ಬೆಂಗಳೂರು; ಕೃಷಿ ಕ್ಷೇತ್ರವು ಭಾರತೀಯ ಆರ್ಥಿಕತೆಯ ಮೂಲ ಸ್ತಂಭವಾಗಿದೆ, ಅದನ್ನು ಮತ್ತಷ್ಟು ಬಲಪಡಿಸಬೇಕಾಗಿದೆ. ಭಾರತವು ಸ್ವಾವಲಂಬಿಯಾಗಲು ಮತ್ತು ಕೃಷಿ ಕ್ಷೇತ್ರದಲ್ಲಿ ಜಾಗತಿಕ ಶಕ್ತಿಯಾಗಲು ಕೃಷಿ, ಪಶುಸಂಗೋಪನೆ ಮತ್ತು ಆಹಾರ ಸಂಸ್ಕರಣೆಯ ಆಧುನೀಕರಣದತ್ತ ಹೆಚ್ಚು ಗಮನಹರಿಸಬೇಕು ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ 3ನೇ ಘಟಿಕೋತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹಸಿರು ಕ್ರಾಂತಿಯು ಕೃಷಿ ಉತ್ಪಾದನೆಯನ್ನು ಹೆಚ್ಚಿಸಿದಂತೆಯೇ, ಐಟಿ ಕ್ರಾಂತಿಯು ಭಾರತೀಯ ಕೃಷಿಯಲ್ಲಿ ಮುಂದಿನ ದೊಡ್ಡ ಹೆಜ್ಜೆಯಾಗಿರಬಹುದು. ಭಾರತೀಯ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಅಭಿವೃದ್ಧಿಗಾಗಿ, ಕೃಷಿಯನ್ನು ಲಾಭದಾಯಕ ವ್ಯವಹಾರವನ್ನಾಗಿ ಮಾಡಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ಭಾರತ ಸರ್ಕಾರ ಮತ್ತು ಕರ್ನಾಟಕ ಸರ್ಕಾರವು ಹಲವಾರು ಯೋಜನೆಗಳನ್ನು ಮಾಡಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಮನುಷ್ಯನ ಜೀವನವು ಸಂಪೂರ್ಣವಾಗಿ ಪ್ರಕೃತಿಯ ಮೇಲೆ ಅವಲಂಬಿತವಾಗಿದೆ. ಪರಿಸರ ಅಸಮತೋಲನ ಇಂದು ವಿಶ್ವದ ಗಂಭೀರ ಸಮಸ್ಯೆಯಾಗಿದೆ. ಪರಿಸರ ಸಂರಕ್ಷಣೆ ಮತ್ತು ವರ್ಧನೆ ನಮ್ಮೆಲ್ಲರ ಹೊಣೆಯಾಗಿದೆ. ನೀರು, ಅರಣ್ಯ ಮತ್ತು ವಾಯು ಸಂರಕ್ಷಣೆಯ ದಿಕ್ಕಿನಲ್ಲಿ ಕೆಲಸ ಮಾಡುವ ಅವಶ್ಯಕತೆಯಿದೆ ಎಂದರು.
2016 ರಲ್ಲಿ ಸ್ಥಾಪಿತವಾದ ವಿಶ್ವವಿದ್ಯಾಲಯವು ಗ್ರಾಮೀಣ ಜನಸಂಖ್ಯೆಯ ಜೀವನದ ಗುಣಮಟ್ಟವನ್ನು ಸಮಗ್ರವಾಗಿ ಸುಧಾರಿಸಲು ಮತ್ತು ಆರ್ಥಿಕ ಬೆಳವಣಿಗೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಶಿಕ್ಷಣ ಮತ್ತು ತರಬೇತಿಯನ್ನು ನೀಡಲು ದೃಷ್ಟಿಗೋಚರವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನಡೆಸಲ್ಪಡುತ್ತಿರುವ ಈ ವಿಶ್ವವಿದ್ಯಾಲಯವು ದೇಶದ ವಿಶಿಷ್ಟ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ. ಈ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್‍ನಲ್ಲಿ, ವಿದ್ಯಾರ್ಥಿಗಳಿಗೆ ಮತ್ತು ರೈತರಿಗೆ ಕೃಷಿ ಸಂಬಂಧಿತ ಚಟುವಟಿಕೆಗಳ ಜ್ಞಾನವನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಾದರಿ ನರ್ಸರಿ ಸ್ಥಾಪಿಸಲಾಗಿದೆ ಎಂದು ತಿಳಿಸಿದರು.
ಸಮಾಜ ಸುಧಾನರಣೆ ಮತ್ತು ದೀನ ದಲಿತರ ಸಬಲೀಕರಣ ಕ್ಷೇತ್ರದಲ್ಲಿನ ಮಹತ್ವದ ಕೊಡುಗೆಗಾಗಿ ಬೆಳಗಾವಿಯ ಶಿವಾಜಕಿ ಕಾಗಣಿಕರ್ ಹಾಗೂ ಸಾವಯವ ಕೃಷಿಯಲ್ಲಿ ತೊಡಗಿರುವ ಮೈಸೂರು ಜಿಲ್ಲೆಯ ಕಳಲ್ವಾಡಿ ಗ್ರಾಮದ ಎ ಪಿ ಚಂದ್ರಶೇಖರ್ ಅವರುಗಳಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಯಿತು. ಪದವಿ ಪಡೆದ ಎಲ್ಲಾ ವಿದ್ಯಾರ್ಥಿಗಳನ್ನು ಅಭಿನಂದಿಸಿದ ರಾಜ್ಯಪಾಲರು, ಈ ವಿಶ್ವವಿದ್ಯಾಲಯದಿಂದ ಪಡೆದ ಶಿಕ್ಷಣ ಮತ್ತು ಬಲವಾದ ನೈತಿಕ ಅಡಿಪಾಯವು ವಿದ್ಯಾರ್ಥಿಗಳ ವೃತ್ತಿಜೀವನವನ್ನು ಯಶಸ್ವಿಯಾಗಿಸುತ್ತದೆ ಮತ್ತು ಜೀವನದ ಹಾದಿಯಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೂ ಮುನ್ನ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೊಟ ಅವರು ವಿಶ್ವ ವಿದ್ಯಾಲಯದ ಆವರಣದಲ್ಲಿರುವ ಸಬರಮತಿ ಪ್ರತಿಕೃತಿ ಆಶ್ರಮಕ್ಕೆ ಭೇಟಿ ನೀಡಿ ವೀಕ್ಷಿಸಿದರು.
ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ: ಗದಗ ತಾಲೂಕಿನ ನಾಗಾವಿಯಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ ಅವರು ಬೆಳಗಾವಿ ಜಿಲ್ಲೆಯ ಕಟ್ಟಣಭಾವಿ ಗ್ರಾಮದ ಗಾಂಧೀವಾದಿ ಮತ್ತು ಹಿರಿಯ ಸಮಾಜಿಕ ಕಾರ್ಯಕರ್ತರಾದ ಶಿವಾಜಿ ಕಾಗಣಿಕರ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಿದರು.
ಚಿನ್ನದ ಪದಕ ಪ್ರಧಾನ: ಗದಗ ತಾಲೂಕಿನ ನಾಗಾವಿಯಲ್ಲಿನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ ಅವರು ವಿವಿಧ ಸ್ನಾತ್ತಕೋತ್ತರ ವಿಭಾಗಗಳಲ್ಲಿ ಉತ್ತಮ ಅಂಕ ಗಳಿಸಿದ ಪ್ರೀತಂ.ಸಿ.ಜಿ., ದಿವ್ಯ ಬಿ.ಯು., ಚಿದಾನಂದ ಆಶ್ಯಾಳ, ವೀಣಾ ಭಜಂತ್ರಿ, ಕೆ.ಆರ್.ಮೋಹನ, ಎಸ್. ತೇಜಸ, ಪ್ರಿಯಾ ನೀರಲಕಟ್ಟಿ, ಶೋಭಾ ಪೂಜೆರ, ಪೂಜಾ ಕಣವಿ, ಅಫ್ರಿನಸನಾ ಹಂಪಾಪಟ್ಟಣ ಅವರುಗಳಿಗೆ ಚಿನ್ನದ ಪದಕ ನೀಡಿ ಗೌರವಿಸಲಾಯಿತು.
ಮುಖ್ಯ ಅತಿಥಿ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಅಧ್ಯಕ್ಷ ಡಾ.ಸುಬ್ಬಣ್ಣ ಅಯ್ಯಪ್ಪನ್, ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ವಿಷ್ಣುಕಾಂತ್ ಎಸ್. ಶ್ರೀ ಚಟ್ಪಲ್ಲಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…