ಕಲಬುರಗಿ: ಶಹಾಬಾದ ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ ಅವರ ಅಧ್ಯಕ್ಷತೆಯಲ್ಲಿ ಮಾರ್ಚ 15ರಂದು ಬೆಳಿಗ್ಗೆ 11 ಗಂಟೆಗೆ 2023-24ನೇ ಸಾಲಿನ ಸಾರ್ವಜನಿಕ ಬಜೆಟ್ ಪೂರ್ವಭಾವಿ ಸಭೆಯನ್ನು ನಗರಸಭೆಯ ಸಭಾಗಣದಲ್ಲಿ ಆಯೋಜಿಸಲಾಗಿದೆ ಎಂದು ನಗರಸಭೆಯ ಪೌರಾಯುಕ್ತ ಬಸವರಾಜ ಹೆಬ್ಬಾಳ ತಿಳಿಸಿದ್ದಾರೆ.
ಅಂದು ನಗರಸಭೆಯಲ್ಲಿ ಆಯೋಜಿಸಲಾದ ಸಾರ್ವಜನಿಕ ಬಜೆಟ್ ಪೂರ್ವಭಾವಿ ಸಭೆಯಲ್ಲಿ ನಗರದ ಸಾರ್ವಜನಿಕರು, ಗಣ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡಲು ಕೋರಿದ್ದಾರೆ.