ಕಲಬುರಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

0
63

ಬೆಂಗಳೂರು; ಕಲಬುರಗಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಶೀಘ್ರಲಿಪಿಕಾರರು -08, ಬೆರಳಚ್ಚುಗಾರರು-09, ಬೆರಳಚ್ಚು ನಕಲುಗಾರರು- 01, ಆದೇಶಜಾರಿಕಾರ- 13, ಜವಾನರು- 29 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಶೀಘ್ರಲಿಪಿಕಾರರು, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು ಹುದ್ದೆಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಮತ್ತು ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

Contact Your\'s Advertisement; 9902492681

ಆದೇಶ ಜಾರಿಕಾರ ಹಾಗೂ ಜವಾನರ ಹುದ್ದೆಗಳಿಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಲಘುವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮಾರ್ಚ್ 25 ಕೊನೆಯ ದಿನಾಂಕವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಾಲತಾಣ https://districts.ecourts.gov.in/kalaburagi ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here