ಸುರಪುರ: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಹೊರ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಸದ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್, ಕ್ಲೀನರ್ಸ್, ಡಾಟಾ ಆಪರೇಟರುಗಳು ಸೇರಿದಂತೆ ಸಮಸ್ತ ಹೊರ ಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ಪಾವತಿ ತರುವಂತೆ ಆಗ್ರಹಿಸಿ ಸೋಮವಾರದಿಂದ ಬೆಂಗಳೂರನ ಫ್ರೀಡಂ ಪಾರ್ಕನಲ್ಲಿ ಹಮ್ಮಿಕೊಂಡಿರುವ ಅನಿರ್ದಿಷ್ಟ ಮುಷ್ಕರಕ್ಕೆ ಬೆಂಬಲ ನೀಡಿ ಹಾಗೂ ರಾಜ್ಯದಲ್ಲಿನ ಸ್ಥಳಿಯ ಸಂಸ್ಥೇಗಳಲ್ಲಿನ ಹಿರಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಲ್ಲಿನ ಕರ್ನಾಟಕ ರಾಜ್ಯ ಪಾಲಿಕೆ,ನಗರಸಭೆ,ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಳೆದ ಫೆಬ್ರುವರಿ ತಿಂಗಳಲ್ಲಿ ನಡೆದ ಹೋರಾಟ ಸಂದರ್ಭದಲ್ಲಿ ನಗರಾಭಿವೃಧ್ಧಿ ಕಾರ್ಯದರ್ಶಿಗಳಾದ ಅಜಯ ನಾಗಭೂಷಣ ಅವರು ನೇರ ಪಾವತಿಗೆ ಅಗತ್ಯ ಭರವಸೆ ನೀಡಿದ್ದರು ಮಾ10ರೊಳಗಾಗಿ ನೇರ ಪಾವತಿ ಸಂಬಂಧ ಆದೇಶ ಹೊರಡಿಸಬೇಕು ಎಂದು ಸಂಘದ ವತಿಯಿಂದ ಒತ್ತಾಯಿಸಲಾಗಿತ್ತು ಆದರೆ ಸರಕಾರ ನೌಕರರ ಬೇಡಿಕೆಗಳಿಗೆ ಸ್ಪಂದಿಸದ ಕಾರಣ ಸೋಮವಾರದಿಂದ ಬೆಂಗಳೂರನಲ್ಲಿ ಅನಿರ್ದಿಷ್ಟ ಮುಷ್ಕರ ನಡೆಸಲಾಗುತ್ತಿದ್ದು ಕೂಡಲೇ ಬೇಡಿಕೆಗಳಿಗೆ ಸ್ಪಂದಿಸಬೇಕು ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಖಾಯಂ ನೌಕರರನ್ನಾಗಿ ಮಾಡಬೇಕು ಹಾಗೂ ಪ್ರಸ್ತುತ ಹುದ್ದೆಗಳನ್ನು ಘೋಷಿಸಬೇಕು ಎಂದು ಒತ್ತಾಯಿಸಲಾಯಿತು.
ಬೇಡಿಕೆ ಈಡೇರಿಸದಿದ್ದಲ್ಲಿ ವಿಧಾನಸೌಧ ಹಾಗೂ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ ಅವಿನಾಶ ಅವರಿಗೆ ಸಲ್ಲಿಸಲಾಯಿತು, ಸಂಘದ ಗೌರವಾಧ್ಯಕ್ಷ ಮೌನೇಶ ಕಟ್ಟಿಮನಿ, ಅಧ್ಯಕ್ಷ ಜಗದೀಶ ಶಾಖಾನವರ,ಅಯ್ಯಣ್ಣ ಪೂಜಾರಿ, ಅನಿಲಕುಮಾರ ನಾಯಕ, ಬಸವರಾಜ ರತ್ತಾಳ, ಸತೀಶಕುಮಾರ ನಾಯಕ, ಗೋಪಾಲ ಸತ್ಯಂಪೇಟ, ಶರಣಬಸವ ಮಲ್ಲಿಬಾವಿ ಇತರರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…