳಿಂದಲೂ ಒಪ್ಪಲು ಸಾಧ್ಯವಿಲ್ಲ. ಬದಲಗೆ ಶುಲ್ಕವನ್ನು ಉಚಿತ ಮಾಡುವುದರ ಜೊತೆಗೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಕೇಂದ್ರೀಯ ಶಾಲೆಗಳ ಮಾದರಿಯ ಶಿಕ್ಷಣವನ್ನು ಜಾರಿಗೊಳಿಸಬೇಕೆಂದು ಒತ್ತಾಯಿಸಿದರು.

ಹಾಲಿ ಈ ಶಾಲೆಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳು 1500 ರೂ ಪಾವತಿಸುತ್ತಿದ್ದರೆ ಈಗ ಏಕಾಏಕಿ 3000ಕ್ಕೆ ಅಂದರೆ ಎರಡು ಪಟ್ಟು ಏರಿಸಲಾಗಿದೆ. ಇನ್ನು ಎಸ್ಸಿ ಎಸ್ಟಿ ವಿದ್ಯಾರ್ಥಿಗಳು 50 ರೂ ಪಾವತಿಸುತ್ತಿದ್ದರೆ ಇನ್ನು ಮುಂದೆ 1200ಕ್ಕೆ ಅಂದರೆ ಇಪ್ಪಲ್ನಾಕ್ಕು ಪಟ್ಟು ಹೆಚ್ಚು ಮಾಡಲಾಗಿದೆ. ಅತ್ಯಂತ ಕಡಿಮೆ ಶುಲ್ಕದಲ್ಲಿ ಅತ್ಯುತ್ತಮ ಶಿಕ್ಷಣಕ್ಕೆ ಹೆಸರುವಾಸಿಯಾಗಿದ್ದ ಕೇಂದ್ರೀಯ ಶಾಲೆಗಳಲ್ಲಿನ ಈ ದುಬಾರಿ ಶುಲ್ಕ ಹೆಚ್ಚಳವು ನಿಧಾನಕ್ಕೆ ಶಿಕ್ಷಣದ ವ್ಯಾಪರೀಕರಣ ಮುಂದಾಗುತ್ತಿರುವುದರ ದ್ಯೋತಕವಾಗಿದೆ. ಇದನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತೀವ್ರವಾಗಿ ಖಂಡಿಸುತ್ತಿದ್ದು, ಶುಲ್ಕ ಹೆಚ್ಚಳದ ಆದೇಶ ವಾಪಸ್ ಪಡೆಯಬೇಕೆಂದು ಈ ಸಂದರ್ಭದಲ್ಲಿ ಅವರು  ಆಗ್ರಹಿಸಿದರು.

 

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago