ಕಲಬುರಗಿ: ವಿದ್ಯುತ್ ತಗುಲಿದ ಪರಿಣಾಮ ಒಂದೇ ಕುಟುಂಬದ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟು, ತಂದೆ ಗಂಭೀರವಾಗಿ ಗಾಯಗೊಂಡ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ಪಟ್ಟಣದ ಧನಗರ ಗಲ್ಲಿಯಲ್ಲಿ ನಿನ್ನೆ(ಶನಿವಾರ) ರಾತ್ರಿ ನಡೆದಿದೆ.
ಝರಣಮ್ಮ (45), ಮಹೇಶ (18), ಸುರೇಶ (20) ಮೃತ ದುರ್ದೈವಿಗಳಾಗಿದ್ದಾರೆ.
ನಿನ್ನೆ ರಾತ್ರಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ವಿದ್ಯುತ್ ತಂತಿ ಕಡಿದು ನೆಲಕ್ಕೆ ಬಿದ್ದಿತ್ತು. ರಾತ್ರಿ ಮಳೆ ಜೋರಾದಾಗ ದನಗಳನ್ನು ಆಶ್ರಯಕ್ಕೆ ಸ್ಥಳಾಂತರಿಸಲು ಕುಟುಂಬ ತೆರಳಿತ್ತು. ಬಾಗಿಲೆದುರು ನಿಂತಿದ್ದ ನೀರಿನಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದು ವಿದ್ಯುತ್ ಪಸರಿಸಿತ್ತು.
ಈ ವೇಳೆ ರಾತ್ರಿ ಮನೆಯಿಂದ ಹೊರ ಬಂದ ನಾಲ್ವರಿಗೂ ವಿದ್ಯುತ್ ಶಾಕ್ ಪ್ರವಹಿಸಿ ತಾಯಿ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ತಂದೆ ಅಂಬಣ್ಣನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಳುವನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…