ಕಲಬುರಗಿ: ಬರುವ ವಿಧಾನಸಭಾ ಚುನಾವಣೆಯ ರಾಜಕೀಯ ಪಕ್ಷಗಳ ಪ್ರಣಾಳಿಕೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಪ್ರತಿ ಬಜೆಟ್‍ನಲ್ಲಿ ಕನಿಷ್ಠ 15ರಷ್ಟು ಅನುದಾನ ಮೀಸಲಿಡಬೇಕು. ಈ ಬಾರಿ ನಮ್ಮ ಮತ ಗುಣಾತ್ಮಕ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಗಾಗಿ 29 ಶಿಕ್ಷಣ ಸಂಘಟನೆಗಳು ಧ್ಯೇಯ ಇಟ್ಟುಕೊಂಡು ಮತ ಚಲಾಯಿಸಲು ನಿರ್ಧರಿಸಲಾಗಿದೆ ಎಂದು ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನ ಸಮನ್ವಯದ ಪ್ರಮುಖ ನಿರಂಜನಾರಾಧ್ಯ ವಿ.ಪಿ ಹೇಳಿದರು.
ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ ಅವರು. ಸರಕಾರಿ ಶಾಲೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಸರಕಾರಿ ನೌಕರರ ಮಕ್ಕಳು, ನ್ಯಾಯಾಧೀಶರ ಮತ್ತು ರಾಜಕಾರಣಿಗಳ ಮಕ್ಕಳನ್ನೂ ಸರಕಾರಿ ಶಾಲೆಯಲ್ಲಿ ದಾಖಲಾತಿಗೊಳಿಸುವಂತಾಗಬೇಕು. ಈ ಬಗ್ಗೆ ಶಿಫಾರಸು ಮಾಡಿರುವ ವರದಿಯನ್ನು ಯಥಾವತ್ತಾಗಿ ಜಾರಿಗೆ ತರಬೇಕು. ಜಾತಿ, ಧರ್ಮ, ದ್ವೇಷ ಸಾಕು ಶಿಕ್ಷಣದ ಮೂಲಭೂತ ಹಕ್ಕು ಬೇಕು. ಹೀಗಾಗಿ ಸರಕಾರಿ ಶಾಲೆಗಳ ವಿಲೀನ ಮತ್ತು ಬಂದ್ ಮಾಡುವ ಪ್ರಕ್ರಿಯೆ ಕೈಬಿಡಬೇಕು ಎಂದು ಆಗ್ರಹಿಸಿದರು.
ದೆಹಲಿಯಲ್ಲಿ ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಬಜೆಟ್‍ನಲ್ಲಿ ಶೇ.20ರಷ್ಟು ಅನುದಾನ ಮೀಸಲಿಟಿದ್ದು, ಆದರೆ ಸದ್ಯದ ಸರಕಾರ ಕೇವಲ 10ರಷ್ಟು ಅನುದಾನ ಒದಗಿಸಿದೆ. ಹೀಗಾಗಿ, ಗುಣಾತ್ಮಕ ಶಿಕ್ಷಣ ತರುವ ನಿಟ್ಟಿನಲ್ಲಿ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ಇದಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಗ್ರಾಮೀಣ ಭಾಗದ ಸರಕಾರಿ ಶಾಲೆ, ಸ್ಲಂ ಏರಿಯಾದ ಶಾಲೆಗಳ ಮಕ್ಕಳಿಗೆ ಸಮರ್ಪಕವಾಗಿ ಶಿಕ್ಷಣ, ಆರೋಗ್ಯ ಮತ್ತು ಶುದ್ಧ ಕುಡಿಯುವ ನೀರಿನ ಒದಗಿಸುವಂತಲು ಕ್ರಮವಹಿಸಬೇಕು. ಬಾಲ್ಯ ಪೂರ್ವ ಆರೈಕೆ, ಶಿಕ್ಷಣವೂ ಒಳಗೊಂಡಂತೆ ಕನಿಷ್ಠ 12 ನೇ ತರಗತಿಯವರೆಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ವಿಸ್ತರಿಸಬೇಕು. ಈ ಬಗ್ಗೆ ಸಂವಿಧಾನ ಹಾಗೂ ಶಿಕ್ಷಣ ಹಕ್ಕು ಕಾಯಿದೆಗೆ ಅಗತ್ಯ ತಿದ್ದುಪಡಿ ತರಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.
ಪರಮೇಶ್ವರ ದೇಸಾಯಿ, ಸುನಿಲ್ ಹುಡಗಿ, ಜೀಶಾನ್ ಅಖಿಲ ಸಿದ್ಧಿಕಿ, ರಾಜೇಂದ್ರ ರಾಜವಾಳ, ಜಗದೇವಿ, ಆನಂದರಾಜ್, ಮಸ್ತಾನ ಬಿರಾದಾರ್, ದತ್ತಾತ್ರೇಯ ಇಕ್ಕಳಕಿ ಇತರರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…