ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಜೈನ ಧರ್ಮದ ಪ್ರಾಚೀನ ಯುಗದ ಶಿಲಾ ಶಾಸನಗಳು ಗತಕಾಲದ ವೈಭವ ಸಾರುವ ಕೋಟೆ ಕೊತ್ತಲೆಗಳು, ನೂರಾರು ವರ್ಷಗಳ ಪವಿತ್ರ ಬಸದಿಗಳು ಇಂದಿಗೂ ಕಾಣಬಹುದು. ಜಗತ್ತಿಗೆ ಅಹಿಂಸೆ, ಮನುಷ್ಯ ಪ್ರೇಮ ಸಾರಿದ ಜೈನ ಧರ್ಮ ಕುರಿತು ದೇಶದಲ್ಲೆಡೆ ಅದರ ವಿಚಾರಧಾರೆಗಳನ್ನು ಮುಂದಿನ ಜನಾಂಗಕ್ಕೆ ತಿಳಿಸಿಕೊಡುವ ದಿಶೆಯಲ್ಲಿ ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಜೈನಧರ್ಮ ಅಧ್ಯಯನ ಪೀಠ ಸ್ಥಾಪಿಸುವಂತೆ ಕೋರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ರಾಜ್ಯ ನಿರ್ದೇಶಕರಾದ ಸುರೇಶ ತಂಗಾರವರು ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಬಟ್ಟು ಸತ್ಯನಾರಾಯಣರವರಿಗೆ ಮನವಿ ಪತ್ರ ಸಲ್ಲಿಸಿದರು.
ರಾಷ್ಟ್ರಕೂಟರ ರಾಜಧಾನಿ ಮಾನ್ಯಖೇಟ(ಮಳಖೇಡ) ಕನ್ನಡದ ಮೊಟ್ಟಮೊದಲ ಉಪಲಬ್ಧ ಗ್ರಂಥ ಶ್ರೀವಿಜಯನ ಕವಿರಾಜಮಾರ್ಗ ದೊರೆತಿದ್ದು ಈ ನೆಲದಾಗಿದ್ದು ಕನ್ನಡದ ಸಾಹಿತ್ಯ, ಭಾಷೆ, ಸಂಸ್ಕøತಿ, ಶಿಲ್ಪಕಲೆ ಸೇರಿದಂತೆ ವಾಸ್ತುಶಿಲ್ಪ ಕ್ಷೇತ್ರಕ್ಕೆ ಅಮೋಘವಾದಂತಹ ಕೊಡುಗೆ ಕಾಲಕಾಲಕ್ಕೆ ಜೈನಧರ್ಮದ ಮುನಿಗಳು, ಕವಿಗಳು, ವಿದ್ವಾಂಸರು ನೀಡುತ್ತ ಬಂದಿರುವುದು ಇತಿಹಾಸದುದ್ದಕ್ಕೂ ಇಂದಿಗೂ ನಾವು ಕಾಣಬಹುದಾಗಿದೆ. ಹೀಗಾಗಿ ಜೈನ ಧರ್ಮದ ಸಮಗ್ರ ಅಧ್ಯಯನಕ್ಕಾಗಿ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಪೀಠ ಸ್ಥಾಪಿಸುವುದು ಅತ್ಯಗತ್ಯವಾಗಿದ್ದು ಈ ದಿಶೆಯಲ್ಲಿ ರಾಜ್ಯ ಸರ್ಕಾರಕ್ಕೆ ಕೂಡಾ ಮನವಿ ಸಲ್ಲಿಸಲಾಗಿದ್ದು ಕೇಂದ್ರ ಸರ್ಕಾರ ಅಧ್ಯಯನ ಪೀಠ ಪ್ರಾರಂಭಿಸಲು ಮುಂದಾಗುವಂತೆ ಅವರು ಮನವಿ ಮಾಡಿದರು.
ಮನವಿ ಸ್ವೀಕರಿಸಿದ ಕುಲಪತಿಗಳು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದೆಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕುಲಸಚಿವರಾದ ಪ್ರೊ. ಬಸವರಾಜ ಡೋಣೂರ ರವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…