ಬಿಸಿ ಬಿಸಿ ಸುದ್ದಿ

ಕಲಬುರಗಿ; ಮಾರ್ಚ್ 28 ರಂದು ನೇರ ಸಂದರ್ಶನ

ಕಲಬುರಗಿ; ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಮಾರ್ಚ್ 28 ರಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ. ಕಲಬುರಗಿಯ ಎಸ್.ಬಿ.ಐ ಲೈಫ್ ಇನ್ಸುರೆನ್ಸ್‍ದಲ್ಲಿ ಯೂನಿಟ್ ಮ್ಯಾನೇಜರ್ ಹುದ್ದೆಗೆ ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 25 ರಿಂದ 35 ವರ್ಷದೊಳಗಿರಬೇಕು. ಲೈಫ್ ಮಿತ್ರಾ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ 30 ರಿಂದ 60 ವರ್ಷದೊಳಗಿರಬೇಕು. ಮಠ ಮಲ್ಟಿ ಮೈಂಡ್ಸ್‍ದಲ್ಲಿ ಟೇಲಿ ಕಾಲರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಎ.ಬಿ. ಪವರ್ ಸಿಸ್ಟಮ್‍ದಲ್ಲಿ ಎಫ್.ಎಸ್.ಇ. ಕೋ-ಆರ್ಡಿನೇಟರ್ ಹುದ್ದೆಗೆ ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು. ಎಫ್.ಎಸ್.ಇ. (ಫೀಲ್ಡ್ ಸರ್ವೀಸ್ ಇಂಜಿನಿಯರಿಂಗ್) ಹುದ್ದೆಗೆ ಐ.ಟಿ.ಐ. (ಎಲ್ಲಾ ಟ್ರೇಡ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆÀಟಾ), ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಮೇಲ್ಕಂಡ ದಿನದಂದ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಮತ್ತು ಸಾಮಾಜಿಕ ಅಂತರ ಕಾಯ್ದಕೊಳ್ಳಬೇಕು.

ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

3 mins ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

5 mins ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

10 mins ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

13 mins ago

ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಬೇಡಿ

ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…

15 mins ago

ಸೇಡಂ: `ಅಮ್ಮ ಪ್ರಶಸ್ತಿ’ ಪ್ರದಾನ ಸಮಾರಂಭ ನಾಳೆ

ಸೇಡಂ (ಕಲಬುರಗಿ);  ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…

37 mins ago