ಕಲಬುರಗಿ; ಮಾರ್ಚ್ 17 ರಂದು ಮಿನಿ ಉದ್ಯೋಗ ಮೇಳ

0
94

ಕಲಬುರಗಿ; ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್ 17 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸದರಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಆದಿತ್ಯ ಬಿರ್ಲಾ ಲೈಫ್ ಇನ್ಸುರೆನ್ಸ್‍ದಲ್ಲಿ ಏಜೆನ್ಸಿ ಪಾರ್ಟರ್/ ಅಸೋಸಿಯೇಟ್ ಏಜೆನ್ಸಿ ಪಾರ್ಟರ್ ಹುದ್ದೆಗೆ ಪಿ.ಯು.ಸಿ./ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

Contact Your\'s Advertisement; 9902492681

ಭಾರತ ಫೈನಾನ್ಸಿಯಲ್ ಇನ್‍ಕ್ಲುಜಸ್ ಲೀ.ದಲ್ಲಿ ಫೀಲ್ಡ್ ಅಸಿಸ್ಟ್‍ಂಟ್ / ಲೋನ್ ಆಫೀಸರ್ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ. / ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು. ಫ್ಲಿಪ್‍ಕಾರ್ಟ್‍ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಕೃಷಿ ಬಂಧುದಲ್ಲಿ ಬಿಜಿನೆಸ್ ಡೆವಲಪ್‍ಮೆಂಟ್ ಆಫೀಸರ್ ಆನ್‍ಲೈನ್ ಸೇಲ್ಸ್ ಆಂಡ್ ಮಾರ್ಕೆಟಿಂಗ್, ಸೊಶಿಯಲ್ ಮಿಡಿಯಾ ಫ್ಲಾಟ್‍ಫಾರ್ಮ್ ಹಾಗೂ ವೆಬ್‍ಸೈಟ್ ಡಿಸೈನರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್(ಬಯೋಡೆÀಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಉದ್ಯೋಗ ಮೇಳದಲ್ಲ್ಲಿ ಭಾಗವಹಿಸಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.
ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here