ಇಬ್ಬರು ಮಾಜಿ ಸಿಎಂಗಳ ದೇಗುಲ ದರ್ಶನ

0
39

ಕಲಬುರಗಿ; ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರಿಗೆ ದಾಸೋಹ ಮಹಾಮನೆಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಜಗದೀಶ ಶೆಟ್ಟರ್ ಅವರು ಭೇಟಿ ಮಾಡಿ, ಆಯುರಾರೋಗ್ಯ ವಿಚಾರಿಸಿ ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲು ಕಲಬುರಗಿ ನಗರಕ್ಕೆ ಆಗಮಿಸಿದ್ದ ಯಡಿಯೂರಪ್ಪ ಹಾಗೂ ಶೆಟ್ಟರ್ ಅವರೊಂದಿಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಎಂಎಲ್ಸಿ ಶ್ರೀ ಎನ್ ರವಿಕುಮಾರ್, ಗುಲ್ಬರ್ಗ ದಕ್ಷಿಣ ಮತಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಎಂಎಲ್ಸಿ ಬಿ ಜಿ ಪಾಟೀಲ್, ಮಾಜಿ ಸಚಿವ ಸುನೀಲ್ ವಲ್ಯಾಪುರ, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ ಮತ್ತಿತರರು ಆಗಮಿಸಿ, 18ನೇ ಶತಮಾನದ ಸಂತ ಶರಣಬಸವೇಶ್ವರರ ಸಮಾಧಿಗೆ ಪೂಜೆ ಸಲ್ಲಿಸಿ, ಪ್ರಧಾನ ದೇವರಿಗೆ ನಮನ ಸಲ್ಲಿಸಿದರು.

Contact Your\'s Advertisement; 9902492681

ನಂತರ ಪೂಜ್ಯ ಡಾ.ಅಪ್ಪಾಜಿ ಹಾಗೂ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು. ವಿಶ್ವವಿದ್ಯಾಲಯದ ಕುಲಸಚಿವ ಡಾ.ಅನಿಲಕುಮಾರ ಬಿಡವೆ ಅವರು ಸಂಸ್ಥಾನ ಮತ್ತು ಸಂಘದ ವಿವಿಧ ಚಟುವಟಿಕೆಗಳನ್ನು ವಿವರಿಸಿ, ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮಂಜೂರಾದ ಶರಣಬಸವ ವಿಶ್ವವಿದ್ಯಾಲಯವು ಬಹು ಶಿಸ್ತೀಯ ಕೋರ್ಸ್ ಗಳೊಂದಿಗೆ ರಾಜ್ಯದಲ್ಲಿ ಶಿಕ್ಷಣ ನೀಡುತ್ತಿರುವ ಅತ್ಯುತ್ತಮ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದರು.

ಯಡಿಯೂರಪ್ಪ ಮತ್ತು ಶೆಟ್ಟರ್ ಇಬ್ಬರೂ ಪೂಜ್ಯ ಡಾ ಅಪ್ಪಾಜಿಯವರಿಗೆ ನಮನ ಸಲ್ಲಿಸಿದರು. ಪೂಜ್ಯ ಡಾ.ಅಪ್ಪಾಜಿಯವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಎನ್ ರವಿಕುಮಾರ್ ಸೇರಿದಂತೆ ಇತರರನ್ನು ಸನ್ಮಾನಿಸಲಾಯಿತು. ಶರಣಬಸವ ವಿಶ್ವವಿದ್ಯಾಲಯದ ಡೀನ್ ಡಾ.ಲಕ್ಷ್ಮೀ ಪಾಟೀಲ್ ಮಾಕಾ, ಡಾ.ಅಲ್ಲಮಪ್ರಭು ದೇಶಮುಖ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here