ಬಿಸಿ ಬಿಸಿ ಸುದ್ದಿ

ಉರಿಗೌಡ ನಂಜೇಗೌಡ ಸಿನಿಮಾ; ಸಚಿವ ಮುನಿರತ್ನ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ

ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಕಿಡಿ

ಬೆಂಗಳೂರು: ಸಚಿವ ಮುನಿರತ್ನ ಅವರು ಉರಿಗೌಡ, ನಂಜೇಗೌಡ ಸಿನಿಮಾ ಮಾಡಿದರೆ ಸಿಟಿ ರವಿ ಕಥೆ ಬರೆದರೆ, ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಚಿತ್ರಕಥೆ ಬರೆಯುತ್ತಾರೆಯೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉರಿಗೌಡ ನಂಜೇಗೌಡ ಹೆಸರಿನಲ್ಲಿ ಸಿನಿಮಾ ಮಾಡಲು ತಮ್ಮ ವೃಷಬಾದ್ರಿ ಪ್ರೊಡಕ್ಷನ್ಸ್ ಬ್ಯಾನರ್ ನಡಿಯಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ನೋಂದಾವಣಿ ಮಾಡಿರುವ ಸಚಿವ ಮುನಿರತ್ನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಒಕ್ಕಲಿಗರ ಮೇಲೆ ಬಿಜೆಪಿ ವಕ್ರದೃಷ್ಟಿ ಹಾಗೂ ಕುಲಕ್ಕೂ ಅಪಮಾನ ಕುಲ ಗುರುವಿಗೂ ಅಪಮಾನ ಎಂದು ಹ್ಯಾಷ್ ಟ್ಯಾಗ್ ಮಾಡಿ ಬಿಜೆಪಿ ಹಾಗೂ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ.ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆಇರುವುದಂತೂ ಸತ್ಯ. ಕುಲಕ್ಕೆ, ಕುಲ ಗುರುವಿಗಾದ ಈ ಘೋರ ಅಪಮಾನದಿಂದ ಕುದಿಯುತ್ತಿರುವ ಒಕ್ಕಲಿಗ ಸಮಾಜವನ್ನು ಇನ್ನಷ್ಟು ಹೀನಾಯವಾಗಿ ಕಳಂಕದ ಕೂಪಕ್ಕೆ ತಳ್ಳಲು ಇದೇ ಬಿಜೆಪಿ ಸರಕಾರದ ಸಚಿವರೊಬ್ಬರು ಧೂರ್ತ ಪ್ರಯತ್ನ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಶ್ರೀ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ ಉರಿಗೌಡ ನಂಜೇಗೌಡ ‘ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಕುದಿಯುತ್ತಿರುವ ಒಕ್ಕಲಿಗರ ನೋವಿನ ಮೇಲೆ ಮಾರಣಾಂತಿಕ ಬರೆ ಎಳೆಯುವಂತಿದೆ ಮುನಿರತ್ನರ ಈ ದುರಹಂಕಾರ. ರಾಜ್ಯ ಬಿಜೆಪಿ ಸೃಷ್ಟಿಸಿದ ಕಿರಾತಕ ಸುಳ್ಳನ್ನೇ ಸಿನಿಮಾ ಮಾಡಿ ಒಕ್ಕಲಿಗರನ್ನು ಇತಿಹಾಸದಲ್ಲಿ ಶಾಶ್ವತವಾಗಿ ಖಳನಾಯಕರನ್ನಾಗಿ ಚಿತ್ರಿಸುವುದೇ ಅವರ ದುರುದ್ದೇಶವಾಗಿದೆ. ಈ ದ್ರೋಹವನ್ನು ಒಕ್ಕಲಿಗರು ಸಹಿಸುವ ಪ್ರಶ್ನೆಯೇ ಇಲ್ಲ. ಚರಿತ್ರೆಯನ್ನು ವಿರೂಪಗೊಳಿಸುವ ನಿರ್ಲಜ್ಜ ರಾಜಕಾರಣಕ್ಕೆ ಮೂಲಕಾರಣರು ಯಾರು? ಇಷ್ಟಕ್ಕೂ, ಈ ಮುನಿರತ್ನಗೂ ಮಂಡ್ಯದ ಒಕ್ಕಲಿಗರಿಗೂ ಸಂಬಂಧವೇನು? ಒಕ್ಕಲಿಗ ಕುಲದಲ್ಲೇ ಹುಟ್ಟಿ ಒಕ್ಕಲು ಸಂಕುಲಕ್ಕೆ ಟಿಪ್ಪು ಕೊಲೆಯ ಕೊಳೆ ಮೆತ್ತಿಸಲು ಹೊರಟಿರುವ ಒಕ್ಕಲು ಕುಲದ ಇಬ್ಬರು ನಿಜವಾದ ಖಳನಾಯಕರನ್ನು ಒಕ್ಕಲಿಗರೆಂದೂ ಕ್ಷಮಿಸರು ಎಂದು ಕುಮಾರಸ್ವಾಮಿ ಅವರು ಎಚ್ಚರಿಕೆ ನೀಡಿದ್ದಾರೆ.

ಕಥೆ, ಚಿತ್ರಕಥೆ ಬರೆಯುತ್ತಾರ?: ಮುನಿರತ್ನ ಮಾಡುವ ಸಿನಿಮಾಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಸಿ.ಟಿ.ರವಿ ಕಥೆ ಬರೆಯುತ್ತಾರಾ? ಟಿಪ್ಪು ನೆಪದಲ್ಲಿ ಜನ್ಮತೆಳೆದ ಜಾತಿ ವಿರುದ್ಧವೇ ವಿಷ ಕಕ್ಕುತ್ತಿರುವ, ಬಿಜೆಪಿಯನ್ನು ಎತ್ತಿ ಕಟ್ಟುತ್ತಿರುವ ಸಿ.ಟಿ.ರವಿ ಅವರು ಉರಿಗೌಡ, ನಂಜೇಗೌಡರೆಂಬ ಕಲ್ಪಿತ ಹೆಸರುಗಳ ನೆಪದಲ್ಲಿ ದಿನವೂ ವಿಷ ಕಕ್ಕುತ್ತಿದ್ದಾರೆ ಎಂದು ಗುಡುಗಿದ್ದಾರೆ.

ವಿಜ್ಞಾನ, ತಂತ್ರಜ್ಞಾನ, ಆವಿಷ್ಕಾರ ಎಂದು ಸದಾ ಬಡಬಡಿಸುತ್ತಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಂತೂ ಈಗ ಉರಿಗೌಡ, ನಂಜೇಗೌಡ ಎಂದು ವಿಷನಂಜು ಉಗಳುತ್ತಿದ್ದಾರೆ. ಅವರು ಈ ಸಿನಿಮಾಕ್ಕೆ ಚಿತ್ರಕಥೆ ಬರೆಯುತ್ತಾರಾಯೇ? ಬರೆದರೂ ಬರೆಯಬಹುದು.ಏಕೆಂದರೆ, ಇವರಿಬ್ಬರೂ ಕುಲದ್ರೋಹಿಗಳಷ್ಟೇ ಅಲ್ಲ, ಒಕ್ಕಲು ಸಂಕುಲದ ವಿನಾಶಕರು ಎಂದು ತಮ್ಮ ಟ್ವೀಟ್ ನಲ್ಲಿ ಬರೆದಿದ್ದಾರೆ.

ಬಿಜೆಪಿಗೆ ವಿನಾಶಕಾಲೇ ವಿಪರೀತ ಬುದ್ಧಿ: ವಿನಾಶಕಾಲೇ ವಿಪರೀತ ಬುದ್ಧಿ ಎನ್ನುವಂತಿದೆ ಬಿಜೆಪಿ ಸ್ಥಿತಿ. ಪ್ರತೀ ಸೂಕ್ಷ್ಮ ವಿಷಯದಲ್ಲೂ ಮತ ರಾಜಕಾರಣ ಮಾಡುವ ಕಮಲ ಪಕ್ಷಕ್ಕೆ ಕರ್ನಾಟಕವೇ ಪ್ರಯೋಗ ಶಾಲೆ. ಜಾತಿ, ಧರ್ಮಗಳ ನಡುವೆ ಕಿಚ್ಚಿಟ್ಟು, ಸರ್ವಜನಾಂಗದ ತೋಟವಾದ ಕರ್ನಾಟಕಕ್ಕೆ ಕೋಮುಪ್ರಾಷನ ಮಾಡಿಸುತ್ತಿದೆ ಬಿಜೆಪಿ. ಉರಿಗೌಡ, ನಂಜೇಗೌಡ ಎಂಬ ಕಲ್ಪಿತ ಒಕ್ಕಲಿಗ ಹೆಸರುಗಳ ಸೃಷ್ಟಿ, ಸಿನಿಮಾ ಮಾಡುವ ದುರುಳ ಐಡಿಯಾ, ಒಕ್ಕಲಿಗರ ಮೇಲೆ ರಾಷ್ಟ್ರ ಬಿಜೆಪಿ, ರಾಜ್ಯ ಬಿಜೆಪಿ ಬೀರುತ್ತಿರುವ ವಕ್ರದೃಷ್ಟಿ. ಇದೆಲ್ಲವೂ ಒಕ್ಕಲಿಗರನ್ನು ರಾಜಕೀಯವಾಗಿ ಮುಗಿಸಿಬಿಡುವ ಬಿಜೆಪಿ ರಕ್ಕಸ ಹಿಡೆನ್ ಅಜೆಂಡಾ ಅಲ್ಲದೆ ಮತ್ತೇನೂ ಅಲ್ಲ ಎಂದು ಅವರು ಹೇಳಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago