ಬಿಸಿ ಬಿಸಿ ಸುದ್ದಿ

ಸುರಪುರ: ವಿಕಲಚೇತನರಿಗೆ ಸಾಧನ ಸಲಕರಣೆಗಳ ವಿತರಣೆ

ಸುರಪುರ: ನಗರದ ಗರುಡಾದ್ರಿ ಕಲಾ ಮಂದಿರದಲ್ಲಿ ತಾಲೂಕಿನ ವಿಕಲಚೇತನರಿಗಾಗಿ ಜಿಲ್ಲಾ ಪಂಚಾಯತ್ ಯಾದಗಿರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಹಿರಿಯ್ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್, ಅಸೋಸಿಯೇಷನ್ ಆಫ್ ಪೀಪಲ್ ವಿತ್ ದಿಸೆಬಿಲಿಟಿ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ವಿಕಲಚೇತನರಿಗೆ ಬಳಸುವ ಸಾಧನ ಸಲಕರಣೆಗಳನ್ನು ವಿತರಿಸುವ ಕಾರ್ಯಕ್ರಮವನ್ನು ನಡೆಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿದ ಪಬ್ಲಿಕ್ ರಿಕ್ರಿಯೇಶನ್ ಅಧ್ಯಕ್ಷ ರಾಜಾ ಮುಕುಂದ ನಾಯಕ್, ವಿಶೇಷ ಚೇತನರ ಸೇವೆ ದೇವರ ಸೇವೆ ಈ ಸಂಸ್ಥೆ ವಿಕಲಚೇತನರ ಬಾಳಲ್ಲಿ ಜ್ಯೋತಿಯಾಗಿ ಬೆಳಗಲಿ ಎಂದು ಪ್ರಶಂಸಿಸಿದರು.

ಪ್ರಸ್ತಾವಿಕ ಮಾತನಾಡಿದ ಎ ಪಿ ಡಿ ಸಂಸ್ಥೆಯ ಮುಖ್ಯಸ್ಥರಾದ ಮಧುಸೂದನ್ ರವರು, ವಿಕಲಚೇತನರು ಸ್ವತಂತ್ರವಾಗಿ ತಮ್ಮ ಬಾಳನ್ನು ನಿರ್ಮಿಸಿಕೊಳ್ಳಲು ಈ ಸಂಸ್ಥೆ ಅಜೀಂ ಪ್ರೇಮ್ ಜಿ ಫೌಂಡೇಶನ್ ಆರ್ಥಿಕ ನೆರವಿನೊಂದಿಗೆಯಾವಾಗಲೂ ಶ್ರಮವಹಿಸುತ್ತದೆ ಇದಕ್ಕೆ ತಮ್ಮೆಲ್ಲರ ಸಹಕಾರ ಅಗತ್ಯ ಎಂದು ಅಭಿಪ್ರಾಯಪಟ್ಟರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾಜಿ ಜಿ.ಪಂ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ (ತಾತಾ) ಮಾತನಾಡುತ್ತಾ, ವಿಕಲಚೇತನರಿಗೆ ಉಪಯೋಗವಾಗುವಂತಹ ಸಾಧನ ಸಲಕರಣೆಗಳನ್ನು ಈ ಸಂಸ್ಥೆ ಪೂರೈಸಿ ಅವರ ಮುಖದಲ್ಲಿ ಖುಷಿ ಮೂಡಿರುವುದು ಸಂತಸ ತಂದಿದೆ ಎಫಿಡಿ ಸಂಸ್ಥೆಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ರಾಜಾ ಪಾಮ್ ನಾಯಕ್, ನಗರ ಸಭೆ ಸದಸ್ಯರಾದ ಸೋಮನಾಥ್ ದೊಣ್ಣೆಗೇರಿ, ಚಂದ್ರಶೇಖರ್ ಪವಾರ್ ತಾಲೂಕ ಕಾರ್ಯನಿರ್ವಾಹಕ ಅಧಿಕಾರಿಗಳು,ಪಂಡಿತ್ ನಿಂಬೂರೇ ಕ್ಷೇತ್ರ ಸಮನ್ವಯಾಧಿಕಾರಿಗಳು, ಅಜೀಮ್ ಪ್ರೇಮ್ಜೀ ಫೌಂಡೇಶನ್ ಜಿಲ್ಲಾ ಸಂಯೋಜಕರಾದ ಸಚಿನ್ ಕುಮಾರ್ ಅನಿಲ್ ಔಶಾ ಎಪಿಎಫ್, ಮಾಳಪ್ಪ ಪೂಜಾರಿ ಎಂ ಆರ್ ಡಬ್ಲ್ಯೂ ವೇದಿಕೆಯಲ್ಲಿದ್ದರು.

ಈ ಸಂದರ್ಭದಲ್ಲಿ ಚೇತನರಿಗೆ ತ್ರಿಚಕ್ರ ವಾಹನ ಕೃತಕ ಕಾಲುಗಳು ಅವರು ಸ್ವತಂತ್ರವಾಗಿ ನಡೆಯಲು ಸಹಾಯವಾಗುವ ಸಲಕರಣೆಗಳು ಹೀಗೆ 110 ಜನ ಫಲಾನುಭವಿಗಳಿಗೆ ಈ ಸಂದರ್ಭದಲ್ಲಿ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಎ ಪಿ ಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳು ಹಾಗೂ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಗಳು ಅನೇಕ ಪಾಲಕ ಪೋಷಕರು ಭಾಗವಹಿಸಿದ್ದರು.

ಸೂಫಿಯ ಪ್ರಾರ್ಥಿಸಿದರು ಅನ್ವರ್ ಜಮಾದಾರ್ ಕಾರ್ಯಕ್ರಮ ನಿರೂಪಿಸಿದರು ರಾಜಶೇಖರ್ ದೇಸಾಯಿ ಸ್ವಾಗತಿಸಿದರು ಸುನಿಲ್ ಕುಮಾರ್ ಹುಲ್ಯಾಳ ವಂದಿಸಿದರು.

emedialine

Recent Posts

ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ ಸಂವಿಧಾನ ಓದು ಕಾರ್ಯಕ್ರಮ

ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…

10 hours ago

ಶೋಷಿತ ಜನಜಾಗೃತಿ ವೇದಿಕೆ ವತಿಯಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನವಿ

ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…

10 hours ago

ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರು: ಡಾ. ಎಸ್.ಎಸ್. ಗುಬ್ಬಿ ಬೇಸರ

ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…

10 hours ago

ಹಣೆಯ ಮೇಲೆ ಹಚ್ಚಿದ ವಿಭೂತಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ: ಅರ್ಪಿತಾ ಪಾಟೀಲ

ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…

10 hours ago

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…

10 hours ago

ಸಂವಿಧಾನವನ್ನು ರಕ್ಷಿಸಲು ಜವಾಬ್ದಾರಿ ಯುವಕರು ಮೇಲಿದೆ : ಹಿರಿಯ ವಕೀಲ ವೈಜನಾಥ ಎಸ್ ಝಳಕಿ

ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…

10 hours ago