ಬಿಸಿ ಬಿಸಿ ಸುದ್ದಿ

ಸುರಪುರ:ಪ್ರೇರಣಾ ಶಾಲೆಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

ಸುರಪುರ: ಮಹಿಳೆಯರು ಅಜ್ಞಾನಿಗಳಲ್ಲ ಅರಿವು ಉಳ್ಳವರಾಗಿದ್ದಾರೆ ಇಂದು ಉನ್ನತ ಮಟ್ಟದಲ್ಲಿ ಸಾಧನೆಗೈದಿರುವ ಮಹಿಳೆಯರು ಸಾಕಷ್ಟಿದ್ದಾರೆ ಮಹಿಳೆಯರಲ್ಲಿ ಕೆಲಸ ನಿರ್ವಹಿಸುವ ಆಸಕ್ತಿ ಇದ್ದು ಸ್ವಯಂ ನಿರ್ವಹಣೆಯ ಸಾಮಥ್ರ್ಯ ಹಾಗೂ ಜವಾಬ್ದಾರಿಗಳನ್ನು ನಿರ್ವಹಿಸಲು ಶಕ್ತರಾಗಿದ್ದೇವೆ ಎಂದು ನ್ಯಾಯವಾದಿ ಜಯಲಲಿತಾ ವಿ .ಪಾಟೀಲ ಹೇಳಿದರು.

ನಗರದ ಕುಂಬಾರಪೇಟೆಯ ಪ್ರೇರಣಾ ಕಾನ್ವೆಂಟ್ ಶಾಲೆಯಲ್ಲಿ ಸೌಹಾರ್ದ ಸಮಾಜ ಸೇವಾ ಮತ್ತು ಅಭಿವೃದ್ಧಿ ಸಂಸ್ಥೆ ವತಿಯಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ ವಿಶ್ವ ಮಹಿಳಾ ದಿನವನ್ನು ಘೋಷಿಸಿರುವ ದಿನ ಮಹಿಳೆಯರಿಗೆ ಇರುವ ಕಾನೂನು ಬದ್ಧ ಹಕ್ಕು ಹಾಗೂ ಸಮಾನತೆಯನ್ನು ಕುರಿತು ಅರಿವು ಮೂಡಿಸಲು ಒಂದು ಅವಕಾಶ ಕಲ್ಪಿಸಿಕೊಟ್ಟಿದೆ ಎಂದ ಅವರು ಆದ್ಯತಾ ಕ್ಷೇತ್ರಗಳನ್ನು ಗುರುತಿಸುವಲ್ಲಿ ಮಹಿಳೆಯರುಕಮ್ಮಿ ಇಲ್ಲ ಮಹಿಳೆಯರಿಗೂ ಅವಕಾಶ ಕೊಡಿ ಅನುಕೂಲತೆಗಳನ್ನು ಕಲ್ಪಿಸಿ ಸರಕಾರಿ ನೌಕರಿ ಸೌಲಭ್ಯಗಳನ್ನು ಒದಗಿಸಬೇಕು ಎಂದ ಅವರು ಹೆಣ್ಣು ಎಂದರೆ ಆಪತ್ತು ಎನ್ನುವ ಜಗತ್ತಿಗೆ ಹೆಣ್ಣಿಂದಲೇ ಸಂಪತ್ತು ಎಂಬ ಭಾವನೆ ಮೂಡಿಸೋಣ ಎಂದರು.

ಜಪಮಾತೆ ಮಾತೆ ಚರ್ಚನ ಗುರುಗಳಾದ ಫಾ.ದೀಪಕ್ ಪುರ್ತಾಡೋ ಮಾತನಾಡಿ ಶಿಕ್ಷಣ ಆತ್ಮ ವಿಶ್ವಾಸವನ್ನು ಹೆಚ್ಚಿಸುತ್ತದೆ ಆತ್ಮ ವಿಶ್ವಾಸದಿಂದ ನಮ್ಮ ವ್ಯಕ್ತಿತ್ವ ಉತ್ತಮ ಮಟ್ಟದಲ್ಲಿ ಇರುತ್ತದೆ ಶಿಕ್ಷಣವಿಲ್ಲದೇ ಮಹಿಳೆಯರು ಯಶಸ್ಸು ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಸಮಖ್ಯಾ ಕರ್ನಾಟಕನ ಸಂಪನ್ಮೂಲ ವ್ಯಕ್ತಿ ಕರುಣಾ ಕುಲಕರ್ಣಿ ಮಾತನಾಡಿ ಮಹಿಳೆಯರು ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ ಹಾಗೂ ಸಾಮಾಜಿಕವಾಗಿ ಮುಂದುವರೆಯಬೇಕು ಸ್ವಯಂ ಉದ್ಯೋಗಿಗಳಾಗಿ ಕುಟುಂಬದ ಜವಾಬ್ದಾರಿ ನಿರ್ವಹಣೆ ಜೊತೆಗೆ ಮಕ್ಕಳಲ್ಲಿ ಸಂಸ್ಕಾರಯುತ ಒಳ್ಳೆಯ ಗುಣಗಳನ್ನು ಬೆಳೆಸಬೇಕು ಎಂದರು, ಸ್ವ ಸಹಾಯ ಸಂಘಗಳು ಬಾಲ್ಯ ವಿವಾಹ, ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ಹಾಗೂ ಇನ್ನೀತರ ಅನಿಷ್ಠ ಪದ್ಧತಿಗಳನ್ನು ನಿರ್ಮೂಲನೆಗೊಳಿಸಲು ಶ್ರಮಿಸಬೇಕು ಎಂದು ಹೇಳಿದರು.

ಪ್ರೇರಣಾ ಕಾನ್ವೆಂಟ್‍ನ ಮುಖ್ಯಸ್ಥೆ ಸಿಸ್ಟರ್ ಅನಿತಾ ಅಧ್ಯಕ್ಷತೆ ವಹಿಸಿದ್ದರು, ಈ ಸಂದರ್ಭದಲ್ಲಿ ಹೊಲಿಗೆ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಲಾಯಿತು, ನಗರಸಭೆ ಅಧ್ಯಕ್ಷೆ ಸುಜಾತಾ ವೇಣುಗೋಪಾಲ ಜೇವರ್ಗಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ನಗರಸಭೆ ಸದಸ್ಯೆ ಸುವರ್ಣಾ ಸಿದ್ರಾಮ ಎಲಿಗಾರ, ಶಹಾಪುರ ಚರ್ಚನ ಗುರುಗಳಾದ ಫಾ.ಕ್ಲೇವನ್, ಪಾಲನ ಸಮಿತಿ ಸದಸ್ಯೆ ರೀಟಾ ರಾಯಪ್ಪ, ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಲೂಸಿ, ಸೌಹಾರ್ದ ಸಂಸ್ಥೆಯ ನಿರ್ದೇಶಕಿ ಸಿಸ್ಟರ್ ಮೇರಿ ಪಿಂಟೋ, ಸಿಸ್ಟರ್ ಪ್ರಿಯಾಂಕಾ, ಶಿಕ್ಷಕಿಯರಾದ ಗಿರಿಜಾ , ಪಾರ್ವತಿ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago