ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ಭೀಮಾ ನದಿಯ ಮೇಲ್ಭಾಗದಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ನದಿಗೆ ಪ್ರವಾಹ ಬಂದಿರುವುದರಿಂದ ಪ್ರವಾಹದ ನೀರಿನಲ್ಲಿ ಮಣ್ಣಿನ ಅಂಶ ಹೆಚ್ಚಾಗಿರುತ್ತದೆ.
ಜಲ ಮಂಡಳಿಯು ನೀರನ್ನು ಶುದ್ಧೀಕರಿಸಿ, ಸುಪರ್ ಕ್ಲೋರಿನೇಶನ್ ಮಾಡಿ ನಗರಕ್ಕೆ ನೀರು ಸರಬರಾಜು ಮಾಡುತ್ತಿದೆ. ಆದ್ಯಾಗೂ ಸಹ ಕಲಬುರಗಿ ನಗರದ ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮವಾಗಿ ಕುಡಿಯುವ ನೀರನ್ನು ಕಾಯಿಸಿ ಆರಿಸಿ ಸೋಸಿ ಕುಡಿಯಬೇಕೆಂದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಲಬುರಗಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಇದಲ್ಲದೇ ಕಲಬುರಗಿ ನಗರಕ್ಕೆ ನಿಗದಿತ ದಿನ ಮತ್ತು ಸಮಯದಂದು ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ತಮ್ಮ ಮನೆಗೆ ತೆಗೆದುಕೊಂಡ ನಳದ ಜೋಡಣೆಗೆ ತೊಟ್ಟಿಗಳನ್ನು ಕಡ್ಡಾಯವಾಗಿ ಕೂಡಿಸಿಕೊಳ್ಳಬೇಕು ಮತ್ತು ನಳದ ತಗ್ಗುಗಳನ್ನು ಮುಚ್ಚಬೇಕು. ತಗ್ಗುಗಳಲ್ಲಿ ಕಲುಷಿತ ನೀರು ಸಂಗ್ರಹಣೆಯಾಗಿ ಅದೇ ನೀರು ಮತ್ತೆ ನಳದ ತೊಟ್ಟಿಯ ಮುಖಾಂತರ ಗ್ರಾಹಕರಿಗೆ ತಲುಪುತ್ತದೆ. ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ.
ನಗರದ ಬಹುತೇಕ ಬಡಾವಣೆಗಳಲ್ಲಿ ಸಾರ್ವಜನಿಕರು ಕುಡಿಯುವ ನೀರಿನ ಪೈಪುಗಳಿಗೆ ರಂದ್ರ ಹಾಕಿ ಅದು ಮುಚ್ಚದೇ ಹಾಗೂ ತೊಟ್ಟಿಗಳನ್ನು ಹಚ್ಚದೇ ಇರುವುದು ಕಂಡು ಬಂದಿದೆ. ಕೊಳಚೆ ಮತ್ತು ಮಳೆಯ ನೀರು ಈ ಪೈಪುಗಳಲ್ಲಿ ಸೇರುತ್ತಿರುವುದರಿಂದ ರೋಗ ರುಜಿನುಗಳು ಹರಡುತ್ತಿವೆ. ತಕ್ಷಣ ತಗ್ಗುಗಳನ್ನು ಮುಚ್ಚಿ, ನಳದ ತೊಟ್ಟಿಗಳನ್ನು ಅಳವಡಿಸಿ, ಸ್ವಚ್ಚ ನೀರು ಸರಬರಾಜು ಮಾಡಲು ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…