ಸುರಪುರ:ನಗರದ ರಂಗಂಪೇಟೆಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಡಿಬಿ) ಶಾಖೆಯಲ್ಲಿನ ಇಬ್ಬರು ಅಧಿಕಾರಿಗಳು ಗ್ರಾಹಕರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ,ಅವರ ಮೇಲೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಸಂಘಟನೆ ಮುಖಂಡರು ಆರೋಪಿಸಿ ಶಾಖೆಯ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕ ಶಿವಶಂಕರ ಹೊಸ್ಮನಿ,ಇಲ್ಲಿಯ ಶಾಖೆಯಲ್ಲಿನ ಇಬ್ಬರು ಫೀಲ್ಡ್ ಆಫಿಸರ್‍ಗಳು ಬ್ಯಾಂಕ್‍ಗೆ ಬರುವ ರೈತರಿಗೆ ವಿನಾಕಾರಣ ನಿಂದಿಸುವುದು ಮತ್ತು ರೈತರು ತಮ್ಮ ಕೆಲಸ ಮಾಡಿಕೊಡಲು ಕೇಳಿದರೆ ಅಧಿಕಾರಿಗಳಿಗೆ ತೊಂದರೆ ಕೊಡುತ್ತಿದ್ದೀರಿ ಎಂದು ಕೇಸ್ ಮಾಡುವುದಾಗಿ ಹೆದರಿಸುತ್ತಿದ್ದಾರೆ.ಅಲ್ಲದೆ ಈ ಇಬ್ಬರು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬ್ಯಾಂಕ್‍ಗೆ ಬರುವುದಿಲ್ಲ,ಗ್ರಾಹಕರೊಂದಿಗೆ ವರ್ತನೆಯೂ ಸರಿಯಾಗಿಲ್ಲ,ಆದ್ದರಿಂದ ಇಬ್ಬರು ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ತಳವಾರಗೇರ,ದೇವು ಕಕ್ಕೇರಾ,ಬಡವರಾಜ ಬಡಿಗೇರ,ಮಾನಪ್ಪ ಬಡಿಗೇರ,ಶರಣಪ್ಪ ತೆಗ್ಗೆಳ್ಳಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…