4ನೇ ರಥ ಉದ್ಘಾಟನೆಗೆ ಅಮಿತ್ ಶಾ: ಆರ್.ಅಶೋಕ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಇನ್ನು ಯಾವತ್ತೂ ತಲೆ ಎತ್ತದಂತೆ ಅಂತಿಮ ಮೊಳೆ ಹೊಡೆಯುವ ಚುನಾವಣೆ ಇದಾಗಲಿದೆ ಎಂದು ರಾಜ್ಯದ ಕಂದಾಯ ಸಚಿವ ಆರ್.ಅಶೋಕ್ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರು ಕಟ್ಟಿಸಿದ ಆವಟಿಯ ಚನ್ನಕೇಶವ ದೇವಾಲಯದಲ್ಲಿ ಇದೇ 3ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪೂಜೆ ಬಳಿಕ 4ನೇ ರಥ ಉದ್ಘಾಟನೆ ಆಗಲಿದೆ. ಬಳಿಕ ದೇವನಹಳ್ಳಿ ಶಾಲಾ ಮೈದಾನದಲ್ಲಿ 4ನೇ ರಥ ಉದ್ಘಾಟಿಸಲಿದ್ದಾರೆ. ಸಾರ್ವಜನಿಕ ಸಭೆ ಇದ್ದು, 30-40 ಸಾವಿರ ಜನರು ಸೇರುವ ನಿರೀಕ್ಷೆ ಇದೆ ಎಂದು ವಿವರ ನೀಡಿದರು.

ಡಬಲ್ ಎಂಜಿನ್ ಸರಕಾರ ಮರುಸ್ಥಾಪನೆಗೆ ಗೆಲ್ಲುವಂಥ ಹಲವಾರು ಸೂತ್ರಗಳನ್ನು ಪಕ್ಷ ಸಿದ್ಧಪಡಿಸಿದೆ. ಜನತೆಗೆ ಮುಟ್ಟಿರುವ ಕಾರ್ಯಕ್ರಮಗಳು ಜನರಿಗೆ ತಿಳಿಯಬೇಕೆಂದು ವಿಜಯ ಸಂಕಲ್ಪ ಯಾತ್ರೆ 4 ರಥಗಳ ಮೂಲಕ ನಡೆಯಲಿದೆ. ನನ್ನ ನೇತೃತ್ವದ ತಂಡವು 3ರಂದು ರ್ಯಾಲಿ ನಡೆಸಲಿದೆ. ಅಶ್ವತ್ಥನಾರಾಯಣ್, ಗೋಪಾಲಯ್ಯ, ಸೋಮಶೇಖರ್, ಡಾ.ಸುಧಾಕರ್, ಇನ್ನೂ ಹಲವಾರು ಎಂಎಲ್‍ಸಿಗಳು, ಲೋಕಸಭಾ ಸದಸ್ಯ ಪಿ.ಸಿ.ಮೋಹನ್, ಇವರೆಲ್ಲರೂ ನಮ್ಮ ತಂಡದಲ್ಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದಲ್ಲಿ ನಮ್ಮ ತಂಡ 17 ಸಾರ್ವಜನಿಕ ಸಭೆಗಳನ್ನು ಮಾಡಲಿದೆ. 7 ಮೋರ್ಚಾಗಳ ಸಭೆಯೂ ನಡೆಯಲಿದೆ. ದಿನಾಂಕಗಳನ್ನು ನಿರ್ಧರಿಸಲಾಗಿದೆ. ಎಲ್ಲ ಕಡೆ ರೋಡ್ ಷೋ, ಸಾರ್ವಜನಿಕ ಸಭೆ ಇರುತ್ತದೆ. ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಭಾಗದಲ್ಲಿ ನಮ್ಮ ರಥದ ಮೂಲಕ ಸಂಚರಿಸುತ್ತೇವೆ ಎಂದು ಮಾಹಿತಿ ನೀಡಿದರು.

ಕೊನೆಯಲ್ಲಿ ದಾವಣಗೆರೆಯಲ್ಲಿ 25ರಂದು ನರೇಂದ್ರ ಮೋದಿಜಿ ಅವರು ರಥಗಳ ಸಂಚಾರದ ಸಮಾರೋಪ ನಡೆಯಲಿದೆ. ಬೃಹತ್ ರ್ಯಾಲಿ ಮೂಲಕ ಮೋದಿಜಿ ಅವರು ಪಾಂಚಜನ್ಯದ ಶಂಖನಾದ ಮಾಡಲಿದ್ದಾರೆ. ಒಂದು ವಾರದಿಂದ ತಯಾರಿ ನಡೆದಿದೆ. ದೇವನಹಳ್ಳಿಯಲ್ಲಿ ಇವತ್ತು ವೇದಿಕೆ ವೀಕ್ಷಿಸಲಿದ್ದೇನೆ ಎಂದರು.

ಕಳೆದ 3 ತಿಂಗಳಿನಿಂದ ನಡೆದ ಸರ್ವೇಗಳಲ್ಲಿ ಬಿಜೆಪಿ ಮೊದಲ ಸ್ಥಾನದಲ್ಲಿದೆ. ನಾವು ಬಹುಮತ ದಾಟಿ ಅತಿ ಹೆಚ್ಚು ಸ್ಥಾನಗಳೊಂದಿಗೆ ವಿಧಾನಸಭೆಯಲ್ಲಿ ಅಧಿಕಾರ ಪಡೆಯಲಿದ್ದೇವೆ ಎಂದು ತಿಳಿಸಿದರು. ಯಡಿಯೂರಪ್ಪ, ಜನಾರ್ದನ ರೆಡ್ಡಿಯವರು ಜೈಲಿಗೆ ಹೋಗಲು ಕಾಂಗ್ರೆಸ್ ಕಾರಣ ಎಂದು ಅವರು ಆರೋಪಿಸಿದರು.

ಹಳೆ ಮೈಸೂರು ಭಾಗದಲ್ಲಿ ಪಕ್ಷ ಹೆಚ್ಚಿನ ಸಂಖ್ಯೆಯ ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಾವಣಗೆರೆಯಲ್ಲಿ ತಾಂಡಾದವರಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

ಕಾಂಗ್ರೆಸ್ ನಾಯಕತ್ವದ ಕೊರತೆಯಿಂದ ಬಳಲುತ್ತಿದೆ. ಅದು ಬಂಜರು ಭೂಮಿಯ ಪಕ್ಷ. ಮರಳುಗಾಡಿನ ಪಕ್ಷ ಅದು. ಅವರು ಒಯಸಿಸ್‍ಗೆ ಹುಡುಕಾಡುತ್ತಿದೆ. ಕಾಂಗ್ರೆಸ್ ಇಲ್ಲಸಲ್ಲದ ಆರೋಪ ಮಾಡುತ್ತಿದೆ ಎಂದು ಟೀಕಿಸಿದ ಅವರು, 40 ನಾಯಕರು ವಿವಿಧೆಡೆ ನಮ್ಮ ರಥಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದರು.

ಇನ್ನು ಮುಂದಿನ ಬಿಜೆಪಿ ಸಭೆ, ಸಮಾರಂಭಗಳು ಅತಿ ಹೆಚ್ಚು ಶಾಸಕತ್ವದೊಂದಿಗೆ ಬಿಜೆಪಿ ಗೆಲುವಿಗೆ ಕಾರಣವಾಗಲಿದೆ. ಬಿಜೆಪಿ ಅಶ್ವಮೇಧ ಆರಂಭವಾಗಿದೆ. ರಾಜ್ಯದಾದ್ಯಂತ ಬಿಜೆಪಿ ಹವಾ ಇದೆ. ನಮ್ಮಲ್ಲಿ ಲೀಡರ್‍ಶಿಪ್ ಇದೆ. ಅವರಲ್ಲಿ (ಕಾಂಗ್ರೆಸ್) ಗುಂಪುಗಾರಿಕೆ ಇದೆ ಎಂದು ಆರೋಪಿಸಿದರು.

ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಬಿ.ನಾರಾಯಣಗೌಡ, ಅವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

emedialine

Recent Posts

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

8 mins ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

4 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

20 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

22 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420