ಫಿರೋಜಾಬಾದ್ ಸರ್ಕಾರಿ ಶಾಲೆಗೆ ಉತ್ತಮ ಶಿಕ್ಷಕಿ ಪ್ರಶಸ್ತಿ; ಶಶಿಕಲಾ ರೆಡ್ಡಿಗೆ ಸನ್ಮಾನ

ಕಲಬುರಗಿ; ತಾಲೂಕಿನ ಫಿರೋಜಾಬಾದ್ ಸರ್ಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾದ ಶಶಿಕಲಾ ರೆಡ್ಡಿ ಅವರನ್ನು ಗೌರವಿಸಲಾಯಿತು.

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಲಿ ಕಲಬುರಗಿ: ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಹಿರಿದು. ಇನ್ನು ವಿಜ್ಞಾನ ಕಲಿಕೆಯಿಂದ ಮಕ್ಕಳಲ್ಲಿ ಆವಿಷ್ಕಾರ, ವೈಚಾರಿಕತೆ ಬೆಳೆಯುವಲ್ಲಿ ಸಹಕಾರಿಯಾಗಲಿದೆ ಎಂದು ಅಜೀಮ್ ಪ್ರೇಮ್ ಜಿ ಫೌಂಡೇಶನ್‌ನ ಸಂಪನ್ಮೂಲ ವ್ಯಕ್ತಿ ಡಾ. ಜಗನ್ನಾಥ್ ಉಮಾಪತಿ ಡೆಂಗಿ ಹೇಳಿದರು.

ತಾಲೂಕಿನ ಫಿರೋಜಾಬಾದ್ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ, ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಎಂಟನೇ ತರಗತಿಯ ಮಕ್ಕಳಿಗೆ ಬಿಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿ `ದಿನನಿತ್ಯದಲ್ಲಿ ವಿಜ್ಞಾನ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಿಗೂ ವಿಜ್ಞಾನ ಪರಿಕರಗಳು, ವಿಜ್ಞಾನ ಪ್ರಯೋಗಾಲಯ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಬೇಕು. ನಗರ ಪ್ರದೇಶದ ಮಕ್ಕಳಂತೆ ಗ್ರಾಮೀಣ ವಿದ್ಯಾರ್ಥಿಗಳು ಸಮಬಲ ಪೈಪೋಟಿ ಮಾಡಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಬಗ್ಗೆ ಕ್ಷಕರು ಬೋಧನೆಯಲ್ಲಿ ಅಪ್ಡೇಟ್ ಆಗಿರಬೇಕು ಎಂದು ಕಿವಿಮಾತು ಹೇಳಿದರು.

ದಕ್ಷಿಣ ವಲಯದ ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ರಾಠೋಡ, ಬಿಆರ್‌ಪಿ ಅಪರ್ಣಾ ಕುಲಕರ್ಣಿ, ಸಿಆರ್‌ಪಿ ಲಕ್ಷ್ಮೀಕಾಂತ್ ದೇವಕರ, ಪ್ರಭಾರಿ ಮುಖ್ಯಗುರು ಸೋಪಿಯಾ ಬೇಗಂ, ಎಸ್‌ಡಿಎಂಸಿ ಅಧ್ಯಕ್ಷ ಬಾಬು ಪವಾಡಿ, ನಿವೃತ್ತ ಮುಖ್ಯಗುರು ನಾಗಣ್ಣ ಧೂಳಬಾ, ಗ್ರಾಮಸ್ಥರಾದ ಕಲ್ಲಪ್ಪ ಪ್ಯಾಟಿ, ಮಲ್ಲಿಕಾರ್ಜುನ ಧೂಳಬಾ, ಮಹಾದೇವಪ್ಪ ಭರ್ಮಾ, ಶಿಕ್ಷಕರಾದ ಶಂಕರ ಜೋಗೂರ್, ಈಶ್ವರಗೌಡ, ಹೂವಪ್ಪ, ಶಿಕ್ಷಕಿಯರಾದ ದೀಪಾ ಪಾಟೀಲ್, ಶಕುಂತಲಾ ಸೇರಿ ಅನೇಕ ಶಿಕ್ಷಕಿಯರು ಭಾಗವಹಿಸಿದ್ದರು.

ಶಿಕ್ಷಕಿ ಸುನಂದಾ ಕುಲಕರ್ಣಿ ಸ್ವಾಗತಿಸಿದರು. ಕಾಶಮ್ಮ ಬಿರಾದಾರ ನಿರೂಪಿಸಿದರು. ನಂತರ ಮಕ್ಕಳಿಂದ ವಿಜ್ಞಾನದ ಪ್ರಯೋಗಗಳ ಪ್ರದರ್ಶನ ಮತ್ತು ಪವಾಡ ಬಯಲು ಕಾರ್ಯಕ್ರಮ ಜರುಗಿತು. ಶಾಲೆಯ ಉತ್ತಮ ಶಿಕ್ಷಕ ಮತ್ತು ಉತ್ತಮ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಗೌರವಿಸಲಾಯಿತು. ವಿವಿಧ ರೀತಿಯ ಸಾಂಸ್ಕೃತಿಕ ಕಾರ್ಯಕ್ರಮಗಳು ಮನಸೆಳೆದವು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420