ಕಲಬುರಗಿ: ಮಾಜಿ ಸಚಿವ ಬಾಬುರಾವ ಚಿಂಚನಸೂರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವುದರಿಂದ ಪಕ್ಷಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ತಿಳಿಸಿದರು.
ಕೋಲಿ ಕಬ್ಬಲಿಗ ಸಮಾಜದ ಹೆಸರು ಹೇಳಿ ಮುಂದೆ ಬಂದಿರುವ ಚಿಂಚನಸೂರ ಎಂದಿಗೂ ಸಮಾಜಕ್ಕಾಗಿ ದುಡಿದಿಲ್ಲ. ಸಮಾಜವನ್ನು ತನ್ನ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.
ಕಾಂಗ್ರೆಸ್ ಪಕ್ಷದಿಂದ ಬೇಸತ್ತು ಬಿಜೆಪಿ ಸೇರಿದ್ದ ಚಿಂಚನಸೂರ ಅವರು ಪಕ್ಷ ಕೊಟ್ಟ ಎಲ್ಲ ಅಧಿಕಾರವನ್ನು ಬಳಸಿಕೊಂಡು ಈಗ ಪಕ್ಷ ಬಿಟ್ಟಿರುವುದು ಪಕ್ಷಕ್ಕೆ ದ್ರೋಹ ಮಾಡಿದಂತಾಗಿದೆ. ಕಾಂಗ್ರೆಸ್ ನಲ್ಲಿ ಅವರು ಮೂಲೆಗುಂಪಾಗಲಿದ್ದಾರೆ ಎಂದು ಹೇಳಿದರು.
ಬಿಜೆಪಿ ಬಿಡುವುದಿಲ್ಲ; ಕಾಂಗ್ರೆಸ್ ಗೆ ಹೋಗುವುದಿಲ್ಲ: ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದ ಕಲಬುರಗಿಯ ಕೋಟೆಯನ್ನು ಒಡೆಯುವುದಕ್ಕಾಗಿಯೇ ಬಿಜೆಪಿ ಸೇರಿರುವ ನಾನು, ಬಿಜೆಪಿಗೆ ಹೋಗುವ ಪ್ರಮೇಯವೇ ಬರುವುದಿಲ್ಲ. ಹೀಗಾಗಿ ಬಿಜೆಪಿ ಬಿಡುವುದಿಲ್ಲ. ಕಾಂಗ್ರೆಸ್ ಗೆ ಹೋಗುವುದಿಲ್ಲ ಎಂದು ಊಹಾಪೋಹಗಳಿಗೆ ತೆರೆ ಎಳೆದರು. ಮುಖಂಡರಾದ ಶಿವಕಾಂತ ಮಹಾಜನ, ಶೋಭಾ ಬಾಣಿ, ವಿಜಯಕುಮಾರ ಹಲಕರ್ಟಿ ಇದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…