ಬಿಸಿ ಬಿಸಿ ಸುದ್ದಿ

ಭಾರತೀಯ ಆಡಳಿತ ಫೆಲೋಷಿಪ್ ಕಾರ್ಯಕ್ರಮ; ನಡ್ಜ್ ಫೌಂಡೇಶನ್ ಜೊತೆಗೆ ಒಡಂಬಡಿಕೆ

ಬೆಂಗಳೂರು; ಕರ್ನಾಟಕದಲ್ಲಿ ಭಾರತೀಯ ಆಡಳಿತ ಫೆಲೋಷಿಪ್ ಕಾರ್ಯಕ್ರಮವು ಒಂದು ಹೊಸ ಮಾದರಿಯಾಗಿದ್ದು, ಜುಲೈ 2021 ರಂದು ನಡ್ಜ್ ಫೌಂಡೇಶನ್ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿತ್ತು.

ಕಾರ್ಯಕ್ರಮದಡಿ ರಾಜ್ಯದ ವಿಮರ್ಶಾತ್ಮಕ ಅಭಿವೃದ್ಧಿ ಸವಾಲುಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ 10 ಜನ ಭಾರತೀಯ ಆಡಳಿತ ಫೆಲೋಷಿಪ್ ಕಾರ್ಯನಿರ್ವಾಹಕರನ್ನು ಸರ್ಕಾರದ ವಿವಿಧ ಇಲಾಖೆಗಳಲ್ಲಿ 18 ತಿಂಗಳವರೆಗೆ ನವೀನ ಯೋಜನೆಗಳನ್ನು ಕೈಗೊಳ್ಳಲು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಇವರು 18 ತಿಂಗಳುಗಳಲ್ಲಿ ಅಧ್ಯಯನ ಕೈಗೊಂಡು ಸಾಧಿಸಿದ ಪ್ರಗತಿ ವರದಿಯು ಅವರುಗಳ ಅನುಭವದ ಆಧಾರದ ಮೇಲೆ ಮಾಡಲಾಗಿದೆ. ಈ ಒಂದು ಯೋಜನೆಯನ್ನು ನೀತಿ ಆಯೋಗವು ಪರಿಶೀಲಿಸಿ ಬೇರೆ ರಾಜ್ಯಗಳು ಸಹ ಅನುಸರಿಸಲು ಸೂಚಿಸಿರುತ್ತದೆ. ದಿನಾಂಕ 12.12.2022 ರಂದು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಅವರಿಗೆ ಸಮಾರೋಪ ಸಮಾರಂಭವನ್ನು ಮಾಡಿ ಪ್ರಮಾಣ ಪತ್ರಗಳನ್ನು ನೀಡಲಾಗಿದೆ.

ಈಗಾಗಲೇ ಪಂಜಾಬ್, ಗುಜರಾತ್ ಇತ್ಯಾದಿ ಕೆಲವು ರಾಜ್ಯಗಳಲ್ಲಿ ಇದೇ ಮಾದರಿಯನ್ನು ಅನುಸರಿಸುತ್ತಿರುವುದು ಸಂತೋಷದ ವಿಷಯ. ಪ್ರಸ್ತುತ 2023-24ನೇ ಸಾಲಿನಲ್ಲಿ ಪರಿಷ್ಕøತ ಒಡಂಬಡಿಕೆಯನ್ನು ನಡ್ಜ್ ಫೌಂಡೇಷನ್ ಜೊತೆಗೆ ಮಾಡಿಕೊಳ್ಳಲಾಗಿದೆ. ಅದರ ಪ್ರಮುಖ ವಿಷಯಗಳು ಬಡತನ ನಿರ್ಮೂಲನೆ ಹಾಗೂ ಆದಾಯ ಬೆಳವಣಿಗೆ, ಪೌಷ್ಟಿಕತೆ ಹಾಗೂ ಉತ್ತಮ ಆರೋಗ್ಯ, ಗುಣಾತ್ಮಕ ಕಲಿಕಾ ಫಲಿತಾಂಶ ಉತ್ತಮಪಡಿಸುವಿಕೆ (learning outcome), ಲಿಂಗ ಸಮಾನತೆ, ಕೌಶಲ್ಯಾಭಿವೃದ್ಧಿ, ಕೈಗಾರಿಕೆ ಮತ್ತು ಮೂಲಭೂತ ಸೌಕರ್ಯ, ನೈಸರ್ಗಿಕ ಸಂಪನ್ಮೂಲಗಳ ಜವಾಬ್ದಾರಿಯುತ  ನಿರ್ವಹಣೆ, ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ ಸ್ಥಾಪನೆ, ಸಮಗ್ರ ಯುವಜನರ ಸಬಲೀಕರಣ,ಅರ್ಥಿಕ ಇಲಾಖೆಗೆ ಸಂಬಂಧಿಸಿದಂತೆ ಸಂಪನ್ಮೂಲ ಕ್ರೋಢೀಕರಣ.

28 ರಂದು ಕರ್ನಾಟಕ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಾದ ಡಾ. ಶಾಲಿನಿ ರಜನೀಶ್ ಮತ್ತು ನಡ್ಜ್ ಫೌಂಡೇಷನ್‍ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಸುಧಾ ಶ್ರೀನಿವಾಸನ್ ಅವರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಯಿತು ಅಧಿಕೃತ ಪ್ರಕಟಣೆ ತಿಳಿಸಿದೆ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago