ವೀರಾಪೂರು: ತಾಲೂಕಿನ ನೆರೆ ಪೀಡಿತ ಸಂತ್ರಸ್ತರಿಗಾಗಿ ವೀರಾಪೂರ ಗ್ರಾಮದಲ್ಲಿ ವಿದ್ಯಾರ್ಥಿ-ಯುವಜನರಿಂದ ಆಹಾರ ಧಾನ್ಯ ಸಂಗ್ರಹದಲ್ಲಿ ಮಾಡಲಾಯಿತು.
ತಾಲೂಕಿನ ಕಡದರಗಡ್ಡಿ, ಯಳಗುಂದಿ, ಹಂಚಿನಾಳ, ಯರಗೋಡಿ, ಜಲದುರ್ಗ ಗ್ರಾಮಗಳು ಸೇರಿ ನಾಲ್ಕಾರು ದೊಡ್ಡಿಗಳ ಜನ ಪ್ರವಾಹದ ಪ್ರಹಾರಕ್ಕೆ ಸಿಲುಕಿ ತತ್ತರಿಸಿ ಹೋಗಿದ್ದಾರೆ. ಮನೆಮಠಗಳನ್ನು ಕಳೆದುಕೊಂಡು ಜನರ ಬದುಕು ಬೀದಿಪಾಲಾಗಿದೆ. ಸಂತ್ರಸ್ತರ ನೆರವಿಗೆ ಸಾಕಷ್ಟು ಪ್ರಮಾಣದಲ್ಲಿ ಮಾನವೀಯ ನೆಲೆಗಟ್ಟಿನಲ್ಲಿ ದಾನಿಗಳು ದೇಣಿಗೆ, ದಾನ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಾಂತ ದೇನಿಗೆ ಸಂಗ್ರಹಿಸುವ ಕಾರ್ಯ ನಡೆದಿದ್ದು, ವೀರಾಪೂರು ಗ್ರಾಮದಿಂದಲ್ಲೂ ಆಹಾರ ಧಾನ್ಯ ಸಂಗ್ರಹಿಸಿ ರವಾನೆ ಮಾಡಲಾಗುತ್ತಿದೆ.
ಗ್ರಾಮದಲ್ಲಿ ಸುಮಾರು 23 ಚೀಲ ದವಸ-ಧಾನ್ಯ ಹಾಗೂ 8 ಸಾವಿರ ಹಣ ಸಂಗ್ರಹವಾಗಿದೆ.
ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ ವೀರಾಪೂರ, ಎಸ್‌ಎಫ್‌ಐ ಮುಖಂಡರಾದ ಅಮರೇಗೌಡ, ಅಭಿಷೇಕ್, ಬಸಲಿಂಗ, ಮಹೇಶ್, ಯುವ ಮುಖಂಡರಾದ, ಬಸವರಾಜ್, ಹುಚ್ಚರೆಡ್ಡಿ, ಮಲ್ಲಿಕಾರ್ಜುನ್ ಹಿರೇಮಠ್, ಹನುಮಂತ್ರಾಯ, ಕಳಕಪ್ಪ, ಬಾಷಮಿಯಾ, ಶಿವಪುತ್ರ ಬಸಾಪೂರು, ವೆಂಕಟೇಶ್, ಸಲೀಮ್, ರಮೇಶ್ ಕಪಗಲ್ ಮತ್ತಿತರರು ಉಪಸ್ಥಿತರಿದ್ದರು
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…