ಕಲಬುರಗಿ: ನಗರದ ಜಯತೀರ್ಥ ಕಲ್ಯಾಣ ಮಂಟಪದಲ್ಲಿ ಇದೇ ೨೭ರಂದು ನಡೆಯಲಿರುವ ವಿಭಾಗಮಟ್ಟದ ದಾಸ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರೂ ಆಗಿರುವ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ದಕ್ಷಿಣ ವಲಯದಿಂದ ಸನ್ಮಾನಿಸಲಾಯಿತು.
ಕನ್ನಡ ಭವನದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ರೇವೂರ ಅವರನ್ನು ಸರ್ವಾನುಮತದಿಂದ ಆಯ್ಕೆಮಾಡಲಾಗಿತ್ತು. ಗುರುವಾರ ಅವರನ್ನು ಸನ್ಮಾನಿಸಿ ಅಧಿಕೃತವಾಗಿ ಆಮಂತ್ರಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಅವರು, ದಾಸ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ವಿಜಯಕುಮಾರ ಪಾಟೀಲ್ ತೇಗಲಲತಿಪ್ಪಿ, ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಕಸಾಪ ದಕ್ಷಿಣ ವಲಯದ ಅಧ್ಯಕ್ಷ ಶಾಮಸುಂದರ ಕುಲಕರ್ಣಿ, ಗೌರವ ಕೋಶಾಧ್ಯಕ್ಷ ಪ್ರಹ್ಲಾದ ಪೂಜಾರಿ, ಗೌರವ ಕಾರ್ಯದರ್ಶಿ ರವಿಕುಮಾರ ಶಹಾಪುರಕರ, ಸಹ ಕಾರ್ಯದರ್ಶಿ ಶಿವಕುಮಾರ ಸಿ.ಎಚ್ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…