ಕಲಬುರಗಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ದಿನಾಂಕ 01-09-2014 ರಂದು ಕರ್ತವ್ಯದಲ್ಲಿದ್ದು, ನಂತರ 58 ವರ್ಷ ಪೂರ್ಣಗೊಂಡ ನೌಕರರು, ನಿವೃತ್ತ, ಸ್ವಯಂ ನಿವೃತ್ತ ಹಾಗೂ ಸೇವೆಯಲ್ಲಿ ಮುಂದುವರೆದು ಕಾರ್ಯನಿರ್ವಹಿಸುತ್ತಿರುವ ನೌಕರರು ಗರಿಷ್ಠ ಪಿಂಚಣಿಗೆ ಇಚ್ಛೆ ಹೊಂದಿದ್ದಲ್ಲಿ ಇ.ಪಿ.ಎಫ್.ಓ. (ಇPಈಔ) ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2023ರ ಮೇ 3 ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
ಇ.ಪಿ.ಎಫ್.ಓ. (ಇPಈಔ) ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕವೇ ಮಾತ್ರ ಅರ್ಜಿ ಸಲ್ಲಿಸಬೇಕು. ಉಳಿದ ಯಾವುದೇ ಪ್ರಕಾರದ ಮೂಲಕ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ಇದನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗುತ್ತದೆ ಎಂದು ಆರ್.ಪಿ.ಎಫ್.ಸಿ. (ಖ.P.ಈ.ಅ) ಕಚೇರಿ ಮಾಹಿತಿ ನೀಡಿದೆ.
ಸರ್ವೋಚ್ಛ ನ್ಯಾಯಾಲಯವು ದಿನಾಂಕ: 04.11.2022ರಂದು ಗರಿಷ್ಠ ಪಿಂಚಣಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನೀಡಿರುವ ತೀರ್ಪು, ದೆಹಲಿಯ ಇ.ಪಿ.ಎಫ್.ಓ ಇವರು ದಿ.20.02.2023 ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುತ್ತೋಲೆ ದಿ.24.02.2023ರಲ್ಲಿ ನೀಡಿರುವ ನಿರ್ದೇಶನಗಳನ್ವಯ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…