ಕೆಂಭಾವಿ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಜನ ಜಾಗೃತಿ ಸಮಾವೇಶ; ಅಶೋಕ ಹೊಸಮನಿ

0
9

ಸುರಪುರ: ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ದಲಿತ ಸೇನೆ ಹಾಗೂ ಮಾನವ ಬಂಧುತ್ವ ವೇದಿಕೆ ವತಿಯಿಂದ ಇದೇ ತಿಂಗಳ 24ನೇ ತಾರೀಖು ಜಿಲ್ಲಾ ಮಟ್ಟದ ಬೃಹತ್ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸೇನೆ ಜಿಲ್ಲಾಧ್ಯಕ್ಷ ಅಶೋಕ ಹೊಸಮನಿ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ,ಸಂವಿಧಾನದ ಆಶಯಗಳು ಮತ್ತು ಮತದಾನದ ಮಹತ್ವದ ಕುರಿತು ಸಮಾವೇಶದಲ್ಲಿ ಜಾಗೃತಿ ಮೂಡಿಸಲಾಗುವುದು.ಸಮಾವೇಶದ ಸಾನಿಧ್ಯವನ್ನು ಮೈಸೂರಿನ ಉರಿಲಿಂಗ ಮಠದ ಜ್ಞಾನಪ್ರಕಾಶ ಸ್ವಾಮೀಜಿ ವಹಿಸಲಿದ್ದಾರೆ.ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕರು ಹಾಗೂ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳೆಯವರು ಉದ್ಘಾಟಿಸಲಿದ್ದಾರೆ,ಚಿತ್ತಾಪುರ ಶಾಸಕರಾದ ಪ್ರಿಯಾಂಕ್ ಖರ್ಗೆಯವರು ಜ್ಯೋತಿ ಬೆಳಗುವರು.

Contact Your\'s Advertisement; 9902492681

ಶಹಾಪುರ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದು,ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ,ಎಸ್ಪಿ ಡಾ:ಸಿ.ಬಿ ವೇದಮೂರ್ತಿ,ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ,ಮುಖಂಡರಾದ ದೇವಿಂದ್ರಪ್ಪಗೌಡ ಗೌಡಗೇರಿ,ಹಣಮೇಗೌಡ ಬೀರನಕಲ್,ಸಿದ್ದಣಗೌಡ ಪೊಲೀಸ್ ಪಾಟೀಲ್,ಡಾ:ಭೀಮಣ್ಣ ಮೇಟಿ,ತಿಮ್ಮಯ್ಯ ಪುರ್ಲೆ,ಬಸಣಗೌಡ ಯಾಳಗಿ,ರಂಗನಾಥ ಗುಂಡಗುರ್ತಿ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ,ಅಧ್ಯಕ್ಷತೆಯನ್ನು ದಲಿತ ಸೇನೆ ಜಿಲ್ಲಾಧ್ಯಕ್ಷ ಅಶೋಕ ಹೊಸಮನಿ ವಹಿಸಲಿದ್ದಾರೆ ಮತ್ತು ಸಿದ್ಧಾರ್ಥ ಕಲಾ ತಂಡ ಕಲಬುರ್ಗಿ ವತಿಯಿಂದ ಕ್ರಾಂತಿ ಗೀತೆಗಳ ಗಾಯನ ನಡೆಯಲಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಬುದ್ಧ ಬಸವ ಅಂಬೇಡ್ಕರ್ ಅಭಿಮಾನಿಗಳು ಹಾಗೂ ಸತೀಶ ಜಾರಕಿಹೊಳೆಯವರು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.ಇದೇ ಸಂದರ್ಭದಲ್ಲಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಣ್ಣ ಗೋನಾಲ,ಮುಖಂಡರಾದ ಹುಲಗಪ್ಪ ದೇವತ್ಕಲ್,ಮರಿಲಿಂಗ ಗುಡಿಮನಿ,ಶರಣಪ್ಪ ಬೋನಾಳ ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here