ಬಿಸಿ ಬಿಸಿ ಸುದ್ದಿ

ವಸತಿನಿಲಯಕ್ಕೆ ಮೂಲ ಸೌಕರ್ಯಗಳನ್ನು ಕಲ್ಪಿಸುವಂತೆ ವಿದ್ಯಾರ್ಥಿಗಳ ಆಗ್ರಹ

ಕಲಬುರಗಿ: ಗುಣಮಟ್ಟದ ಆಹಾರ ಮತ್ತು ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಸತಿ ನಿಲಯದ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುವ ಮೂಲಕ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನಡೆಯನ್ನು ಖಂಡಿಸಿದ ಘಟನೆ ನಡೆದಿದೆ.

ನಗರದ ಹೈಕೋರ್ಟ್ ಸಮೀಪದ ಗ್ರೀನ್ ಪಾರ್ಕ್ ನಲ್ಲಿರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಲ್ಲಿ ದಲಿತ ಸೇನೆಯ ಉಪಾಧ್ಯಕ್ಷ ಕಪಿಲ ವಾಲಿ ನೇತೃತ್ವದಲ್ಲಿ ವಿಧ್ಯಾರ್ಥಿಗಳು ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.

ಕಳೆದ ಮೂರು ದಿನಗಳಿಂದ ಹಾಸ್ಟೆಲ್ ನಲ್ಲಿ ನೀರು ಬಾರದಿದ್ದರೂ ತೆಲೆ ಕೆಡಿಸಿಕೊಳ್ಳದ ವಸತಿ ನಿಲಯದ ಆಡಳಿತ ಮಂಡಳಿಯ ವಿರುದ್ದ ಕಿಡಿಕಾರಿದರು. ವಸತಿ ನಿಲಯಕ್ಕೆ ಸೇರಿಕೊಂಡಾಗಿನಿಂದಲೂ ಪ್ರತಿನಿತ್ಯ ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಲೇ ಇದ್ದೇವೆ. ಕಳೆದ ಮೂರು ದಿನಗಳಿಂದ ನೀರಿನ ಸಮಸ್ಯೆ ಎದುರಾದ್ರೂ ಸಹ ಇಲ್ಲಿನ ಅಧಿಕಾರಿ ಕಿಂಚಿತ್ತೂ ತೆಲೆ ಕಡೆಸಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ಅμÉ್ಟ ಅಲ್ಲದೆ ನಗರದ ಹೊರವಲಯದಲ್ಲಿರುವ ಈ ವಸತಿ ನಿಲಯ ಕ್ಕೆ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲ ಈ ವಸತಿ ನಿಲಯದಲ್ಲಿ ಸರಿಯಾದ ಸಮಯಕ್ಕೆ ಊಟ ಸಹ ನೀಡುವುದಿಲ್ಲ. ಕೆಲವೊಂದು ಬಾರಿ ಕಾಲೇಜ್’ಗೆ ಉಪವಾಸವೆ ಹೋಗಿದ್ದೆವೆ. ಕೆಳಿದ್ರೆ ಇಲ್ಲಿನ ಅಧಿಕಾರಿಗಳು ಪ್ರತಿನಿತ್ಯ ಒಂದೊಂದು ಕುಂಟು ನೆಪವನ ಹೇಳತಾರೆ ಕ್ರೀಡಾ ಸೌಲಭ್ಯದ ಕೊರತೆ ಕೂಡ ಇಲ್ಲಿದೆ ಎಂದು ವಿಧ್ಯಾರ್ಥಿ ಯಮುನಪ್ಪ ದೂರಿದರು.

ವಿದ್ಯಾರ್ಥಿಗಳು ಪ್ರತಿಭಟನೆಗೆ ಇಳಿಯುತ್ತಿದ್ದಂತೆ ಹಾಸ್ಟೆಲ್ ನತ್ತ ಧಾವಿಸಿದ ಅಧಿಕಾರಿಗಳು ವಸತಿ ನಿಲಯದಲ್ಲಿರುವ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದಷ್ಟು ಬೇಗ ಸರಿಪಡಿಸಲೂ ಅಧಿಕಾರಿಗಳು ಸಹ ಸೂಚನೆಯನ್ನು ನೀಡಿದ್ದಾರೆ. ಕುಡಿಯುವ ನೀರಿನ ಸಮಸ್ಯೆ, ಊಟದ ವ್ಯವಸ್ಥೆ ಎಲ್ಲವೂ ಕೂಡ ಅತಿ ಶೀಘ್ರದಲ್ಲಿ ಸರಿಪಡಿಸಲಾಗುವುದು ಎಂದು ಹಾಸ್ಟಲ್ ವಾರ್ಡನ್ ಮರೆಪ್ಪ ಛಲವಾದಿ ಭರವಸೆ ನೀಡಿದರು.

ದಲಿತ ಸಮಿತಿಯ ಉಪಾಧ್ಯಕ್ಷ ಕಪಿಲ್ ವಾಲಿ ದಲಿತ ಸೇನೆಯ ವಿಧ್ಯಾರ್ಥಿ ಘಟಕದ ರಾಜ್ಯಧ್ಯಕ್ಷ ಶಿವಲಿಂಗಪ್ಪ ದೊಡ್ಡಮನಿ ವಸತಿ ನಿಲಯದ ವಾರ್ಡನ್ ಅವರಿಗೆ ಮನವಿಪತ್ರ ಸಲ್ಲಿಸಿದರು. ವಿದ್ಯಾರ್ಥಿಗಳಾದ ದಿಲೀಪ್ ಆಕಾಶ್ ಮಂಜುನಾಥ್, ಪ್ರಕಾಶ ಕೃಷ್ಣ ಸೇರಿದಂತೆ ಹಲವಾರು ವಿದ್ಯಾರ್ಥಿಗಳು ಇದ್ದರು.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

1 hour ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

1 hour ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

1 hour ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

1 hour ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

1 hour ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

2 hours ago