ಬಿಸಿ ಬಿಸಿ ಸುದ್ದಿ

ಯುಸಿಎಮ್ ಎಸ್ ನ ತಾಂತ್ರಿಕ ಸಮಸ್ಯೆ ಬಗೆರಿಹಸಲು ಒತ್ತಾಯಿಸಿ ಪ್ರತಿಭಟನೆ

ಕಲಬುರಗಿ: ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಮಹಾವಿದ್ಯಾಲಯದ ¥ಥಮ್ರ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಘೋಷಣೆಯು ಯುಯುಸಿಎಮ್ ಎಸ್ ನ ತಾಂತ್ರಿಕ ಸಮಸ್ಯಯಿಂದ ಆಗುತ್ತಿರುವ ವಿಳಂಬವನ್ನು ಬಗೆರಿಹಸಲು ಆಗ್ರಹಿಸಿ ಪ್ರತಿಭಟನೆ.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದರುಗಡೆ ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಮಹಾವಿದ್ಯಾಲಯದ ¥ಥಮ್ರ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಘೋಷಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಬಗೆರಿಹಸಲು ಆಗ್ರಹಿಸಿ ಪ್ರತಿಭಟನೆ ಮಾಡಲಾಯಿತು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‍ಓ ಜಿಲ್ಲಾ ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ ಮಾತನಾಡುತ್ತ ಸರಕಾರಿ ಪ್ರಥಮ ದರ್ಜೆ ಮಹಿಳಾ ಪದವಿ ಮಹಾವಿದ್ಯಾಲಯ ವಿದ್ಯಾರ್ಥಿಗಳ ಬಿ.ಎ, ಬಿ.ಎಸಿ, ಬಿ.ಕಾಂ ಬಿ.ಬಿ.ಎ ಪ್ರಥಮ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶವು ಇಲ್ಲಿಯವರೆಗೂ ಘೋಷಣೆ ಮಾಡದಿರುವುದು ವಿಶ್ವವಿದ್ಯಾಲಯದ ಅತ್ಯಂತ ಬೇಜವಾಬ್ದಾರಿತನವಾಗಿದೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದುವರದೆ ಅವರು ಪರೀಕ್ಷೆ ಮುಗಿದು ಒಂದು ವರ್ಷ ಕಳೆದಿದೆ, ಎರಡನೇ ಸೇಮಿಸ್ಟರ್ ಪರೀಕ್ಷ ಮಗಿಸಿ ಇಗ ಇದೇ ಮಾರ್ಚ್ 27ರಿಂದ 3ನೇ ಸೆಮಿಸ್ಟರ್ ಪರೀಕ್ಷೆಗಳ ದಿನಾಂಕ ಕೂಡ ಘೋಷಣೆ ಆಗಿದೆ. ಮಹಿಳಾ ವಿಶ್ವ ವಿದ್ಯಾಲಯವು ಇಲ್ಲಿವರೆಗೂ ಯಾವುದೇ ಪರೀಕ್ಷೆಗಳ ಫಲಿತಾಂಶ ಬಿಡದೆ ವಿದ್ಯಾರ್ಥಿಗಳ ಭವಿಷ್ಯದ ಜೋತೆ ಚಲ್ಲಾಟವಾಡುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಫಲಿತಾಂಶ ಕುರಿತು ಆತಂಕಕ್ಕೆ ಒಳಗಾಗಿದ್ದು ಈ ಕೂಡಲೇ ಫಲಿತಾಂಶ ವನ್ನು ಘೋಷಣೆ ಮಾಡಬೇಕು ಹಾಗೂ 3ನೇ ಸೆಮಿಸ್ಟರ್ ಪರೀಕ್ಷೆ ಗೆ ಸರಿಯಾದ ಕಾಲಾವಕಾಶ ನೀಡಬೇಕೆಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್ ಕೆ ಜಿಲ್ಲಾ ಸಮಿತಿ ಸದಸ್ಯರಾದ ಪ್ರೀತಿ ದೊಡ್ಡಮನಿ ಯುವರಾಜ, ಪೂಜಾ ವಿದ್ಯಾರ್ಥಿಗಳಾದ ಮೇಧಿನಿ, ನೇತ್ರಾವತಿ, ಅಕ್ಷತಾ, ಅಶ್ವಿನಿ, ತ್ರೀವೇಣಿ, ಲಕ್ಷ್ಮಿ, ಮಹಾದೇವಿ, ಭಾಗ್ಯಶ್ರೀ, ನಿಕಿತಾ, ಸೇರಿ ಹಲವಾರು ವಿದ್ಯಾರ್ಥಿಗಳು ಭಗವಹಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

20 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago