ಬಿಸಿ ಬಿಸಿ ಸುದ್ದಿ

ಶಹಾಬಾದ: ವಿಜಯ ಸಂಕಲ್ಪ ಯಾತ್ರೆ- ಎಲ್ಲೆಡೆ ಬಿಜೆಪಿ ಧ್ವಜಗಳು

ಕಲಬುರಗಿ:ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ಜಿಲ್ಲೆಯ ಶಹಾಬಾದ ನಗರ ಸಜ್ಜಾಗಿದೆ.ನಗರದಲ್ಲೆಡೆ ಬಿಜೆಪಿ ಧ್ವಜ ಮತ್ತು ಕಟೌಟ್‍ಗಳು ರಾರಾಜಿಸುತ್ತಿವೆ.ಕೇಸರಿ ಬಣ್ಣ ಬಟ್ಟೆಯ ಸ್ವಾಗತ ಕಮಾನುಗಳು, ರಸ್ತೆಯ ತುಂಬೆಲ್ಲಾ ಪರಾರಿಗಳು ಕಟ್ಟಿದ್ದು ನಗರ ಕಂಗೊಳಿಸುತ್ತಿದೆ.

ಶಹಾಬಾದ ನಗರದ ವಾಡಿ ವೃತ್ತದಿಂದ ಬಸವೇಶ್ವರ ವೃತ್ತ ಹಾಗೂ ಬಸವೇಶ್ವರ ವೃತ್ತದಿಂದ ನೆಹರು ವೃತ್ತದವರೆಗಿನ ಮುಖ್ಯ ರಸ್ತೆಯುದಕ್ಕೂ ಎರಡು ಕಡೆ ಕಟ್ಟಿಗೆಯ ಕೋಲುಗಳನ್ನು ಅಳವಡಿಸಿ ಧ್ವಜಗಳನ್ನು ಕಟ್ಟಲಾಗಿದೆ. ನಗರದ ಬಸವೇಶ್ವರ ವೃತ್ತದಲ್ಲಿ ಮಂಟಪ ನಿರ್ಮಿಸಲಾಗಿದೆ.ಅಲ್ಲದೇ ಮುಖ್ಯ ರಸ್ತೆಯ ಮಧ್ಯದ ಡಿವೈಡರ್ದಲ್ಲಿನ ಪ್ರತಿ ವಿದ್ಯುತ್ ಕಂಬಗಳಿಗೆ ಕಟೌಟ್ ಕಟ್ಟಲಾಗಿದೆ. ನಗರದ ಸಹರಾ ಫಂಕ್ಷನ್ ಹಾಲ್‍ನಲ್ಲಿ ಊಟದ ವ್ಯವಸ್ಥೆಯೂ ಮಾಡಲಾಗಿದೆ.

ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹೆಲಿಕಾಪ್ಟರ್ ಮೂಲಕ ಜಿಇ ಕಾರ್ಖಾನೆಯ ಹೆಲಿಪ್ಯಾಡಗೆ ಆಗಮಿಸುವರು.10:20 ಗಂಟೆಗೆ ಬಸವೇಶ್ವರ ವೃತ್ತದಿಂದ ನೆಹರು ವೃತ್ತಕ್ಕೆ ತೆರಳುವರು. ಬಾಬು ಜಗಜೀವನರಾಮ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವರು.ನಂತರ ನೆಹರು ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ವಿಜಯ ಸಂಕಲ್ಪ ಯಾತ್ರೆ-3 ಮೆರವಣಿಗೆ ನಡೆಯಲಿದೆ.

ಜಗದೀಶ ಶೆಟ್ಟರ್, ಕೇಂದ್ರ ಸಚಿವ ಭಗವಂತ ಖೂಬಾ, ಸಚಿವರಾದ ಬಿ.ಶ್ರೀರಾಮಲು,ಪ್ರಭು ಚವ್ಹಾಣ, ಹಾಲಪ್ಪ ಆಚಾರ್, ಆನಂದಸಿಂಗ, ಅರವಿಂದ ಲಿಂಬಾವಳಿ, ಬಾಬುರಾವ ಚಿಂಚನಸೂರ,ಮಾಲಿಕಯ್ಯ ಗುತ್ತೆದಾರ,ಸಿದ್ಧರಾಜು, ಮಾರುತಿರಾವ ಮೂಳೆ, ಕಲಬುರಗಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಭಾಗವಹಿಸಲಿದ್ದಾರೆ.

ಅಲ್ಲದೇ ಮಂಡಲ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರು ಸೇರಲಿದ್ದಾರೆ ಎಂದು ಮಂಡಲ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ ತಿಳಿಸಿದ್ದಾರೆ.

ಶಾಸಕ ಬಸವರಾಜ ಮತ್ತಿಮಡು ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಹೀಗಾಗಿ ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಬಸವರಾಜ ಮತ್ತಿಮಡು ಅವರನ್ನು ಗೆಲ್ಲಿಸಬೇಕಿದೆ. ಎಂದರು.ಗ್ರಾಮೀಣ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉತ್ತಮವಾಗಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಗಮನದಿಂದ ಪಕ್ಷಕ್ಕೆ ಇನ್ನಷ್ಟು ಶಕ್ತಿ ಮತ್ತು ಕಾರ್ಯಕರ್ತರಲ್ಲಿ ಚೈತನ್ಯ ತುಂಬಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ- ಅಣವೀರ ಇಂಗಿನಶೆಟ್ಟಿ ಅಧ್ಯಕ್ಷ ಬಿಜೆಪಿ ಮಂಡಲ ಶಹಾಬಾದ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago