ಬೆಂಗಳೂರು: ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ನೀಡುತ್ತೇನೆ. ಜತೆಗೆ ಚಿತ್ತಾಪುರದಲ್ಲಿ ಬಿಜೆಪಿ ಹೇಳಹೆಸರಿಲ್ಲದಂತೆ ಮಾಡುತ್ತೇವೆ ಎಂದು ವಿಧಾನ ಪರಿಷತ್ತಿನ ಬಿಜೆಪಿ ಮಾಜಿ ಸದಸ್ಯ ಬಾಬುರಾವ್ ಚಿಂಚನಸೂರು ಹೇಳಿದ್ದಾರೆ.
ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಬಳಿಕ ಅವರು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ನಾನು ಅವಕಾಶವಾದಿ ರಾಜಕಾರಣ ಮಾಡುವ ಅಗತ್ಯವಿಲ್ಲ. ನನಗೆ ತಂದೆ, ತಾಯಿ, ಮಕ್ಕಳಿಲ್ಲ. ನಾನು ಮತ್ತು ನನ್ನ ಪತ್ನಿ ಮಾತ್ರ ಇದ್ದೇವೆ. ಸುಮಾರು 30 ವರ್ಷಗಳಿಂಗ ಜನರ ಸೇವೆ ಮಾಡಿಕೊಂಡು ಬಂದಿದ್ದೇನೆ. ಪಕ್ಷಕ್ಕೆ ದುಡಿದಿದ್ದೇನೆ ಎಂದರು.
ನಿಮ್ಮ ಜತೆ ಬಿಜೆಪಿ ಸೇರಿದ್ದವರನ್ನು ಕರೆ ತರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಅವರು, “2023 ರ ಚುನಾವಣೆಯಲ್ಲಿ ಯಾರು ಎಲ್ಲಿರುತ್ತಾರೆ ಎಂದು ಎಲ್ಲರಿಗೂ ತಿಳಿಯಲಿದೆ ಎಂದರು.
ಇನ್ನೂ, ಖರ್ಗೆ ಅವರ ಮೇಲೆ ಕೋಪಗೊಂಡು ನೀವು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ್ದಿರಿ ಎಂದು ಚಿಂಚನಸೂರು ಅವರನ್ನು ಕೇಳಿದಾಗ, ತಂದೆ ಮಗನ ಜಗಳ ಇದ್ದೇ ಇರುತ್ತದೆ. ಅದು ಈಗ ಸರಿ ಹೋಗಿದೆ ಎಂದು ಉತ್ತರಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…