ಕಲಬುರಗಿ: ಶರಣಬಸಪ್ಪ ಎಸ್. ದೊಡಮನಿ ಇವರನ್ನು ರಾಜ್ಯ ಹಿರಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಹಾಗೇ ಶ್ರೀಮಂತ ಮಾವನೂರ ಅವರನ್ನು ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀ ಸಮಾಜ ಪಕ್ಷದ ರಾಜ್ಯಾಧ್ಯಕ್ಷರಾದ ಧರ್ಮಣ್ಣ ತೊಂಟಾಪುರವರು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಪಕ್ಷದ ಸಂಸ್ಥಾಪಕ ಅಧ್ಯಕ್ಷರಾದ ಮಹಾದೇವ ಜಾನಕರ ಅವರ ಮೌಖಿಕ ಆದೇಶದ ಮೇರೆಗೆ ನಿಮ್ಮನ್ನು ನೇಮಕ ಮಾಡಲಾಗಿದೆ. ಆದ್ದರಿಂದ ಹೊಸ ಚಿಂತನೆಯೊಂದಿಗೆ ಸ್ಥಾಪಿತವಾಗಿರುವ ರಾಷ್ಟ್ರೀಯ ಸಮಾಜ ಪಕ್ಷದ ಸಂಘಟನೆಗಾಗಿ ತಾವು ತಕ್ಷಣಕ್ಕೆ ರಾಜ್ಯವಾಪಿಯಾಗಿ
ಎಲ್ಲಾ ಸಮಾಜದ ಜೊತೆಗೆ ಆತ್ಮೀಯವಾಗಿ ಗುರ್ತಿಸಿಕೊಂಡು ಜನರ ಸಮಸ್ಯೆಗಳನ್ನು ನಿವಾರಣೆ ಮಾಡುವುದರೊಂದಿಗೆ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರೆಂದು ಪರಿಗಣಿಸಿ, ನಿಮ್ಮನ್ನು ಆಯ್ಕೆ ಮಾಡಲಾಗಿದೆ.
ರಾಜ್ಯ ಹಿರಿಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ನೀವು, ರಾಷ್ಟ್ರೀಯ ಸಮಾಜ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ರಾಜ್ಯವಾಪಿಯಾಗಿ ಪಕ್ಷದ ವಿಭಾಗಿಯ ಅಧ್ಯಕ್ಷರು ಹಾಗೂ ಜಿಲ್ಲಾಧ್ಯಕ್ಷರೊಂದಿಗೆ ಸಮಾಲೋಚಿಸಿ ವಿಭಾಗ, ಜಿಲ್ಲೆ ಮತ್ತು ತಾಲ್ಲೂಕುವಾರು ಪದಾಧಿಕಾರಿಗಳನ್ನು ನೇಮಿಸಿ ಪಕ್ಷ ಸಂಘಟನೆಗೆ ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಹಾಗೇ ಎಲ್ಲಾ ಕಾರ್ಯಕರ್ತರನ್ನು ಮತ್ತು ಸಮಾಜದ ಮುಖಂಡರ ಸಹಕಾರದೊಂದಿಗೆ ಅತ್ಯಂತ ಕ್ರಿಯಾಶೀಲವಾಗಿ ಪಕ್ಷ ಸಂಘಟನೆ ಮಾಡುತ್ತಿರೆಂದು ನಂಬಿ ಈ ಆದೇಶ ಪತ್ರವನ್ನು ನೀಡಿ ಇಂದಿನಿಂದಲೇ ಕಾರ್ಯೋನಮುಖರಾಗಲು ಕೋರಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ, ಯುಭಾಗಿಯ ಅಧ್ಯಕ್ಷರಾದ ಶರಣಪ್ಪ ಎ. ಪೂಜಾರಿ ಜೇವರ್ಗಿ ತಾಲೂಕಿನ ಉಪಾಧ್ಯಕ್ಷರಾದ ಮಾಂತೇಶ ತಳವಾರ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…