ಹೆದ್ದಾರಿ ಮೇಲೆ ಪೊಲೀಸ್ ಪೇದೆ ಶವ ಪತ್ತೆ: ಕೊಲೆ ಶಂಕೆ

0
77

ವಾಡಿ; ವಾಹನ ಅಪಘಾತ ದೃಶ್ಯ ರೂಪದಲ್ಲಿ ಪೊಲೀಸ್ ಪೇದೆ ಶವ ವಾಡಿ-ಯಾದಗಿರಿ ರಾಷ್ಟ್ರೀಯ ಹೆದ್ದಾರಿ ಮೇಲೆ ಸೋಮವಾರ ಬೆಳಗಿನ ಜಾವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

ಚಿತ್ತಾಪುರ ತಾಲೂಕಿನ ವಾಡಿ ನಗರ ಪೊಲೀಸ್ ಠಾಣೆಯ ಪೇದೆ ಕರಿಯಪ್ಪ (37) ಮೃತ ದುರ್ದೈವಿ. ರವಿವಾರ ಯಾದಗಿರಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ ನಾಲವಾರ ಚಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸಿದ್ದ ಪೇದೆ ಕರಿಯಪ್ಪ, ರಾತ್ರಿ 8:00 ಗಂಟೆಗೆ ಕರ್ತವ್ಯ ಮುಗಿಸಿ ಅಪರಿಚಿತ ಕಾರಿನಲ್ಲಿ ವಾಡಿ ಪೊಲೀಸ್ ಕ್ವಾರ್ಟರ್ಸ್ ನ ಅವರ ಮನೆಗೆ ಬಂದಿದ್ದರು ಎನ್ನಲಾಗಿದ್ದು, ಊಟ ಮಾಡಿ ಮಲಗಿದ್ದರು. ತಡರಾತ್ರಿ ಎದ್ದು ಪುನಃ ನಾಲವಾರ ಚೆಕ್ ಪೋಸ್ಟ್ ಕಡೆಗೆ ಬೈಕ್ ಸವಾರಿ ಹೋದವರು ಸೋಮವಾರ ಬೆಳಗ್ಗೆ ಲಾಡ್ಲಾಪುರ ಗ್ರಾಮ ಸಮೀಪದ ಡಿಗ್ಗಿ ತಾಂಡಾ ಹತ್ತಿರದ ಕೂಡು ರಸ್ತೆ ಸಮೀಪ ಶವವಾಗಿ ಪತ್ತೆಯಾಗಿದ್ದಾರೆ.

Contact Your\'s Advertisement; 9902492681

ಘಟನಾ ಸ್ಥಳದಲ್ಲಿ ಪೇದೆ ಕರಿಯಪ್ಪ ಬಳಸಿದ ಬೈಕ್ ಅಪಘಾತಕ್ಕೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯಾವುದೋ ಅಪರಿಚಿತ ವಾಹನ ಡಿಕ್ಕಿ ಹೊಡಿದಿರಬಹುದು ಅಥವ ಅಕ್ರಮ ಮರಳು ಸಾಗಾಣಿಕೆ ವಾಹನ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದು ಪರಾರಿಯಾಗಿರಬಹುದು ಎಂಬ ಅನುಮಾನಗಳು ಸಾರ್ವಜನಿಕರನ್ನು ಕಾಡುತ್ತಿದೆ. ಅಲ್ಲದೆ ಕರ್ತವ್ಯ ಮುಗಿದ ಮೇಲೂ ಪೇದೆ ರಾತ್ರಿ ಈ ಕಡೆ ಏಕೆ ಬಂದರು? ಎಂಬುದು ಪೊಲೀಸ್ ಅಧಿಕಾರಿಗಳ ಸಂಶಯಕ್ಕೂ ಕಾರಣವಾಗಿದೆ.

ಸಂಶಯಾಸ್ಪದ ರೀತಿಯಲ್ಲಿ ಸಾವಿಗೀಡಾದ ಇಂಡಿ ತಾಲೂಕಿನ ತೆಗ್ಗಳ್ಳಿ ಗ್ರಾಮದ ಕರಿಯಪ್ಪನಿಗೆ ಪತ್ನಿ, ಒರ್ವ ಪುತ್ರಿ, ಒರ್ವ ಪುತ್ರ ಇದ್ದಾರೆ. ಡಿವೈಎಸ್ಪಿ, ಸಿಪಿಐ, ಪಿಎಸ್ಐ ಸುದರ್ಶನ್ ರೆಡ್ಡಿ ಭೇಟಿ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here