ಸಿದ್ದರಾಮಯ್ಯಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಸಿಟಿ ರವಿ

0
14

ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತಾವಧಿಯಲ್ಲಿನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸುವ ಮೂಲಕ ಬಿಜೆಪಿ ಚುನಾವಣೆಗೆ ಬಿಜೆಪಿ ಸಜ್ಜಾಗಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಹತ್ತು ಹಲವು ಯೋಜನೆಗಳನ್ನು ರಾಜ್ಯ ಬಿಜೆಪಿ ಸರಕಾರ ನೀಡಿದೆ. ಅದರಂತೆ ಪ್ರಣಾಳಿಕೆಯಲ್ಲಿ ಹೇಳದೆ ಇರುವ ರೈತ ವಿದ್ಯಾನಿಧಿ, ಕಿಸಾನ್ ಸಮ್ಮಾನ್ ಯೋಜನೆ ಸೇರಿ ಜನರಿಗೆ ಅನುಕೂಲ ಮಾಡುವ ಕೆಲಸ ನಮ್ಮ ಸರಕಾರ ಮಾಡಿದೆ ಎಂದು ಹೇಳಿದರು.

Contact Your\'s Advertisement; 9902492681

ಕಾಂಗ್ರೆಸ್‍ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಭ್ರμÁ್ಟಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಇಂದಿನ ಭ್ರμÁ್ಟಚಾರದ ಜನಕ ಕಾಂಗ್ರೆಸ್ ಆಗಿದೆ. ಇಡೀ ದೇಶಾದ್ಯಂತ ಅದನ್ನು ಬಿತ್ತಿ ಬೆಳೆಸಿದ್ದು ಕಾಂಗ್ರೆಸ್ ಆಗಿದೆ ಎಂದು ಟೀಕಿಸಿದರು.

ಸಿದ್ದರಾಮಯ್ಯ ಅವರ ಅಧಿಕಾರದ ವೇಳೆ ಅರ್ಕಾವತಿ ಬಡಾವಣೆಯ ಡಿನೋಟಿಫಿಕೇಷನ್ ರೀಡೂ ಪರಿಭಾμÉ ಬಳಸಿ ದೊಡ್ಡ ಮೊತ್ತದ ಹಗರಣ ನಡೆದಿದೆ. ಆಗ ತನಿಖೆಗಾಗಿ ನ್ಯಾಯಮೂರ್ತಿ ಕೆಂಪಣ್ಣ ಆಯೋಗ ರಚನೆ ಮಾಡಿದ್ದು, ಇದೇ ಸಿದ್ದರಾಮಯ್ಯ ಅವರ ನೇತೃತ್ವದ ಸರಕಾರಕ್ಕೆ ನೀಡಿದ ವರದಿಯಲ್ಲಿ ಸರಕಾರಕ್ಕೆ 8,000 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿಸಲಾಗಿದೆ.

ಇದನ್ನು ಮಾಡಿದ್ದು ಯಾರು, ಸಿದ್ದರಾಮಯ್ಯನವರಾ ಅಥವಾ ಅವರ ಸಂಪುಟದಲ್ಲಿ ಮಂತ್ರಿಯಾಗಿದ್ದ ಜಾರ್ಜ್ ಅವರಾ? ಇದರ ಹೊಣೆ ಸಿದ್ದರಾಮಯ್ಯ ಇಂದಿಗೂ ಹೊತ್ತಿಕೊಳ್ಳುತ್ತಿಲ್ಲ. ಅಲ್ಲದೆ ಲೋಕಾಯುಕ್ತವನ್ನು ಬಂದ್ ಮಾಡುವ ಮೂಲಕ ಭ್ರμÁ್ಟಚಾರ ಹೆಚ್ಚಳಕ್ಕೆ ನಾಂದಿ ಹಾಡಿದವರು ಮಾಜಿ ಸಿಎಂ ಎಂದು ಹರಿಯಾಯ್ದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ, ನಗರ ಘಟಕದ ಅಧ್ಯಕ್ಷ ಸಿದ್ದಾಜಿ ಪಾಟೀಲ, ಗ್ರಾಮಾಂತರ ಅಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ಜಿ.ನಮೋಶಿ, ಕ್ರೆಡೆಲ್ ಅಧ್ಯಕ್ಷ ಚಂದು ಪಾಟೀಲ, ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್, ಸಂತೋಷ ಹಾದಿಮನಿ ಇದ್ದರು.

ಭೇಷರತ್ ಕ್ಷಮೆ ಯಾಚನೆಗೆ ಆಗ್ರಹ: ವಿದೇಶದಲ್ಲಿ ಭಾರತದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬಗ್ಗೆ ಹಗುರವಾಗಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಷರತ್ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಆಗ್ರಹಿಸಿದರು.

ಸ್ವಾತಂತ್ರ್ಯಗಳಿಸಿ ಕೊಟ್ಟಿದ ಪಕ್ಷ ಕಾಂಗ್ರೆಸ್ ಎಂದು ಅದರ ನಾಯಕರು ಹೇಳುತ್ತಾರೆ. ಆದರೆ ಹೊರ ದೇಶಗಳಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಾಹುಲ್ ಗಾಂಧಿ ಅಣುಕಿಸಿದ್ದಾರೆ. ಅವರಿಗೆ ಸಂಕಷ್ಟವಾದರೆ ದೇಶದ ಜನರ ಹತ್ತಿರ ಹೇಳಿಕೊಳ್ಳಬೇಕಾಗಿತ್ತು, ಅದನ್ನು ಹೊರತುಪಡಿಸಿ ಬೇರೆ ದೇಶದಲ್ಲಿ ನಮ್ಮ ಬಗ್ಗೆ ಹೇಳಿರುವುದು ಖಂಡನೀಯ ಎಂದರು.

ನಮ್ಮ ದೇಶ ಹಲವು ವರ್ಷಗಳ ಕಾಲ ಯಾರ ಅಡಿಯಾಳು ಆಗಿತ್ತೊ ಅಂತವರನ್ನು ಮತ್ತೆ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಧ್ಯ ಪ್ರವೇಶ ಮಾಡುವಂತೆ ವಿದೇಶಿ ಶಕ್ತಿಗಳಿಗೆ ಅವರದೇ ನೆಲದಲ್ಲಿ ಮನವಿ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ ಎಂದು ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here