ಕಲಬುರಗಿ: ಇಲ್ಲಿನ ಶ್ರೀ ಸಿದ್ಧಲಿಂಗೇಶ್ವರ ಬುಕ್ ಡಿಪೋ ಮತ್ತು ಪ್ರಕಾಶನ, ಶ್ರೀ ಸಿದ್ಧಲಿಂಗೇಶ್ವರ ಪ್ರಕಾಶನ ಹಾಗೂ ಬಸವ ಪ್ರಕಾಶನದ 46ನೇ ವಾರ್ಷಿಕೋತ್ಸವ ಹಾಗೂ 117 ಲೋಕಾರ್ಪಣೆ ಸಮಾರಂಭ ಜರುಗಲಿದೆ ಎಂದು ಪ್ರಕಾಶಕ ಬಸವರಾಜ ಕೋನೇಕ್ ತಿಳಿಸಿದರು.
ನಗರದ ಚೇಂಬರ್ ಆಪ್ ಕಾಮರ್ಸ್ ಸಭಾಂಗಣದಲ್ಲಿ ಅಂದು ಬೆಳಗ್ಗೆ 10.30ಕ್ಕೆ ನಡೆಯಲಿರುವ ಈ ಸಮಾರಂಭದ ಸಾನ್ನಿಧ್ಯವನ್ನು ಬಡದಾಳ ತೇರಿನ ಮಠದ ಡಾ. ಚನ್ನಮಲ್ಲ ಶಿವಯೋಗಿ ಶಿವಾಚಾರ್ಯರು ವಹಿಸಲಿದ್ದಾರೆ.
ಸಿಯುಕೆ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಉದ್ಘಾಟಿಸಲಿದ್ದಾರೆ. ಪುಸ್ತಕ ಲೋಕಾರ್ಪಣೆಯನ್ನು ಸಾಹಿತಿ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಮಾಡಲಿದ್ದಾರೆ. ಹಿರಿಯ ಪತ್ರಕರ್ತ ರವೀಂದ್ರ ಭಟ್ ಗುಲ್ಬರ್ಗ ವಿವಿ ಕುಲಸಚಿವ ಡಾ. ಬಿ. ಶರಣಪ್ಪ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದೇ ವೇಳೆಯಲ್ಲಿ ವಿವಿಧ ಪ್ರಶಸ್ತಿ ಪಡೆದ ಪ್ರಕಾಶನ ಸಂಸ್ಥೆಯ ಸದಸ್ಯರನ್ನು ಸನ್ಮಾನಿಸಲಾಗುವುದು ಎಂದರು. ಶಿವರಾಜ ಪಾಟೀಲ, ಡಾ.ಸ್ವಾಮಿರಾವ ಕುಲಕರ್ಣಿ, ಡಾ. ಗವಿಸಿದ್ದಪ್ಪ ಪಾಟೀಲ, ಡಾ. ಚಿ.ಸಿ.ನಿಂಗಣ್ಣ, ಡಾ. ಶರಣಬಸವ ವಡ್ಡನಕೇರಿ ಇದ್ದರು.
ವಿಮರ್ಶೆ, ವಚನ, ದೃಶ್ಯಕಲೆ, ಚರಿತ್ರೆ, ಜೀವನ ಚರಿತ್ರೆ, ಸಂಪಾದನೆ ಸೇರಿದಂತೆ 77 ಸಾಹಿತ್ಯಕ ಕೃತಿಗಳು, ಉಳಿದಂತೆ 44 ಎನ್ ಇಪಿ ಪಠ್ಯಪುಸ್ತಕಗಳು ಬಿಡಗಡೆಯಾಗಲಿದ್ದು, ವ್ಯಾಪಾರದ ಜೊತೆಗೆ ವಿದ್ಯಾಸೇವೆ ಕೂಡ ಈ ಪ್ರಕಾಶನ ಸಂಸ್ಥೆ ವತಿಯಿಂದ ಮಾಡಲಾಗುತ್ತಿದೆ. – ಬಸವರಾಜ ಕೊನೇಕ್, ಕಲಬುರಗಿ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…