ಬಿಸಿ ಬಿಸಿ ಸುದ್ದಿ

ಎಸ್ಟಿ ಸೇರ್ಪಡೆಗೆ 10ಕ್ಕೆ ಡಿಸಿ ಕಚೇರಿವರೆಗೆ ಪಾದಯಾತ್ರೆ; ಪ್ರಭು ಚನ್ನಪಟ್ಟಣ

ಸುರಪುರ:ವಿಶ್ವಕರ್ಮ ಸಮುದಾಯ ಎಸ್ಟಿಗೆ ಸೇರ್ಪಡೆಗೊಳಿಸುವಂತೆ ಆಗ್ರಹಿಸಿ ನಗರದ ಪತ್ರಿಕಾ ಭವನದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಮುಖಂಡರು ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮಹಾಸಭಾದ ತಾಲೂಕು ಅಧ್ಯಕ್ಷ ಪ್ರಭು ಚನ್ನಪಟ್ಟಣ ಮಾತನಾಡಿ, ಹಿಂದುಳಿದ ವಿಶ್ವಕರ್ಮ ಸಮಾಜಕ್ಕೆ ಎಸ್‍ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾ10 ರಂದು ತಾಲೂಕಿನ ಸುಕ್ಷೇತ್ರ ತಿಂಥಣಿ ಮೌನೇಶ್ವರ ದೇವಸ್ಥಾನದಿಂದ ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿವರೆಗೆ 81ಕಿಮೀ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವಿಶ್ವಕರ್ಮ ಸಮಾಜ ಬಹಳಷ್ಟು ಹಿಂದುಳಿದಿರುವ ಸಮಾಜವಾಗಿದ್ದು ಸರಕಾರಿ ಸೌಲಭ್ಯಗಳಿಂದ ವಂಚಿತಗೊಂಡಿದೆ ವಿಶ್ವಕರ್ಮ ಸಮಾಜಕ್ಕೆ ಎಸ್‍ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು ಸರಕಾರ ನಮ್ಮ ಮನವಿಗೆ ಸ್ಪಂದಿಸಿಲ್ಲ ಎಂದು ಹೇಳಿದ ಅವರು ವಿಶ್ವಕರ್ಮ ಸಮಾಜಕ್ಕೆ ಸರಕಾರ ನ್ಯಾಯ ಒದಗಿಸಿಕೊಡಬೇಕು ಬಹುದಿನಗಳ ಬೇಡಿಕೆಯಾಗಿರುವ ಎಸ್‍ಟಿ ಮೀಸಲಾತಿ ನೀಡುವಂತೆ ಒತ್ತಾಯಿಸಿ ಮಾ10 ರಿಂದ ನಾಲ್ಕು ದಿನಗಳವರೆಗೆ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು ಸಮಾಜದ ಬಾಂಧವರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪಾದಯಾತ್ರೆಯಲ್ಲಿ ಸಮಾಜದ ಸ್ವಾಮಿಗಳು, ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ಸೇರಿದಂತೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಪಾದಯಾತ್ರೆಯು ಮೊದಲ ದಿನ ಕುಂಬಾರಪೇಟ, ಎರಡನೇ ದಿನ ಶಹಾಪುರ, ಮೂರನೇ ದಿನದಂದು ನಾಯ್ಕಲ್ ಗ್ರಾಮದಲ್ಲಿ ವಾಸ್ತವ್ಯ ನಡೆಯಲಿದ್ದು ಮಾ13 ರಂದು ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಲಿದೆ ಕಚೇರಿ ಮುಂದೆ ಬೃಹತ್ ಪ್ರತಿಭಟನಾ ಸಮಾವೇಶ ಏರ್ಪಡಿಸಲಾಗಿದೆ ಸಾವಿರಾರು ಸಂಖ್ಯೆಯಲ್ಲಿ ಸಮಾಜದ ಬಾಂಧವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಇದೇ ಸಂದರ್ಭದಲ್ಲಿ ಪಾದಯಾತ್ರೆಯ ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ದೇವಿಂದ್ರಪ್ಪ ತಳವಾರಗೇರಾ, ಮಹೇಶಕುಮಾರ ಶಾರದಳ್ಳಿ, ಮಾನಪ್ಪ ನಾಲವಾರ, ಮಲ್ಲು ಬಡಿಗೇರ, ಚಂದ್ರು ಗೋಗಿ, ದೇವಿಂದ್ರಪ್ಪ ಬೈರಿಮಡ್ಡಿ, ಮಹೇಶ ವಿಶ್ವಕರ್ಮ, ಬಲಭೀಮ ಶೆಳ್ಳಗಿ, ಬಸವರಾಜ ಪತ್ತಾರ, ಮಹೇಶ ಸಗರ, ಮೌನೇಶ ಗುಡಿ ತಿಂಥಣಿ, ಶಿವಕುಮಾರ ವಿಶ್ವಕರ್ಮ, ಮೌನೇಶ ಕೋನಾಳ, ಗುರುರಾಜ ವಿಶ್ವಕರ್ಮ, ಶಂಕ್ರಪ್ಪ ಕಲಕೇರಿ, ರಾಜು ತಾಳಿಕೋಟಿ, ರಘುವೀರ ಸೂಗೂರು, ಬಸವರಾಜ ಜೂಜುಗಾರ ತಿಂಥಣಿ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

3 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

13 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

13 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

13 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago