ಕಲಬುರಗಿ: 2023-24 ನೇ ಸಾಲಿಗೆ ಆಯವ್ಯಯದಲ್ಲಿ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ರೂ 5000 ಕೋಟಿ ಘೋಷಣೆ ಮಾಡಿದ್ದು, ಅನುದಾನವನ್ನು ಮಂಡಳಿಗೆ ಒದಗಿಸಿರುವುದರಿಂದ ಮಂಡಳಿಯಿಂದಲೇ ಕ್ರಿಯಾ ಯೋಜನೆಯನ್ನು ಸಿ.ಡಿ.ಐ ಸೂಚ್ಯಂಕದ ಆಧಾರದ ಮೇಲೆ ತಯಾರಿಸಲು ಮಂಡಳಿಯ ಸರ್ವ ಸದಸ್ಯರು ನಿರ್ಣಯಿಸಿದರು.
ಮಂಡಳಿಯ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅಧ್ಯಕ್ಷತೆಯಲ್ಲಿ ನಡೆದ ಸದಸ್ಯರ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರೂ. 5000 ಕೋಟಿ ಪೈಕಿ ಮೊದಲನೇ ಹಂತದಲ್ಲಿ ರೂ 3,000 ಕೋಟಿ ಹಾಗೂ ಎರಡನೇ ಹಂತದಲ್ಲಿ ರೂ 2000 ಕೋಟಿ ಅನುದಾನವನ್ನು ಮಂಡಳಿಗೆ ನೀಡಲಾಗುತ್ತದೆ. ಇದಕ್ಕೆ ಕ್ರಿಯಾ ಯೋಜನೆಯನ್ನು ತಯಾರಿಸಲಾಗುವುದು ಎಂದು ತಿಳಿಸಿದ್ದಾರೆ.
2022-23 ನೇ ಸಾಲಿನ ಕ್ರಿಯಾ ಯೋಜನೆಯನ್ನು ಹಲವು ಷರತ್ತುಗಳನ್ನು ವಿಧಿಸಿ ಘಟನೋತ್ತರ ಅನುಮೋದನೆಯನ್ನು ಸಹ ನೀಡಲಾಯಿತು ಎಂದು ಅವರು ತಿಳಿಸಿದ್ದಾರೆ.
ಮ್ಯಾಕ್ರೋ ಯೋಜನೆಯಡಿಯಲ್ಲಿ ಜಿಲ್ಲೆಗಳ ಕೇಂದ್ರಸ್ಥಾನ ಹಾಗೂ ಇತರೆ ನಗರ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನಿಸಲಾಯಿತು. ಕ್ರಿಯಾ ಯೋಜನೆಯ ಅನುಷ್ಠಾನ ಕುರಿತು ಮಂಡಳಿಯ ಕಾರ್ಯದರ್ಶಿಗಳು ಕಾಮಗಾರಿವಾರು ಕಾಲಮಿತಿಯನ್ನು ನಿಗದಿಪಡಿಸಿ ಪ್ರಗತಿ ಸಾಧಿಸಬೇಕು ಎಂದು ತಿಳಿಸಲಾಯಿತು.
ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಹೊಸ ತಾಲೂಕುಗಳಿಗೆ ಸಿ.ಡಿ.ಐ ಸೂಚ್ಯಂಕದ ಕುರಿತು ಹಾಗೂ ಪ್ರಸ್ತುತ ಸಿ.ಡಿ.ಐ ಸೂಚ್ಯಂಕದ ಅಭಿವೃದ್ಧಿಯ ಕುರಿತು ತಾಲ್ಲೂಕು ಹಾಗೂ ಮತಕ್ಷೇತ್ರವಾರು ಅಭಿವೃದ್ಧಿಯ ಕುರಿತು ಅಧ್ಯಯನ ನಡೆಸಲು ತೀರ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಮಂಡಳಿ ಸದಸ್ಯರೂ ಆದ ಶಾಸಕರುಗಳು ಸಭೆಯಲ್ಲಿ ತಮ್ಮ ತಮ್ಮ ಸಲಹೆ- ಅಭಿಪ್ರಾಯಗಳನ್ನು ನೀಡಿದರು. ಮಂಡಳಿಯ ಸಭೆಯಲ್ಲಿ ಸಂತಸ ವ್ಯಕ್ತಪಡಿಸಿದರು.
ಸಭೆಯಲ್ಲಿ ಆಳಂದ ಶಾಸಕರಾದ ಸುಭಾಶ್ ಗುತ್ತೇದಾರ್, ಕಲಬುರಗಿ ಗ್ರಾಮೀಣ ಶಾಸಕರಾದ ಬಸವರಾಜ ಮತ್ತಿಮೂಡ, ಯಾದಗಿರಿ ವೆಂಕಟ್ಟರೆಡ್ಡಿ ಮುದ್ನಾಳ, ಶಹಾಪೂರ ಶಾಸಕರಾದ ಶರಣಬಸಪ್ಪ ದರ್ಶನಾಪೂರ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ, ಕೆ.ಕೆ.ಆರ್.ಡಿ.ಬಿ. ಜಂಟಿ ನಿರ್ದೇಶಕರಾದ ಪ್ರವೀಣ ಪ್ರಿಯಾ ಡೇವಿಡ್, ಉಪಕಾರ್ಯದರ್ಶಿ ಆನಂದ ಪ್ರಕಾಶ ಮೀನಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಇದೇ ವೇಳೆ ಅನ್‍ಲೈನ್ ಮೂಲಕ ಸಭೆಯಲ್ಲಿ ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ, ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಆರ್ಥಿಕ ಇಲಾಖೆಯ ಅಧಿಕಾರಿಗಳು ಮುಂತಾದವರು ಭಾಗವಹಿಸಿದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…