ಬಿಸಿ ಬಿಸಿ ಸುದ್ದಿ

ಪರಿಶಿಷ್ಟರ ಕಲ್ಯಾಣಕ್ಕೆ ವಿನೂತನ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ; ಮುಖ್ಯಮಂತ್ರಿ ಮೆಚ್ಚುಗೆ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪಂಗಡದವರ ಶ್ರೇಯೋಭಿವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆಯು  ಅನೇಕ ವಿನೂತನ ಮಾದರಿಯ ಕಾರ್ಯಕ್ರಮಗಳನ್ನು ರೂಪಿಸಲಾಗಿದ್ದು, ಪಾರದರ್ಶಕ ಹಾಗೂ  ಪರಿಣಾಮಕಾರಿಯಾಗಿ  ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪಿಸುವ ಉದ್ದೇಶದಿಂದ   ತತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುದ್ದು, ಇಂತಹ  ಕಾರ್ಯಕ್ರಮವು ಐತಿಹಾಸಿಕ ಕಾರ್ಯಕ್ರಮವಾಗಿದೆ  ಎಂದು ಮುಖ್ಯಮಂತ್ರಿಗಳಾದ  ಶ್ರೀ ಬಸರವಾಜ ಎಸ್. ಬೊಮ್ಮಾಯಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಧಾನಸೌಧದ ಮುಂಭಾದದಲ್ಲಿಂದು  ಸಮಾಜ ಕಲ್ಯಾಣ ಇಲಾಖೆಯು   ಆಯೋಜಿಸಲಾಗಿದ್ದ  ಪರಿಶಿಷ್ಟ ಜಾತಿ ಮತ್ತು ವರ್ಗದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದ ಆಶಯಗಳಂತೆ  ಪ.ಜಾತಿ ಮತ್ತು ಪ.ಪಂಗಡ ಸಮುದಾಯದವರ ಶೈಕ್ಷಣಿಕ, ಸಾಮಾಜಿಕ ಅಭಿವೃದ್ಧಿ,   ಉದ್ಯೋಗ ಮತ್ತು ಸಬಲೀಕರಣಕ್ಕಾಗಿ ಎಲ್ಲಾ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಅನೇಕ ವಿಶಿಷ್ಟ, ವಿನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುμÁ್ಠನಗೊಳಿಸಲಾಗುತ್ತಿದೆ.

ಸರ್ಕಾರದ ಯೋಜನೆಗಳನ್ನು ಪಾರದರ್ಶಕವಾಗಿ ಅನುμÁ್ಠನಗೊಳಿಸುವ ಹಿನ್ನೆಲೆಯಲ್ಲಿ  ಯೋಜನೆಗಳನ್ನು   ನೇರವಾಗಿ ಫಲಾನುಭವಿಗಳಿಗೆ ತಲುಪಿಸುವ ಸದುದ್ದೇಶದಿಂದ ನಿಗಮಗಳ ಮೂಲಕ ಅನುμÁ್ಠನಗೊಳಿಸುತ್ತಿರುವ ಗಂಗಾ ಕಲ್ಯಾಣ ಯೋಜನೆಯನ್ನು ಪ್ರಪ್ರಥಮ ಬಾರಿಗೆ  ಡಿಬಿಟಿ ಮೂಲಕ ಅನುμÁ್ಠನಗೊಳಿಸು ಇಂದು ಚಾಲನೆ ನೀಡಲಾಗಿದೆ. ಇದೊಂದು ಐತಿಹಾಸಿಕ ಯೋಜನೆಯಾಗಿದೆ.  ಗಂಗಾ ಕಲ್ಯಾಣ  ಯೋಜನೆಯಡಿ 17,729  ಫಲಾನುಭವಿಗಳಿಗೆ ಕೊಳವೆ ಬಾವಿಗಳನ್ನು ಕೊರೆಸಲಾಗುವುದು.  ಕೊಳವೆ ಬಾವಿ ಕೊರೆದ ನಂತರ ಹಾಗೂ ಪಂಪ್ ಸೆಟ್ ಸರಬರಾಜು ಆದ ನಂತರ ಹಣವನ್ನು ಡಿಬಿಟಿ ಮೂಲಕ ಫಲಾನುಭವಿಯ ಮೊಬೈಲ್ ಗೆ ವರ್ಗಾವಣೆ ಇ Rupi Voucher  ರೂಪದಲ್ಲಿ ಮಾಡಲಾಗುತ್ತದೆ. ನಂತರ ಫಲಾನುಭವಿಗಳು ಹಣವನ್ನು ನೇರವಾಗಿ ಗುತ್ತಿಗೆದಾರರರಿಗೆ  ಇ Rupi Voucher ಮೂಲಕ ಪಾವತಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ನಿಗಮಗಳಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಯುವಕರಲ್ಲಿ ಸ್ವಯಂ ಉದ್ಯೋಗವನ್ನು ಉತ್ತೇಜಿಸಲು ರೂ.70,000/-ಗಳ ಘಟಕವೆಚ್ಚದಲ್ಲಿ ಡಾ. ಬಾಬು ಜಗಜೀವನರಾಂ ದ್ವಿ-ಚಕ್ರ ವಾಹನ ಸರಕು ಸಾಗಾಣಿಕೆ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಈ ಯೋಜನೆಯಡಿ   ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ವಾಹನಗಳಂತೆ ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ 22,400 ಹಾಗೂ ವಿವೇಚನಾ ಕೋಟಾದಡಿ 5,600 ಒಟ್ಟಾರೆ ರಾಜ್ಯಾದ್ಯಂತ  28,000 ಗುರಿಯನ್ನು ನಿಗಧಿಪಡಿಸಿದ್ದು, ರೂ. 196.00 ಕೋಟಿ ವಿನಿಯೋಗಿಸಲಾಗುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 100 ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳನ್ನು ಹಾಗೂ 11 ಕ್ರೆಸ್ ವಸತಿ ಶಾಲೆಗಳ ಕಟ್ಟಡ ನಿರ್ಮಾಣ ಮಾಡಲು ಕ್ರಮವಹಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಒದಗಿಸಿದ ಅನುದಾನದಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲೆಗಳನ್ನು ಒಟ್ಟು ರೂ. 204  ಕೋಟಿಗಳಲ್ಲಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ವಿದ್ಯಾರ್ಥಿ ನಿಲಯಗಳ ಕೊರತೆಯಿಂದ   ದೊರಕದ   33,000 ವಿದ್ಯಾರ್ಥಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ವಿದ್ಯಾಭ್ಯಾಸಕ್ಕೆ ಪೂರಕವಾಗಿ ಕ್ರಮಕೈಗೊಳ್ಳಲಾಗಿದೆ. ಈ ವರ್ಷ ವಿದ್ಯಾರ್ಥಿ ನಿಲಯಗಳ ಕೊರತೆಯಿಂದ ದೊರಕದ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಪರ್ಯಾಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೊಟ್ಟಮೊದಲ ಬಾರಿಗೆ ಎಸ್.ಸಿ/ಎಸ್.ಟಿ/ಹಿಂದುಳಿದ ಮತ್ತು ಅಲ್ಪಸಂಖ್ಯಾತ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಸಾಮರಸ್ಯ ಮೂಡಿಸಲು “ದೀನದಯಾಳ್ ಉಪಾಧ್ಯಾಯ ಸೌಹಾರ್ದ ವಿದ್ಯಾರ್ಥಿನಿಲಯ” ಎಂಬ ಹೊಸ ಯೋಜನೆಯಡಿ ರಾಜ್ಯದ ಶೈಕ್ಷಣಿಕ ಕೇಂದ್ರಗಳಾದ ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು ಮತ್ತು ಮೈಸೂರಿನಲ್ಲಿ ತಲಾ 1000 ಸಾಮಥ್ರ್ಯದ ಬಹುಮಹಡಿಯ ವಿದ್ಯಾರ್ಥಿನಿಲಯ ಸಮುಚ್ಛಯಗಳನ್ನು ರೂ. 250  ಕೋಟಿಗಳ ಮೊತ್ತದಲ್ಲಿ ನಿರ್ಮಿಸಲು ಕ್ರಮವಹಿಸಲಾಗುತ್ತಿದೆ.

ಪ್ರಸಕ್ತಸಾಲಿನಲ್ಲಿಸಮುದಾಯದಶ್ರಯೋಭಿವೃದ್ಧಿಗಾಗಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಅಡಿ ರೂ. 31000  ಕೋಟಿಗಳನ್ನು ಮೀಸಲಿಡಲಾಗಿದೆ.  ಶಿಕ್ಷಣ ಮತ್ತು ಉದ್ಯೋಗ ಮಿಸಲಾತಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ. 15 ರಿಂದ ಶೇ.17ರವರೆಗೆ ಹಾಗೂ  ಪರಿಶಿಷ್ಟ ಪಂಗಡದವರಿಗೆ 3% ನಿಂದ 7% ಕ್ಕೆ ಹೆಚ್ಚಿಸಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಉದ್ಯೋಗ ಪಡೆಯಲು ಹೆಚ್ಚಿನ ಅವಕಾಶ ಕಲ್ಪಿಸಲಾಗಿದೆ.ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿವಿಧ  ನಿಗಮಗಳಿಗೆ   ಸ್ವಯಂ ಉದ್ಯೋಗ, ಗಂಗಾ ಕಲ್ಯಾಣ, ಭೂ ಒಡೆತನ ಇತ್ಯಾದಿ ಕಾರ್ಯಕ್ರಮಗಳಿಗೆ ಪ್ರಸಕ್ತ ಸಾಲಿನ ಒಟ್ಟು ರೂ. 1000 ಕೋಟಿ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಒದಗಿಸಿದ ಅನುದಾನದಲ್ಲಿ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿನಿಲಯ ಮತ್ತು ವಸತಿ ಶಾಲೆಗಳನ್ನು ಒಟ್ಟು ರೂ. 204  ಕೋಟಿಗಳಲ್ಲಿ ನಿರ್ಮಾಣ ಮಾಡಲು ಅನುಮೋದನೆ ನೀಡಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ಧನ ಯೋಜನೆಯಡಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಒಟ್ಟು 1,46,577   ವಿದ್ಯಾರ್ಥಿಗಳಿಗೆ ರೂ. 243 ಕೋಟಿ ಪೆÇ್ರೀತ್ಸಾಹ ಧನ ನೀಡಲಾಗಿದೆ.

ಪ್ರಬುದ್ಧ ಯೋಜನೆಯಡಿ  ಪ್ರಸಕ್ತ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕಾಗಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ 133  ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿದೆ. ಪರಿಶಿಷ್ಟ ಜಾತಿ ಅಲೆಮಾರಿ, ಅರೆ ಅಲೆಮಾರಿ, ಸೂಕ್ಮ ಅತೀ ಸೂಕ್ಷ್ಮ ಸಮುದಾಯದ ಜನರ ಅಭಿವೃದ್ಧಿಗಾಗಿ ರೂ.50 ಕೋಟಿ ಅನುದಾನ ಒದಗಿಸಲಾಗಿದ್ದು, ಕಾರ್ಯಕ್ರಮಗಳನ್ನು ಅನುμÁ್ಠನಗೊಳಿಸಲಾಗುತ್ತಿದೆ.

ಪ.ಜಾತಿ ಉದ್ಯಮಿಗಳಿಗೆ 4 ಬಡ್ಡಿ ಸಹಾಯಧನ ಯೋಜನೆಗೆ ರೂ.  58.87 ಕೋಟಿ ಅನುದಾನ ಒದಗಿಸಲಾಗಿದೆ. ಇದುವರೆಗೆ 1049 ಉದ್ಯಮಿಗಳಿಗೆ ಬಡ್ಡಿ ಸಹಾಯಧನ ಸೌಲಭ್ಯ ಒದಗಿಸಲಾಗಿದೆ.ಪ.ಜಾತಿ/ ಪ.ಪಂಗಡದವರು ಉದ್ಯಮವನ್ನು ಸ್ಥಾಪಿಸಲು ಕೈಗಾರಿಕಾ ನಿವೇಶನ / ಶೆಡ್ಗಳಿಗಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಗೆ ಒಟ್ಟು ರೂ.200 ಕೋಟಿ ಅನುದಾನ ಒದಗಿಸಲಾಗಿದೆ.  24000 ಪೌರಕಾರ್ಮಿಕರಿಗೆ ಜೀವನ ಬದ್ರತೆಗಾಗಿ ಖಾಯಂ ಗೊಳಿಸಲು ಆದೇಶ ನೀಡಲಾಗಿದೆ.  300 ಪೌರ ಕಾರ್ಮಿಕರನ್ನು ಸ್ವಚ್ಚತೆ ಕುರಿತು ಅಧ್ಯಯನ ನಡೆಸಲು ಸಿಂಗಪುರ ವಿದೇಶ ಪ್ರವಾಸಕ್ಕೆ ಇಂದು ಹಸಿರು ನಿಶಾನೆ ನೀಡಲಾಗಿದೆ ಎಂದು ಅವರು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ವರ್ಗದ ಸಮುದಾಯಗಳು ಅಭಿವೃದ್ಧಿಯಾದರೆ ಒಟ್ಟಾರೆ ರಾಜ್ಯದ ಅಭಿವೃದ್ಧಿಯಾಗುವುದು. ಸಮ ಸಮಾಜದ ನಿರ್ಮಾಣ, ಸಮಾನ ಅವಕಾಶ,  ಸಮಾನ  ಬದುಕು ಎನ್ನವ  ಆಶಯ ಡಾ. ಬಿ.ಆರ್. ಅಂಬೇಡ್ಕರ್,   ಬಾಬು ಜಗಜೀವನರಾಂ, ಡಾ. ಬಿ.ಆರ್. ಅಂಬೇಡ್ಕರ್,  ಮಹರ್ಷಿ ವಾಲ್ಮೀಕಿ ಅವರದೂ ಆಗಿತ್ತು. ಸಮುದಾಯದಲ್ಲಿ ಆತ್ಮ ವಿಶ್ವಾಸ ಹೆಚ್ಚಳವಾಗಿ, ಸ್ವಾಭಿಮಾನದಿಂದ ಸ್ವಾವಲಂಭಿಗಳಾಗಿ ಜೀವನ ನಡೆಸಬೇಕು. ಇಂದು ಸಮುದಾಯವು ಗೌರವದಿಂದ ಬದುಕುವ ಕಾಲಬಂದಿದೆ. ಸಮುದಾಯದ ಏಳಿಗೆಗಾಗಿ  ಪುಣ್ಯದ ಕೆಲಸ ಮಾಡುವ ಅವಕಾಶ ತಮಗೆ ಬಂದಿದ್ದು, ಸಂತೋಷದಿಂದ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಸಮುದಾಯದ ಏಳಿಗೆಗೆ ಪೂರಕವಾಗಿ  ಸೂಕ್ಷ್ಮ ವಿಚಾರಗಳನ್ನು ತಳಹಂತದಿಂದ ತಿಳಿಯಬೇಕಾಗಿದೆ.  ಸರ್ಕಾರದ ಸೌಲಭ್ಯಗಳು ಗ್ರಾಮೀಣ ಪ್ರದೇಶ, ಕಾಲೋನಿಗಳಲ್ಲಿರುವ ನಿರಕ್ಷರ ಕುಕ್ಷಿಗಳಿಗೂ, ಮುಖ್ಯವಾಹಿನಿಯಲ್ಲಿದ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ದೊರಕುವಂತಾಗಬೇಕು. ಇಂತಹವರ ಬಗ್ಗೆ ಚಿಂತನೆ ನಡೆಸಬೇಕು. ಅವರಿಗೆ ಅರಿವು ಜಾಗೃತಿ ಮೂಡಿಸಿ ಸೌಲಭ್ಯ ದೊರಕುವಂತಾಗಬೇಕು.  ಸಮುದಾಯದ ಏಳಿಗಾಗಿ ಎಲ್ಲರೂ ಒಗ್ಗೂಡಿ ಶ್ರಮಿಸೋಣ ಎಂದು ಮುಖ್ಯಮಂತ್ರಿಗಳು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸಮಾಜ ಇಲಾಖೆಯು ಯೋಜನೆಗಳನ್ನು ಪಾರದರ್ಶಕವಾಗಿ ಫಲಾನುಭವಿಗಳಿಗೆ ತಲುಪಿಸಲು ಆಧುನಿಕ ತಂತ್ರಜ್ಞಾನದ ತತ್ರಾಂಶಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಡಿಬಿಟಿ, ಸ್ವಟಿಕ ದಂತಹ ತತ್ರಾಂಶಗಳ ಬಳಕೆ ಯೋಜನೆಗಳನ್ನು ಪಾರದರ್ಶಕವಾಗಿ ಅನುಷ್ಠಾನಗೊಳಿಸುತ್ತಿದೆ. ಅಲೆಮಾರಿ ಸಮುದಾಯಗಳ ಶ್ರೇಯೋಭಿವೃದ್ಧಿಗಾಗಿ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಇಂದು ಚಾಲನೆ ನೀಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು ನೀಡಿ, ಅನೇಕ ವಿನೂತನ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುμÁ್ಠನಗೊಳಿಸುತ್ತಿದೆ ಎಂದು ತಿಳಿಸಿದರು.

ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಎಸ್. ವಿ. ರಾಮಚಂದ್ರ, ಕರ್ನಾಟಕ  ಬೋವಿ ನಿಗಮದ ಅಧ್ಯಕ್ಷರಾದ ಗೂಳಿಹಟ್ಟಿ ಡಿ. ಶೇಖರ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ಪಿ. ವೆಂಕಟೇಶ್, ಕರ್ನಾಟಕ ಸಾರಿಗೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎಂ. ಚಂದ್ರಪ್ಪ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಮೇಜರ್ ಪಿ. ಮಣಿವಣ್ಣನ್, ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯ ಸಲಹೆಗಾರರಾದ ಶ್ರೀ ವೆಂಟಕಯ್ಯ ಇ. ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ. ರಾಕೇಶ್ ಕುಮಾರ್, ಕೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ  ಪಿ.ಎಸ್. ಕಾಂತರಾಜು ಮತ್ತಿತರರು ಉಪಸ್ಥಿತರಿದ್ದರು.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

6 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

6 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

6 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

22 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago