ಕಲಬುರಗಿ; “ವಿಶ್ವ ಬಾಯಿ ಆರೋಗ್ಯ ದಿನಾಚರಣೆ” ಅಂಗವಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ಆರೋಗ್ಯ ಕುಟುಂಬ ಕಲ್ಯಾಣ ಸೇವೆಗಳ ವಿಭಾಗೀಯ ಜಂಟಿ ನಿರ್ದೇಶಕ ಡಾ.ಶಂಕ್ರಪ್ಪಾ ಮೈಲಾರಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ರಾಜಶೇಖರ್ ಮಾಲಿ ಅವರು ಗುರುವಾರ ಚಾಲನೆ ನೀಡಿದರು.
ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ಎನ್‍ಓಹೆಚ್‍ಪಿ) ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ, ಹೆಚ್‍ಕೆಇಎಸ್‍ಎನ್ ದಂತ ಮಹಾವಿದ್ಯಾಲಯ, ಆಲ್‍ಬದರ್ ದಂತ ಮಹಾವಿದ್ಯಾಲಯ, ಇಎಸ್‍ಐಸಿ ದಂತ ಮಹಾವಿದ್ಯಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ “ನಿಮ್ಮ ಬಾಯಿ ಬಗ್ಗೆ ನಿಮಗೆ ಹೆಮ್ಮೆ” ಎಂಬ ಘೋಷವಾಕ್ಯದೊಂದಿಗೆ ಹಮ್ಮಿಕೊಳ್ಳಲಾದ ಜಾಥಾ ಕಾರ್ಯಕ್ರಮದಲ್ಲಿ ಜಿಲ್ಲಾ ಎನ್‍ಓಹೆಚ್‍ಪಿ ಕಾರ್ಯಕ್ರಮಾಧಿಕಾರಿ ಡಾ ಸಂಧ್ಯಾ ಕಾನೇಕರ ಅವರು “ವಿಶ್ವ ಬಾಯಿ ಆರೋಗ್ಯ ದಿನ”ದ ಪ್ರಾಮುಖ್ಯತೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಲಬುರಗಿ ಆಲ್-ಬದರ್ ದಂತ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ಸೈಯದ್ ಝಕಾವುಲ್ಲಾ ಮಾತನಾಡಿ, ಸಾರ್ವಜನಿಕರಲ್ಲಿ ಬಾಯಿ ಆರೋಗ್ಯ ಕುರಿತು ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಬಾಯಿ ಆರೋಗ್ಯ ಕಾರ್ಯಕ್ರಮದ ಕುರಿತು ಪೋಸ್ಟರ್‍ನ್ನು ಬಿಡುಗಡೆ ಮಾಡಲಾಯಿತು. ಜಿಲ್ಲಾ ಆಸ್ಪತ್ರೆಯಿಂದ ಆರಂಭಗೊಂಡ ಈ ಜಾಥಾವು ನಗರದ ಜಗತ್ ವೃತ್ತಕ್ಕೆ ಬಂದು ಕೊನೆಗೊಂಡಿತು.
ಈ ಜಾಥಾದಲ್ಲಿ ಕಲಬುರಗಿಯ ಆರೋಗ್ಯ ಇಲಾಖೆಯ ಕಾರ್ಯಕ್ರಮಾಧಿಕಾರಿಗಳು, ದಂತ ಆರೋಗ್ಯ ಅಧಿಕಾರಿಗಳು, ದಂತ ಮಹಾವಿದ್ಯಾಲಯದ ಪ್ರಾಧ್ಯಾಪಕರು, ಬೋಧಕರು, ವಿದ್ಯಾರ್ಥಿಗಳು, ಸ್ಕೂಲ್ ಆಫ್ ನರ್ಸಿಂಗ್‍ನ ವಿದ್ಯಾರ್ಥಿಗಳು ಪಾಲ್ಗೊಂಡಿದರು. ಕಾರ್ಯಕ್ರಮದಲ್ಲಿ ಡಾ. ಶ್ವೇತಾ ರಾಜಗಿರಿ ಸ್ವಾಗತಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…