ಬಿಸಿ ಬಿಸಿ ಸುದ್ದಿ

ಉಚಿತ ಉಜ್ವಲ ಯೋಜನೆ ಸರ್ಕಾರದ ಮೋಸ : ಬಾಲರಾಜ್ ಗುತ್ತೇದಾರ ಆರೋಪ

ಸೇಡಂ: ಉಜ್ವಲ ಯೋಜನೆಯಡಿ ಬಡ ಕುಟುಂಬಗಳಿಗೆ ಉಚಿತ ಸಿಲಿಂಡರ್ ಗ್ಯಾಸ್ ಸೌಲಭ್ಯ ಒದಗಿಸಿದ ಕೇಂದ್ರ ಬಿಜೆಪಿ ಸರ್ಕಾರ, ಈಗ ನಿರಂತರವಾಗಿ ಬೆಲೆ ಏರಿಕೆಯ ಭಾರ ಹೊರೆಸುವ ಮೂಲಕ ಬಡವರಿಗೆ ಮೋಸ ಮಾಡಿದೆ ಎಂದು ಸೇಡಂ‌ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಾಲರಾಜ್ ಗುತ್ತೇದಾರ ಆರೋಪಿಸಿದ್ದಾರೆ.

ಗೃಹಬಳಕೆ ಅನಿಲ ಸಿಲಿಂಡರ್ ಬೆಲೆ ರೂ.50 ಹೆಚ್ಚಿಸಿದ ಕೇಂದ್ರ ಸರ್ಕಾರದ ಹೇರಿಕೆ ಕ್ರಮವನ್ನು ಖಂಡಿಸಿ ಪತ್ರಿಕಾ ಪ್ರಕಟಣೆಯ‌ ಮೂಲಕ ಮಾತನಾಡಿ ಕಳೆದ ಹನ್ನೆರಡು ತಿಂಗಳಲ್ಲಿ ಆರನೇ ಬಾರಿಗೆ ಅಡುಗೆ ಅನಿಲ ದರ ಏರಿಕೆಯಾಗಿದೆ. ಕೇಂದ್ರ ಬಿಜೆಪಿ ಸರ್ಕಾರ ಬಜೆಟಿನಲ್ಲಿ ಅಡುಗೆ ಅನಿಲದ ಸಬ್ಸಿಡಿಯನ್ನು ಶೇ.75 ರಷ್ಟು ಕಡಿತ ಮಾಡಿದ್ದರಿಂದ ಜನಸಾಮಾನ್ಯರ ಮೇಲೆ ನಿರೀಕ್ಷಿತ ದರ ಏರಿಕೆಯ ಹೊರೆ ಬಿದ್ದಿದೆ.

ಆದರೆ ಜಾಗತಿಕವಾಗಿ ಕಚ್ಚಾತೈಲದ ದರ ಇಳಿಕೆಯಾಗಿದೆ. ಅಲ್ಲದೆ ಭಾರತ ರಷ್ಯಾದಿಂದ ಕಡಿಮೆ ಬೆಲೆಗೆ ಕಚ್ಚಾತೈಲವನ್ನು ಆಮದು ಮಾಡುವ ಪ್ರಮಾಣವು ಹೆಚ್ಚಾಗಿದೆ ಎಂಬುದು ಗಮನಿಸಬೇಕಾದ ಸಂಗತಿಯಾಗಿದೆ ಎಂದಿದ್ದಾರೆ.

ಉಜ್ವಲ ಯೋಜನೆಯಡಿ ಬಡವರಿಗೆ ಉಚಿತವಾಗಿ ಅನಿಲ ಸಂಪರ್ಕ ನೀಡಲಾಗಿದೆ ಎಂದು ಬೀಗುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಬಡವರ ಕಣ್ಣೀರಿಗೆ ಕಾರಣವಾಗಿದ್ದಾರೆ. ಈ ಉಜ್ವಲ ಫಲಾನುಭವಿಗಳೂ ಕೂಡ ಮಾರುಕಟ್ಟೆಯಲ್ಲಿ ಇದೇ ದರ ನೀಡಿ ಖರೀದಿಸಬೇಕಾದ ಅನಿವಾರ್ಯ ಪ್ರಸಂಗ ಸೃಷ್ಠಿಸಿ ಬಡ ಜನರಿಗೆ ದೋಖಾ ಮಾಡಿದ್ದಾರೆ.

ಜನಸಾಮಾನ್ಯರು ಬಳಸುವ ಈ ಅಡುಗೆ ಅನಿಲ ದರ ಏರಿಕೆ ಮಾಡಿರುವ ಬಿಜೆಪಿ ಸರ್ಕಾರದ ಕ್ರಮ ಜನವಿರೋಧಿಯಾಗಿದೆ ಎಂದರು

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

16 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

19 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

1 day ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

1 day ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

2 days ago