ಸುರಪುರ:ಜಿಲ್ಲಾಧಿಕಾರಿಗಳ ಸಭೆಯಲ್ಲಿ ಬಿಎಲ್‍ಓ ಕಿಟ್ ವಿತರಣೆ

0
13

ಸುರಪು: ನಗರದ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸುರಪುರ ವಿಧಾನಸಭಾ ಕ್ಷೇತ್ರದ ಎಲ್ಲಾ ಬಿಎಲ್‍ಓಗಳ ಸಭೆಯನ್ನು ನಡೆಸಲಾಯಿತು.

ಸಭೆಯ ಅಧ್ಯಕ್ಷತೆವಹಿಸಿದ್ದ ಜಿಲ್ಲಾಧಿಕಾರಿಗಳಾದ ಸ್ನೇಹಲ್ ಆರ್ ಅವರು ಮಾತನಾಡಿ,ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿನ ಮತದಾರರ ಪಟ್ಟಿಯಲ್ಲಿ ಯಾವುದೇ ಹೆಸರುಗಳು ಬಿಟ್ಟು ಹೋಗದಂತೆ ನೋಡಿಕೊಳ್ಳುವಂತೆ ತಿಳಿಸಿದರು.ಅಲ್ಲದೆ ಮತದಾರರ ಪಟ್ಟಿಯಲ್ಲಿ ಯಾವುದೇ ವಿಐಪಿ ವಿವಿಐಪಿ ಹೆಸರುಗಳು ಇರುವುದನ್ನು ಖಚಿತಪಡಿಸಿಕೊಳ್ಳಿ,ಮತದಾರರ ಪಟ್ಟಿಯಲ್ಲಿನ ಸೇರ್ಪಡೆ ಮತ್ತು ಪರಿಷ್ಕರಣೆಗೆ ಸಂಬಂಧಿಸಿದಂತೆ ನಮೂನೆ-6,ನಮೂನೆ-8ರ ಚೆಕಲಿಸ್ಟ್‍ಗಳನ್ನು ಎರಡು ದಿನಗಳಲ್ಲಿ ಪರಿಶೀಲನೆ ಮಾಡಿ ಚುನಾವಣೆ ಶಾಖೆಗೆ ಸಲ್ಲಿಸುವಂತೆ ತಿಳಿಸಿದರು.

Contact Your\'s Advertisement; 9902492681

ಮತದಾನ ದಿಂದ ಯಾವೊಬ್ಬ ವ್ಯಕ್ತಿಯೂ ವಂಚಿತರಾಗಬಾರದು ಆನಿಟ್ಟಿನಲ್ಲಿ ಎಲ್ಲರು ಕಾರ್ಯನಿರ್ವಹಿಸುವಂತೆ ತಿಳಿಸಿದರು.ಅಲ್ಲದೆ ಕ್ಷೇತ್ರದಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಪರಿಶೀಲನೆ ಮಾಡಿ ವರದಿ ನೀಡುವಂತೆ ತಿಳಿಸಿದರು.

ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆಗೊಂಡಿರುವ ಯುವ ಮತದಾರರು ಮತದಾನ ಮಾಡಲು ಮಾಹಿತಿಯನ್ನು ನೀಡುವಂತೆ ತಿಳಿಸಿದರು ಮತ್ತು ಪ್ರತಿ ಮತಗಟ್ಟೆ ವ್ಯಾಪ್ತಿಯಲ್ಲಿನ 80 ವರ್ಷ ಮೇಲ್ಪಟ್ಟ ಮತ್ತು ಪಿಡಬ್ಲ್ಯೂಡಿ ಮತದಾರರ ವಿಳಾಸ ಹಾಗೂ ಇತರೆ ಮಾಹಿತಿಯನ್ನು ಕ್ರೂಢಿಕರಿಸುವಂತೆ ಹಾಗೂ ಯಾವುದೇ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾನ ಬಹಿಷ್ಕಾರ ಮಾಡುವುದರ ಕುರಿತು ಮುಂಚೆಯೇ ಮಾಹಿತಿ ಪಡೆದು ಚುನಾವಣಾಧಿಕಾರಿಗಳಿಗೆ ತಿಳಿಸುವಂತೆ ಸೂಚಿಸಿದರು.

ನಂತರ ಎಲ್ಲಾ ಬಿಎಲ್‍ಓಗಳಿಗೆ ಕಿಟ್‍ಗಳನ್ನು ವಿತರಿಸಲಾಯಿತು. ಸಭೆಯಲ್ಲಿ ಸಹಾಯಕ ಆಯುಕ್ತ ಶಾ ಆಲಂ ಹುಸೇನ್,ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ,ತಾಲೂಕು ಪಂಚಾಯಿತಿ ಇಓ ಚಂದ್ರಶೇಖರ ಪವರ್ ಸೇರಿದಂತೆ ಎಲ್ ಬಿಎಲ್‍ಓಗಳು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here