ಆಳಂದ: ತಾಲ್ಲೂಕಿನ ಕೋತನ ಹಿಪ್ಪರ್ಗ ಗ್ರಾಮದಲ್ಲಿ ಸಣ್ಣ ನೀರಾವರಿ ಹಾಗೂ ಅಂತರ್ಜಲ ಇಲಾಖೆ ವತಿಯಿಂದ ರವಿವಾರ ನೂತನ ಕೆರೆ ನಿರ್ಮಾಣ ಕಾಮಗಾರಿಗೆ ಶಾಸಕ ಸುಭಾμï ಗುತ್ತೇದಾರ ಅವರು ಶಂಕುಸ್ಥಾಪನೆ ನೆರೆವೇರಿಸಿದರು.
ಬಳಿಕ ಮಾತನಾಡಿದ ಅವರು,ಈ ಕರೆಯ ಕಾಮಗಾರಿ ಈಗಾಗಲೇ ಆರಂಭವಾಗಿದೆ ಎಂದು ಹೇಳಿದರು. ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಾಂತಪ್ಪ ಜಾಧವ್ ಮಾತನಾಡಿ,ಯೋಜನೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖಂಡ ವಿಠ್ಠಲರಾವ ಪಾಟೀಲ, ಗ್ರಾಮಸ್ಥ ಸಿದ್ದಾರೂಢ ಮಾತನಾಡಿದರು.
ಗುತ್ತಿಗೆದಾರ ಅಶೋಕ ಸಾವಸುದ್ಧಿ, ಗ್ರಾ.ಪಂ.ಅಧ್ಯಕ್ಷ ಶ್ರೀಶೈಲ ಪಾಟೀಲ್,ಸೇರಿದಂತೆ ಮುಖಂಡರಾದ ಶಿವಪ್ಪ ವಾರಿಕ್ , ರಘುನಾಥ ಪಾಟೀಲ,ರಾಜು ಮೂಲಗೆ ,ಮಲ್ಲಿಕಾರ್ಜುನ ಕುಂದಗೋಳ ಸೇರಿ,ಗ್ರಾಮಸ್ಥರು ಮುಖಂಡರು,ಕಾರ್ಯಕರ್ತರು ಮತ್ತಿತರರು ಪಾಲ್ಗೊಂಡಿದ್ದರು.
ಇದ್ದಕೂ ಮುಂಚೆ ತಾಲ್ಲೂಕಿನ ತಡಕಲ ಗ್ರಾಮದಲ್ಲಿ ರಸ್ತೆ ನಿರ್ಮಾಣ ಹಾಗೂ ಕಣಮುಸ್ ಗ್ರಾಮದಲ್ಲಿ ಸೇತುವೆ ನಿರ್ಮಾಣಗೆ ಅಡಿಗಲ್ಲು ಮಾಡಿದರು.
ತಾಲ್ಲೂಕಿನ ವಿವಿಧೆಡೆ ಅಕಾಲಿಕ ಸುರಿದ ಮಳೆಯಿಂದಾಗಿ ಹಾನಿಯಾದ ಬೆಳೆಗಳಿಗೆ ಮುಖ್ಯಮಂತ್ರಿ ಬಸಬರಾಜ್ ಬೊಮ್ಮಾಯಿ ಜತೆ ಚರ್ಚಿಸಿ ಪರಿಹಾರ ಒದಗಿಸಲಾಗುದು ಎಂದು ಹೇಳಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…