ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗೆ ವೇದಿಕೆಯಾಗಬೇಕು

0
65

ಕಲಬುರಗಿ; ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕೇವಲ ದಿನಾಚರಣಿ ಹಾಗೂ ವೇದಿಕೇಯ ವಿಮರ್ಶೆಯಾಗಿ ಉಳಿಯಬಾರದು ಬದಲಾಗಿ ಮಹಿಳೆಗೆ ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನವನ್ನು ಕಲ್ಪಿಸಿ ಅವರಲ್ಲಿನ ಸಮಾಜ ಮುಖಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಅನುವು ಮಾಡಿಕೊಡಬೇಕು, ಈ ನಿಟ್ಟಿನಲ್ಲಿ ಮಹಿಳೆಯರನ್ನು ಸ್ವಾವಲಂಬಿಯಾಗಲು ಹಾಗೂ ಉನ್ನತ ಶ್ರೇಣಿಯ ಉದ್ಯಮಿಯಾಗಲು ಪ್ರೇರಣೆ ಹಾಗೂ ಪ್ರೋತ್ಸಾಹ ನೀಡುವ ಅವಶ್ಯಕತೆ ಇದೆ ಎಂದು ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಭೀಮಾಶಂಕರ ಸಿ. ಬಿಲಗುಂದಿ ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಇಂದು ಇಲ್ಲಿನ ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯ ಹಾಗೂ ಪೂಜ್ಯ ಡಾ. ಶಿವಕುಮಾರ ಸ್ವಾಮೀಜಿ ಸ್ಕೂಲ್ ಆಫ್ ಆರ್ಕಿಟೆಕ್ಚರ್ ಜಂಟಿಯಾಗಿ ಆಯೋಜಿಸಿದ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

Contact Your\'s Advertisement; 9902492681

ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯು ತಮ್ಮ ವಿವಿಧ ವಿದ್ಯಾಸಂಸ್ಥೆಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರನ್ನು ಗುರುತಿಸಿ ಅವರಿಗೆ ಉನ್ನತ ಸ್ಥಾನವನ್ನು ನೀಡಿದೆ ಎಂದು ತಿಳಿಸಿದರು. ಸಧ್ಯ ಪಿ.ಡಿ.ಎ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಬಹತೇಕ ಉನ್ನತ ಹುದ್ದೆಗಳನ್ನು ಮಹಿಳೆಯರು ಅಲಂಕರಿಸಿದ್ದು ಉತ್ತಮವಾಗಿ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆಂದು ತಿಳಿಸಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾರಾಷ್ಟ್ರದ ಜೌರಂಗಬಾದನ ಉದ್ಯಮಿ ಹಾಗೂ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿ ಶ್ರೀಮತಿ ವರ್ಷಾ ದೇಶಮುಖ ಅವರು ಮಾತನಾಡಿ ಇಂದು ತಾವು ಉನ್ನತ ಸ್ಥಾನದಲ್ಲಿರುವುದಕ್ಕೆ ಮುಖ್ಯ ಕಾರಣ ಈ ಮಹಾವಿದ್ಯಾಲಯದಲ್ಲಿ ತಮಗೆ ದೊರೆತಿರುವ ಉತ್ತಮ ಶಿಕ್ಷಣ ಹಾಗೂ ಸಂಸ್ಕøತಿ, ಇದರಿಂದಾಗಿ ಇಂದು ತಾವು ಉದ್ಯಮ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿದ್ದು ನಿರ್ಣಯಗಳು ಹಾಗೂ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗಿದೆ ಎಂದು ತಿಳಿಸಿದರು. ಸಭೆಯನ್ನುದ್ಧೇಶಿಸಿ ಮಾತನಾಡಿದ ಅವರು ಏಕಾಗೃತೆಯ ಕಲಿಕೆ, ವಿಮರ್ಶನಾ ಸಾಮಥ್ರ್ಯ ಹಾಗೂ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದನ್ನು ಮೈಗೂಡಿಸಿಕೊಂಡರೆ ಯಾವುದೇ ಕಾರ್ಯಗಳು ಅಸಾಧ್ಯವೇನಲ್ಲ ಎಂದು ತಿಳಿಸಿದರು.

ಮಹಾವಿದ್ಯಾಲಯದ ಉಪ-ಪ್ರಾಚಾರ್ಯರರಾದ ಡಾ. ಭಾರತಿ ಹರಸೂರ ಅವರು ಸರ್ವರನ್ನು ಸ್ವಾಗತಿಸಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಮಹತ್ವವನ್ನು ತಿಳಿಸಿದರು ಹಾಗೂ ಎಲೆಕ್ಟ್ರಾನಿಕ್ಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ. ವೀಣಾ ಸರಾಫ್ ಅವರು ವಂದಿಸಿದರು. ಸ್ಕೂಲ್ ಆಫ್ ಆರ್ಕಿಟೆಕ್ಚರನ ಪ್ರೋ. ಅಂಜು ವಂಟಿಯವರು ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಡಾ. ಮಹಾದೇವಪ್ಪ ರಾಂಪೂರೆ, ಆಡಳಿತ ಮಂಡಳಿ ಸದಸ್ಯರಾದ ಬಸವರಾಜ ಖಂಡೆರಾವ, ವಿನಯ ಪಾಟೀಲ, ಡಾ. ಅನೀಲ ಪಟ್ಟಣ, ಸಾಯಿನಾಥ ಪಾಟೀಲ, ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡಾ. ಎಸ್. ಆರ್. ಮೀಸೆ, ಉಪ-ಪ್ರಾಚಾರ್ಯರಾದ ಡಾ. ಕಲ್ಪನಾ ವಾಂಜರಖೆಡಿ, ಸ್ಕೂಲ್ ಆಫ್ ಆರ್ಕಿಟೆಕ್ಚರ್ ಪ್ರಾಚಾರ್ಯರಾದ ಪ್ರೊ. ಪರನಜ್ಯೋತಿ ಪಾಟೀಲ, ಕಾರ್ಯಕ್ರಮದ ಸಂಯೋಜಕರಾದ ಡಾ. ಇಂದುಮತಿ ದೇಶಮಾನ್ಯ ಹಾಗೂ ಸಂಚಾಲಕರಾದ ಪ್ರೋ. ವೀಣಾ ಸರಾಫ್, ಶಿಕ್ಷಕರು, ಸಿಬ್ಬಂದಿ ಹಾಗೂ ವಿಧ್ಯಾರ್ಥಿನಿಯರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here